Featured

ಲೋಕ ಕಲ್ಯಾಣಾರ್ಥ ಮತ್ತು ಸಾನ್ನಿಧ್ಯ ವೃದ್ಧಿಗಾಗಿ ಕಾಪು ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನವದುರ್ಗಾ ಲೇಖನ ಯಜ್ಞ ಕಾರ್ಯಕ್ರಮ – vishwanews24

ಲೋಕ ಕಲ್ಯಾಣಾರ್ಥ ಮತ್ತು ಸಾನ್ನಿಧ್ಯ ವೃದ್ಧಿಗಾಗಿ ಕಾಪು ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನವದುರ್ಗಾ ಲೇಖನ ಯಜ್ಞ ಕಾರ್ಯಕ್ರಮ

ಕಾಪು: ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥ ಮತ್ತು ಸಾನ್ನಿಧ್ಯ ವೃದ್ಧಿಗಾಗಿ ನವದುರ್ಗೆಯರ ಹೆಸರಿನೊಂದಿಗೆ ಕಾಪುವಿನ ಅಮ್ಮನ ಹೆಸರನ್ನು ಬರೆಯುವ ನವದುರ್ಗಾ ಲೇಖನ ಯಜ್ಞ ಮಹಾಸಂಕಲಕ್ಕೆ ಶುಕ್ರವಾರ (ಅ.18) ನವ ದಂಪತಿಗಳಿಂದ ನವದುರ್ಗಾ ನಾಮಜಪ ಪಠಣಾರಂಭ ಕಾರ್ಯಕ್ರಮ ಜರುಗಿತು.

ಕ್ಷೇತ್ರದ ಪ್ರಧಾನ ತಂತ್ರಿ ವಿದ್ವಾನ್ ಕೆ.ಪಿ ಕುಮಾರ ಗುರು ತಂತ್ರಿ ನೇತೃತ್ವದಲ್ಲಿ, ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಉಪಸ್ಥಿತಿಯಲ್ಲಿ ಒಂಬತ್ತು ದಂಪತಿಗಳು ಏಕಕಾಲದಲ್ಲಿ ದೀಪ ಬೆಳಗಿ ಪುಷ್ಪಾರ್ಚನೆ ಯೊಂದಿಗೆ ನವದುರ್ಗಾ ನಾಮ ಜಪ ಪಠಣೆ ಪ್ರಾರಂಭಿಸಿದರು. ಪ್ರಾರ್ಥನೆ ನೆರವೇರಿಸಿ ಮಾತನಾಡಿದ ದೇವಳದ ತಂತ್ರಿ, ಶರನ್ನವರಾತ್ರಿ ಮಹೋ ತ್ಸವದ 9ನೇ ದಿನ ಮತ್ತು ಕ್ಷೇತ್ರದಲ್ಲಿ ವಾಗೀಶ್ವರಿ ಮಾತೆಗೆ ನಡೆಯುವ ಪೂಜೆಯಂದೇ ನವ ದಂಪತಿಗಳ ಜತೆಗೆ ಪದಾಧಿಕಾರಿಗಳು, ಸಿಬ್ಬಂದಿ ಮತ್ತು ಭಕ್ತರ ಸಮಕ್ಷಮದಲ್ಲಿ ನವದುರ್ಗಾ ನಾಮ ಜಪ ಪಠಣೆ ಮಾಡಲಾಗಿದೆ, ಅ.28ರ ವರೆಗೆ ನಿತ್ಯ ನಿರಂತರವಾಗಿ ತಾಯಿಯ ಹೆಸರನ್ನು ಪಠಣೆ ಮಾಡಿದರೆ, ಬರೆಯಲು ಅನುಕೂಲವಾಗುತ್ತದೆ ಎಂದರು.

ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯಾ, ಕೋಶಾಧಿಕಾರಿ ಮತ್ತು ದೇವಳದ ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಮಹಾದಾನಿಗಳು ಮತ್ತು ಆರ್ಗಾನಿಕ್ ಇಂಡಸ್ಟ್ರೀಸ್‌ ಆಡಳಿತ ನಿರ್ದೇಶಕ ಆನಂದ ಎಂ.ಶೆಟ್ಟಿ ತೋನ್ಸೆ, ಮುಂಬಯಿಯ ನ್ಯಾಯವಾದಿ ಮಹೇಶ್ ಕೋಟ್ಯಾನ್, ಸಾಯಿ ರಾಧಾ ಸಮೂಹ ಸಂಸ್ಥೆಯ ಆಡಳಿತ ನಿರ್ದೇಶಕ ಮನೋಹ‌ರ್ ಎಸ್. ಶೆಟ್ಟಿ, ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷ ಕೆ. ರಘುಪತಿ ಭಟ್, ಎಸ್‌ಕೆಎಫ್ ಸಂಸ್ಥೆಯ ಆಡಳಿತ ಆಚಾರ್ಯ ನಿರ್ದೇಶಕ ರಾಮಕೃಷ್ಣ ಮೂಡುಬಿದಿರೆ, ದೇವಸ್ಥಾನದ ಪ್ರಬಂಧಕ ಗೋವರ್ಧನ್ ಸೇರಿಗಾರ್ ಸಹಿತ 9 ಜನ ದಂಪತಿ ಸಮೇತರಾಗಿ ದೀಪ ಬೆಳಗಿಸಿ ನವದುರ್ಗಾ ನಾಮಜಪ ಪ್ರಾರಂಭಿಸಿದರು. ಉಪಾಧ್ಯಕ್ಷ ಮಾಧವ ಆರ್. ಪಾಲನ್, ನವದುರ್ಗಾ ಲೇಖನ ಯಜ್ಞ ಸಮಿತಿ ಕೋಶಾಧಿಕಾರಿ ಕೆ. ವಿಶ್ವನಾಥ್, ಆರ್ಥಿಕ ಸಮಿತಿ ಮುಖ್ಯ ಸಂಚಾಲಕ ರತ್ನಾಕರ ಹೆಗ್ಡೆ ಕಲ್ಯಾ ಬೀಡು ಮತ್ತು ರಮೇಶ್ ಶೆಟ್ಟಿ ಕಾಪು ಕೊಲ್ಯ ಉಪಸ್ಥಿತರಿದ್ದರು.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

2 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

2 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

2 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

2 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago