Featured

ವಂಚನೆ ಪ್ರಕರಣ : ಅನಿಲ್‌ ಅಂಬಾನಿಗೆ ಸೇರಿದ ಹಲವು ಕಂಪನಿಗಳ ಮೇಲೆ ED ದಾಳಿ – vishwanews24

ವಂಚನೆ ಪ್ರಕರಣ : ಅನಿಲ್‌ ಅಂಬಾನಿಗೆ ಸೇರಿದ ಹಲವು ಕಂಪನಿಗಳ ಮೇಲೆ ED ದಾಳಿ

ಮುಂಬೈ: ಯೆಸ್ ಬ್ಯಾಂಕ್‌ಗೆ 3,000 ಕೋಟಿ ಸಾಲ ವಂಚನೆ ಪ್ರಕರಣಕ್ಕೆ  ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯವು ಉದ್ಯಮಿ ಅನಿಲ್ ಅಂಬಾನಿ  ಮಾಲೀಕತ್ವದ ರಿಲಯನ್ಸ್ ಗ್ರೂಪ್​ಗೆ ಸೇರಿದ ಹಲವು ಕಂಪನಿಗಳ ಮೇಲೆ ದಾಳಿ ಮಾಡಿದೆ.

ಸುಮಾರು 35ಕ್ಕೂ ಹೆಚ್ಚು ಸ್ಥಳಗಳು, ರಿಲಯನ್ಸ್ ಅನಿಲ್ ಅಂಬಾನಿ ಗ್ರೂಪ್ (RAAGA)ನ 50 ಕಂಪನಿಗಳ ಮೇಲೆ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಇಡಿ ದಾಳಿ ನಡೆಸಿರುವುದಾಗಿ ರೆಡ್‌ಬಾಕ್ಸ್ ಗ್ಲೋಬಲ್ ಇಂಡಿಯಾ X ನಲ್ಲಿ ಪೋಸ್ಟ್ ಹಂಚಿಕೊಂಡಿದೆ.

ಯೆಸ್‌ ಬ್ಯಾಂಕ್‌ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ (ಸಿಬಿಐ) ದಾಖಲಿಸಿದ್ದ 2 ಎಫ್‌ಐಆರ್‌ಗಳನ್ನು ಆಧರಿಸಿ ಹಾಗೂ ಬ್ಯಾಂಕ್ ಆಫ್ ಬರೋಡಾ, ನ್ಯಾಷನಲ್ ಹೌಸಿಂಗ್ ಬ್ಯಾಂಕ್ ಮತ್ತಿತರ ಏಜೆನ್ಸಿಗಳಿಂದ ದೊರೆತ ಮಾಹಿತಿ ಆಧಾರದ ಮೇಲೆ ತೀವ್ರ ಶೋಧ ನಡೆಸುತ್ತಿದೆ. 25ಕ್ಕೂ ಹೆಚ್ಚು ಮಂದಿಯನ್ನೂ ವಿಚಾರಣೆಗೆ ಒಳಪಡಿಸಲಾಗಿದೆ.

2017 ಮತ್ತು 2019ರ ನಡುವೆ ರಿಲಯನ್ಸ್ ಅನಿಲ್ ಅಂಬಾನಿ ಗ್ರೂಪ್ ಅಡಿಯಲ್ಲಿರುವ ಸಂಸ್ಥೆಗಳಿಗೆ ಯೆಸ್‌ ಬ್ಯಾಂಕ್‌ 3,000 ಕೋಟಿ ರೂ. ಸಾಲ ನೀಡಿತ್ತು. ಆದ್ರೆ ಈ ಸಾಲದ ಹಣವನ್ನ ಗ್ರೂಪ್‌ನ ಇತರ ಶೆಲ್‌ ಕಂಪನಿಗಳಿಗೆ (ಬೇನಾಮಿ ಕಂಪನಿ) ಅಕ್ರಮವಾಗಿ ವರ್ಗಾವಣೆ ಮಾಡಲಾಗಿತ್ತು. ಈ ಮೂಲಕ ಬ್ಯಾಂಕ್‌ಗಳು, ಷೇರುದಾರರು, ಹೂಡಿಕೆದಾರರು ಮತ್ತು ಇತರ ಸಾರ್ವಜನಿಕ ಸಂಸ್ಥೆಗಳನ್ನ ವಂಚಿಸುವ ಮೂಲಕ ಸಾರ್ವಜನಿಕ ಹಣವನ್ನು ದುರ್ಬಳಕೆ ಮಾಡಿಕೊಂಡಿರುವುದಾಗಿ ಇಡಿ ಪತ್ತೆಹಚ್ಚಿದೆ. ಪ್ರಾಥಮಿಕ ತನಿಖೆಯಲ್ಲಿ ಇದಕ್ಕೆ ಸಾಕ್ಷ್ಯಾಧಾರಗಳೂ ಸಿಕ್ಕಿವೆ ಅಂತ ಇಡಿ ಹೇಳಿದೆ.

ಸಾಲ ಅನುಮೋದನೆ ವಿಚಾರದಲ್ಲಿ ಯೆಸ್ ಬ್ಯಾಂಕ್ ಪ್ರಕ್ರಿಯೆ ಅನುಮಾನಾಸ್ಪದವಾಗಿದೆ. ಸರಿಯಾದ ಹಣಕಾಸು ಸ್ಥಿತಿ ಇಲ್ಲದ ಕಂಪನಿಗಳು, ಸಾಮಾನ್ಯ ನಿರ್ದೇಶಕರಿರುವ ಕಂಪನಿಗಳಿಗೆ ಸಾಲ ಮಂಜೂರು ಮಾಡಲಾಗಿದೆ. ಸರಿಯಾಗಿ ಅವಲೋಕನ ಮಾಡುವ ಪ್ರಯತ್ನ ಆಗಿಲ್ಲ. ಸಾಲಕ್ಕೆ ಅನುಮೋದನೆ ಆಗುವ ಮುನ್ನವೇ ಅಥವಾ ಅದೇ ದಿನವೇ ಸಾಲದ ಹಣ ಬಿಡುಗಡೆ ಮಾಡಲಾಗಿದೆ ಎಂದು ಯೆಸ್ ಬ್ಯಾಂಕ್​ನ ವ್ಯವಸ್ಥೆಯಲ್ಲಿರುವ ಲೋಪಗಳನ್ನು ಇಡಿ ಎತ್ತಿ ತೋರಿಸಿದೆ. ಇಡಿ ನೀಡಿರುವ ಮಾಹಿತಿ ಪ್ರಕಾರ ರಿಲಯನ್ಸ್ ಗ್ರೂಪ್​ಗೆ ಸೇರಿದ 50 ಕಂಪನಿಗಳ ಮೇಲೆ ಇಡಿ ದಾಳಿ ನಡೆಸಿದ್ದು ಶೋಧ ಆರಂಭಿಸಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago