Featured

ವಂಚನೆ ಪ್ರಕರಣ : ಆರೋಪಿ ಚೈತ್ರಾ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ – vishwanews24

ವಂಚನೆ ಪ್ರಕರಣ : ಆರೋಪಿ ಚೈತ್ರಾ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಟಿಕೆಟ್‌ ಕೊಡಿಸುವುದಾಗಿ ಉದ್ಯಮಿಗೆ ವಂಚಿಸಿರುವ ಆರೋಪ ಕೇಸ್‌ನ ಆರೋಪಿ ಚೈತ್ರಾ ಬುಧವಾರ (ಡಿ.6) ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಮೇನಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್‌ ಕೊಡಿಸುವ ಭರವಸೆ ನೀಡಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಂದ 5 ಕೋಟಿ ರೂ. ಪಡೆದು ವಂಚಿಸಿದ ಆರೋಪದ ಮೇಲೆ ಸೆಪ್ಟೆಂಬರ್‌ 13 ರಂದು ಚೈತ್ರ ಅವರನ್ನು ಬಂಧಿಸಲಾಗಿತ್ತು.

ಹಿಂದೂಪರ ಸಂಘಟನೆಗಳಲ್ಲಿ ಗುರುತಿಸಿ ಕೊಂಡಿರುವ ಚೈತ್ರಾ ಸೇರಿದಂತೆ ಚಿಕ್ಕಮಗಳೂರು ಬಿಜೆಪಿ ಯುವ ಘಟಕದ ಪ್ರಧಾನ ಕಾರ‍್ಯದರ್ಶಿ ಗಗನ್‌ ಕಡೂರು, ರಮೇಶ್‌, ಪ್ರಜ್ವಲ್‌, ಧನರಾಜ್‌, ಶ್ರೀಕಾಂತ್‌, ಹಾಲಶ್ರೀ ಸ್ವಾಮೀಜಿ ಸೇರಿ 9 ಮಂದಿಯನ್ನು ಸಿಸಿಬಿ ತಂಡ, ಉಡುಪಿ ಹಾಗೂ ಇತರ ಕಡೆ ಕಾರ್ಯಾಚರಣೆ ನಡೆಸಿ ಬಂಧಿಸಿದ್ದರು.

ಆರಂಭದಲ್ಲಿ ಸೆಪ್ಟೆಂಬರ್‌ 23ರವರೆಗೆ ಸಿಸಿಬಿ ಕಸ್ಟಡಿಗೆ ಪಡೆದಿದ್ದರು. ಆ ಬಳಿಕ ಕೋರ್ಟ್‌ ಎರಡು ತಿಂಗಳು ನ್ಯಾಯಾಂಗ ಬಂಧನಕ್ಕೆ ಸೂಚಿಸಿತ್ತು. ಸೋಮವಾರ ಚೈತ್ರಾ ಹಾಗೂ 7ನೇ ಆರೋಪಿ ಶ್ರೀಕಾಂತ್‌ ಅವರಿಗೆ ಕೋರ್ಟ್‌ನಿಂದ ಬೇಲ್‌ ಸಿಕ್ಕಿತ್ತು. ಸದ್ಯ ಬಿಡುಗಡೆಯಾಗಿದ್ದಾರೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

20 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

20 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

20 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

20 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

20 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

21 hours ago