ಬೆಂಗಳೂರು: ವಿಧಾನಸಭೆ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ವಂಚಿಸಿರುವ ಆರೋಪ ಕೇಸ್‌ನ ಆರೋಪಿ ಚೈತ್ರಾ ಬುಧವಾರ (ಡಿ.6) ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಮೇನಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಕೊಡಿಸುವ ಭರವಸೆ ನೀಡಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಂದ 5 ಕೋಟಿ ರೂ. ಪಡೆದು ವಂಚಿಸಿದ ಆರೋಪದ ಮೇಲೆ ಸೆಪ್ಟೆಂಬರ್ 13 ರಂದು ಚೈತ್ರ ಅವರನ್ನು ಬಂಧಿಸಲಾಗಿತ್ತು.
ಹಿಂದೂಪರ ಸಂಘಟನೆಗಳಲ್ಲಿ ಗುರುತಿಸಿ ಕೊಂಡಿರುವ ಚೈತ್ರಾ ಸೇರಿದಂತೆ ಚಿಕ್ಕಮಗಳೂರು ಬಿಜೆಪಿ ಯುವ ಘಟಕದ ಪ್ರಧಾನ ಕಾರ‍್ಯದರ್ಶಿ ಗಗನ್ ಕಡೂರು, ರಮೇಶ್, ಪ್ರಜ್ವಲ್, ಧನರಾಜ್, ಶ್ರೀಕಾಂತ್, ಹಾಲಶ್ರೀ ಸ್ವಾಮೀಜಿ ಸೇರಿ 9 ಮಂದಿಯನ್ನು ಸಿಸಿಬಿ ತಂಡ, ಉಡುಪಿ ಹಾಗೂ ಇತರ ಕಡೆ ಕಾರ್ಯಾಚರಣೆ ನಡೆಸಿ ಬಂಧಿಸಿದ್ದರು.
ಆರಂಭದಲ್ಲಿ ಸೆಪ್ಟೆಂಬರ್ 23ರವರೆಗೆ ಸಿಸಿಬಿ ಕಸ್ಟಡಿಗೆ ಪಡೆದಿದ್ದರು. ಆ ಬಳಿಕ ಕೋರ್ಟ್ ಎರಡು ತಿಂಗಳು ನ್ಯಾಯಾಂಗ ಬಂಧನಕ್ಕೆ ಸೂಚಿಸಿತ್ತು. ಸೋಮವಾರ ಚೈತ್ರಾ ಹಾಗೂ 7ನೇ ಆರೋಪಿ ಶ್ರೀಕಾಂತ್ ಅವರಿಗೆ ಕೋರ್ಟ್‌ನಿಂದ ಬೇಲ್ ಸಿಕ್ಕಿತ್ತು. ಸದ್ಯ ಬಿಡುಗಡೆಯಾಗಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…