Featured

ಲೋಕಸಭ ಅಧಿವೇಶನದಲ್ಲಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇ ವಿಸ್ತರಿಸುವ ಬಗ್ಗೆ ಪ್ರಸ್ತಾಪಿಸಿದ ಸಂಸದ ನಳಿನ್ ಕುಮಾರ್ ಕಟೀಲ್ -Vishwanews24

ನವದೆಹಲಿ  : ಇಂದು ಲೋಕಸಭಾ ಅಧಿವೇಶನದ ಶೂನ್ಯವೇಳೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ಶ್ರೀ ನಳಿನ್ ಕುಮಾರ್ ಕಟೀಲ್ ಇವರು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ರನ್-ವೇಯನ್ನು ವಿಸ್ತರಿಸುವ ವಿಚಾರದ ಬಗ್ಗೆ ಪ್ರಸ್ತಾಪಿಸಿದರು.

ಮಂಗಳೂರು ವಿಮಾನ ನಿಲ್ದಾಣದಲ್ಲಿ ದಿನಾಂಕ 30-6-2019 ಭಾನುವಾರ ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನವು ತನ್ನ ಲಯವನ್ನು ತಪ್ಪಿ ರನ್-ವೇಯಿಂದ ಹೊರಗಡೆ ಜಾರಿ ಸಂಭವನೀಯ ಭಾರಿ ಅನಾಹುತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ.

ವಿಮಾನ ಇನ್ನೂ 20 ಅಡಿ ಮುಂದಕ್ಕೆ ಚಲಿಸಿದ್ದರೆ, ಈ ಹಿಂದೆ 2010ರ ಮೇ 22ರಂದು ದುಬೈ ನಿಂದ ಮಂಗಳೂರಿಗೆ ಆಗಮಿಸಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನವು ಕಿರಿದಾದ ರನ್- ವೇಯಿಂದಾಗಿ ನಿಯಂತ್ರಣ ಕಳೆದುಕೊಂಡು ಕಂದಕಕ್ಕೆ ಬಿದ್ದು ವಿಮಾನದಲ್ಲಿದ್ದ 158 ಪ್ರಯಾಣಿಕರು ಮೃತಪಟ್ಟಿದ್ದರು. ಇದಲ್ಲದೆ ಇದೇ ರೀತಿ 1981 ಆಗಸ್ಟ್ 19ರಂದು ಇಂಡಿಯನ್ ಏರ್ ಲೈನ್ಸ್ ವಿಮಾನವು ರನ್-ವೇಯಿಂದ ಜಾರಿ ಕಂದಕದ ಸಮೀಪ ನಿಂತಿತ್ತು. ಈ ಎಲ್ಲಾ ದುರ್ಘಟನೆಗಳಿಗೆ ಮಂಗಳೂರು ವಿಮಾನ ನಿಲ್ದಾಣದ ಕಿರಿದಾದ ರನ್ ವೇ ಕಾರಣವಾಗಿರುತ್ತದೆ.

ಈ ಕೂಡಲೇ ಕೇಂದ್ರ ಸರಕಾರವು ಮಂಗಳೂರು ವಿಮಾನ ನಿಲ್ದಾಣದ ರನ್-ವೇ ವಿಸ್ತರಣೆ ಹಾಗೂ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಯ ಕುರಿತು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮವನ್ನು ತೆಗೆದುಕೊಳ್ಳುವಂತೆ ಹಾಗೂ ಈ ಘಟನೆಯ ಕುರಿತು ಸಮಗ್ರ ತನಿಖೆಯನ್ನು ಕೈಗೊಳ್ಳುವಂತೆ ಕೇಂದ್ರ ಸರಕಾರವನ್ನು ಸಂಸದರು ಆಗ್ರಹಿಸಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago