ಬೆಂಗಳೂರು : ಉದ್ಯಮಿಗೆ ಚುನಾವಣಾ ಟಿಕೆಟ್ ಕೊಡಿಸುವುದಾಗಿ ಹೇಳಿ ಕೋಟ್ಯಾಂತರ ರೂ.ಪಡೆದು ವಂಚಿಸಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ಆರೋಪಿ ಚೈತ್ರಾ ಅವರಿಗೆ ಸಂಬಂಧಿಸಿದಂತೆ ಸುದ್ದಿ ಪ್ರಕಟ ಹಾಗೂ ಪ್ರಸಾರ ಮಾಡುವಾಗ ಕುಂದಾಪುರ ಹೆಸರು ಉಲ್ಲೇಖಿಸದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರುವಂತೆ ಕೋರಿ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯಕ್ಕೆ ವ್ಯಕ್ತಿಯೊಬ್ಬರು ದಾವೆ ಹೂಡಿದ್ದಾರೆ.
ಕುಂದಾಪುರ ಮೂಲದ ಗಣೇಶ್ ಶೆಟ್ಟಿ ಮೂಲ ದಾವೆ ಹೂಡಿದ್ದಾರೆ. ದಾವೆಯು ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ಕುಂದಾಪುರವು ಉಡುಪಿ ಜಿಲ್ಲೆಯ ಪ್ರಮುಖ ಪಟ್ಟಣವಾಗಿದೆ. ಕದಂಬರು, ಚಾಲುಕ್ಯ, ಹೊಯ್ಸಳ, ವಿಜಯನಗರ ಅರಸರು ಕುಂದಾಪುರ ಪಟ್ಟಣದ ಸಾಂಸ್ಕೃತಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ದಾವೆಯಲ್ಲಿ ವಿವರಿಸಲಾಗಿದೆ.
ವಂಚನೆ ಆರೋಪದಲ್ಲಿ ಚೈತ್ರಾ ಹಾಗೂ ಇತರೆ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಚೈತ್ರ ಸಹ ಕುಂದಾಪುರದ ಮೂಲದವರಾಗಿದ್ದಾರೆ. ಆದರೆ, ಈ ವಂಚನೆ ಪ್ರಕರಣಕ್ಕೆ ಮಾಧ್ಯಮಗಳು ಚೈತ್ರಾ ಹೆಸರು ಬಳುಸುವಾಗ ಕುಂದಾಪುರ ಎಂಬುದಾಗಿ ಉಲ್ಲೇಖಿಸುತ್ತಿವೆ. ಇದರಿಂದ ಕುಂದಾಪುರ ಪಟ್ಟಣದ ಹೆಸರು ಮತ್ತು ಘನತೆಗೆ ಧಕ್ಕೆಯಾಗುತ್ತಿದೆ.ಕುಂದಾಪುರ ಎಂದು ಉಲ್ಲೇಖಿಸಿ ಮಾಧ್ಯಮಗಳು ಸುದ್ದಿ ಪ್ರಕಟಿಸುವುದು ಅವಹೇಳನಕಾರಿಯಾಗಿದೆ ಎಂದು ದಾವೆಯಲ್ಲಿ ಆಕ್ಷೇಪಿಸಲಾಗಿದೆ.
ಚೈತ್ರಾ ಬಗ್ಗೆ ಸುದ್ದಿ ಪ್ರಸಾರ ಮಾಡುವಾಗ ಕುಂದಾಪುರ ಎಂದು ಉಲ್ಲೇಖಿಸದಂತೆ ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮಗಳಿಗೆ ನಿರ್ಬಂಧ ಮಾಡಬೇಕು. ಈಗಾಗಲೇ ಕುಂದಾಪುರ ಹೆಸರು ಉಲ್ಲೇಖಿಸಿ ಪ್ರಸಾರ ಮಾಡಿರುವ ಸುದ್ದಿ, ವೀಡಿಯೋ, ಲೇಖನ, ಪೋಸ್ಟ್, ಲಿಂಕ್‌ಗಳನ್ನು ಶಾಶ್ವತವಾಗಿ ತೆಗೆದುಹಾಕುವಂತೆ ಸೂಚಿಸಬೇಕು ಎಂದು ದಾವೆದಾರ ಕೋರಿದ್ದಾರೆ. ದಾವೆದಾರ ಪರ ವಕೀಲ ಪವನ ಚಂದ್ರ ಶೆಟ್ಟಿ ವಕಾಲತ್ತು ಹಾಕಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…