ಲೋಕಾಯುಕ್ತ ದಾಳಿ : ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ : ಸಿಎಂ ಬೊಮ್ಮಾಯಿ – Vishwanews24

Featured, ರಾಜ್ಯ ನ್ಯೂಸ್

ಲೋಕಾಯುಕ್ತ ದಾಳಿ : ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ : ಸಿಎಂ ಬೊಮ್ಮಾಯಿ – Vishwanews24

ಬೆಂಗಳೂರು: ಭ್ರಷ್ಟಾಚಾರ ಯಾರೇ ತಪ್ಪು ಮಾಡಿದ್ದರು, ಅವರಿಗೆ ಶಿಕ್ಷೆಯಾಗಲಿ, ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ, ನ್ಯಾಯಾಸಮ್ಮತವಾಗಿ ತನಿಖೆಯಾಗಲಿ ಅಂಥ ಸಿಎಂ ಬಸವರಾಜ ಬೊಮ್ಮಾಯಿವರು ತಿಳಿಸಿದರು.

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಕಚೇರಿ ಮತ್ತು ನಿವಾಸದ ಲೋಕಾಯುಕ್ತ ದಾಳಿ ವೇಳೆ ಕೋಟಿ ಕೋಟಿ ನಗದು ಸಿಕ್ಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ಲೊಕಾಯುಕ್ತ ದಾಳಿ : ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಕಚೇರಿ-ನಿವಾಸದಿಂದ ಬರೋಬ್ಬರಿ 6 ಕೋಟಿ ರೂ. ನಗದು ವಶ – Vishwanews24

ಶಾಸಕರ ಪುತ್ರನ ನಿವಾಸ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ, ನಾವು ಲೋಕಾಯುಕ್ತಕ್ಕೆ ಸಂಪೂರ್ಣ ಅಧಿಕಾರ ನೀಡಿದ್ದೇವೆ. ಎಸಿಬಿ ರಚಿಸಿ ಲೋಕಾಯುಕ್ತ ಹಲ್ಲು ಕೀಳುವ ಪ್ರಯತ್ನ ನಾವು ಮಾಡಿಲ್ಲ, ಅದನ್ನು ಮಾಡಿರುವುದು ಕಾಂಗ್ರೆಸ್. ಲೋಕಾಯುಕ್ತಕ್ಕೆ ಸಂಪೂರ್ಣ ಮುಕ್ತ ಅಧಿಕಾರ ನೀಡುವ ಮರು ಆದೇಶ ನೀಡಿ ಲೋಕಾಯುಕ್ತವನ್ನು ಮರುಸ್ಥಾಪಿಸಿದ್ದೇ ಬಿಜೆಪಿ ಸರ್ಕಾರ. ಲೋಕಾಯುಕ್ತ ಇರುವುದೇ ಇಂತಹ ಭ್ರಷ್ಟಾಚಾರ ನಿಗ್ರಹಕ್ಕೆ, ಅದು ಸರ್ವಸ್ವತಂತ್ರವಾಗಿದೆ. ಲೋಕಾಯುಕ್ತ ಮುಕ್ತವಾಗಿ ಸಮಗ್ರ ತನಿಖೆ ನಡೆಸಲಿ, ಮುಕ್ತವಾಗಿ ತನಿಖೆ ನಡೆದು ಹಣ ಯಾರಿಗೆ ಸೇರಿದೆ ಎನ್ನುವ ಮಾಹಿತಿ ಹೊರಗೆ ಬರಲಿ, ಸತ್ಯ ಜನರಿಗೆ ತಿಳಿದು ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ ಎಂದು ಹೇಳಿದ್ದಾರೆ.

ಹಿಂದೆ ಕಾಂಗ್ರೆಸ್ ಸರ್ಕಾರದ ಅಧಿಕಾರವಧಿಯಲ್ಲಿ ಇಂತಹ ಹತ್ತಾರು ಪ್ರಕರಣಗಳು ನಡೆದಿವೆ ಮತ್ತು ಅಲ್ಲಲ್ಲೇ ಮುಚ್ಚಿಹೋಗಿವೆ. ಇಂದು ಬಿಜೆಪಿ ವಿರುದ್ಧ ಇನ್ನಿಲ್ಲದ ಆರೋಪವನ್ನು ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ. ಅಂದು ಎಸಿಬಿ ರಚಿಸಿ ಇಂತಹ ಪ್ರಕರಣಗಳನ್ನು ಮುಚ್ಚಿಹಾಕಲು ಪ್ರಯತ್ನಿಸಿದ್ದೇ ಕಾಂಗ್ರೆಸ್ ನವರು, ಹೀಗಾಗಿ ಇಂದು ಬಿಜೆಪಿ ಬಗ್ಗೆ ಮಾತನಾಡುವ ನೈತಿಕ ಹಕ್ಕು ಅವರಿಗೆಲ್ಲಿದೆ ಎಂದು ಕೇಳಿದರು.

ಉಡುಪಿ: ಈಶಾನ್ಯ ರಾಜ್ಯದ ಬಿಜೆಪಿ ಫಲಿತಾಂಶ ನಮ್ಮೆಲ್ಲ ಕಾರ್ಯಕರ್ತರಿಗೆ ಸ್ಫೂರ್ತಿಯಾಗಿದೆ : ನಯನಾ ಗಣೇಶ್ – Vishwanews24

 

Leave a Reply