ಬೆಂಗಳೂರು: ನವನಿರ್ದೇಶಕಿ ವಿಸ್ಮಯ ಗೌಡ ವಿರುದ್ಧ ವಂಚನೆ ಆರೋಪ ಬಸವೇಶ್ವರನಗರ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
6.5 ಲಕ್ಷ ಸಾಲ ಪಡೆದು ಹಣ ನೀಡದೇ ವಿಸ್ಮಯ ಗೌಡ ವಂಚಿಸಿದ್ದಾರೆಂದು ಎಂದು ಹಿಮಾನ್ವಿ ಬಿಂದು ದೂರು ದಾಖಲಿಸಿದ್ದರು. ಸಾಲ ಮರಳಿಸುವಂತೆ ಕೇಳಿದಾಗ ಬೆದರಿಕೆ ಹಾಕಿದ್ದಾರೆ ಎಂದು ಹಿಮಾನ್ವಿ ದೂರು ದಾಖಲಿಸಿದ್ದಾರೆ. ನ್ಯಾಯಾಲಯದ ನಿರ್ದೇಶನದಂತೆ ಎಫ್‌ಐಆರ್ ದಾಖಲಿಸಲಾಗಿದೆ.
ದೂರಿನ ಸಾರಾಂಶದಂತೆ, 2019 ರಲ್ಲಿ ಸಾಮಾಜಿಕ ಜಾಲತಾಣದ ಮೂಲಕ ಹಿಮಾನ್ವಿಗೆ, ವಿಸ್ಮಯ ಗೌಡ ಪರಿಚಯವಾಗಿದ್ದರು. ತಾನು ಸಿನಿಮಾ ನಿರ್ದೇಶಕಿ ಹಾಗೂ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂ ನಲ್ಲಿ ಲೈಫ್ ಕೋಚರ್ ಆಗಿರುವುದಾಗಿ ಹೇಳಿಕೊಂಡಿದ್ದರು. ಪಿರ್ಯಾದುದಾರರು ಈಕೆಯ ಬಗ್ಗೆ ತಿಳಿದುಕೊಂಡು ಆರೋಪಿತೆಯ ಬಳಿ ಕೆಲವು ಬಾರಿ ಮ್ಯಾನಿಫೆಸ್ಟೇಶನ್ ಕ್ಲಾಸಸ್ ತೆಗೆದುಕೊಂಡಿದ್ದು ಆರೋಪಿತೆ ಕೆಲವು ಬಾರಿ ನಮ್ಮ ಕ್ಲಿನಿಕ್ಕೆ ಭೇಟಿ ನೀಡುತ್ತಿದ್ದು ಫೆಬ್ರವರಿ 2024 ರಲ್ಲಿ ವಿಸ್ಮಯಗೌಡ, ಹಿಮಾನ್ವಿ ಮನೆಗೆ ಭೇಟಿ ನೀಡಿದಾಗ ತನಗೆ ಹಣಕಾಸಿನ ತೊಂದರೆ ಇದ್ದು ಹಣ ನೀಡುವಂತೆ ಕೇಳಿಕೊಂಡಿದ್ದರು. ಆಗ ಹಿಮಾನ್ವಿ ಆರೋಪಿತೆಗೆ ತಮ್ಮ ತಾಯಿಯ ಖಾತೆಯಿಂದ ಪಡೆದ 5,00,000 ರೂ ಹಣವನ್ನು ಮತ್ತು ತನ್ನ ಉಳಿತಾಯ ಖಾತೆಯಲ್ಲಿದ್ದ 1,50,000 ರೂಗಳನ್ನು ಸೇರಿ ಒಟ್ಟು 6,50,000 ರೂ ಗಳನ್ನು ನೀಡಿದ್ದರು. ಆ ನಂತರ ಆರೋಪಿತೆ ಶ್ರೀಮತಿ ವಿಸ್ಮಯಗೌಡ ರವರು ಪೋಸ್ಟ್ ಡೆಟೆಡ್ ಚೆಕ್ ನಂ-080118 ರ ಮೂಲಕ 6,50,000 ರೂ ಗಳನ್ನು ವಿಸ್ಮಯ ಗೌಡ, ಹಿಮಾನ್ವಿಗೆ ನೀಡಿದ್ದರು.
ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ ಉಡುಪಿ: ನೂತನ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್…
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು…
ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ಯಕ್ಷಗಾನ ಕಲಾವಿದ ದಿನೇಶ್…
ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ ; ಜನಸೇವೆಯೇ ನಮ್ಮ ಬದ್ಧತೆ : ಕಾಂಗ್ರೆಸ್ ಟ್ವೀಟ್ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ…
ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಹೈಕಮಾಂಡ್ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂದು ಬ್ರೇಕ್‌ಫಾಸ್ಟ್…
DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…