ಬೆಂಗಳೂರು : ಕಳೆದ ವಿಧಾನಸಭೆ ಚುನಾವಣೆ ವೇಳೆ ಬೈಂದೂರಿನ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ನೀಡುವುದಾಗಿ ಹೇಳಿ 5 ಕೋಟಿಗೂ ಅಧಿಕ ಹಣ ವಂಚನೆ ಮಾಡಿದ ಪ್ರಕರಣದಲ್ಲಿ ಜೈಲಿನಲ್ಲಿರುವ ಹಿಂದೂ ಕಾರ್ಯಕರ್ತೆ ಚೈತ್ರಾ ಗೆ ಜಾಮೀನು ದೊರಕಿದೆ.
ಟಿಕೆಟ್ ನೀಡುವುದಾಗಿ ವಂಚಿಸಿದ್ದಾರೆ ಎಂದು ಉದ್ಯಮಿ ಗೋವಿಂದಬಾಬು ಪೂಜಾರಿ ಸೆಪ್ಟೆಂಬರ್ 8ರಂದು ಬಂಡೇಪಾಳ್ಯ ಠಾಣೆಯಲ್ಲಿ ಚೈತ್ರಾ ಮತ್ತು ಇತರೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದರು. ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಆಗಿತ್ತು. ಬಳಿಕ ಕ್ಷೀಪ್ರ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು, ಚೈತ್ರಾ, ಗಗನ್ ಕಡೂರು, ಹೊಸಪೇಟೆಯ ಸ್ವಾಮೀಜಿ ಹಾಲಶ್ರೀ ಸ್ವಾಮೀಜಿ, ಚನ್ನನಾಯ್ಕ, ಧನರಾಜ್, ಶ್ರೀಕಾಂತ್, ಪ್ರಜ್ವಲ್ ಸೇರಿ 9 ಮಂದಿಯನ್ನು ಬಂಧಿಸಲಾಗಿತ್ತು. ಜೈಲು ಸೇರಿದ ಎರಡೂವರೆ ತಿಂಗಳ ಬಳಿಕ ಚೈತ್ರಾ ಹಾಗೂ ಆಕೆಯ ಸಹಚರ ಶ್ರೀಕಾಂತ್ ಅವರಿಗೆ ಜಾಮೀನು ಸಿಕ್ಕಿದೆ.
ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ವಂಚನೆ ಮಾಡಿದ ಪ್ರಕರಣದ ಆರೋಪಿಗಳಾದ ಚೈತ್ರಾ, ಶ್ರೀಕಾಂತ್ ಅವರಿಗೆ ಜಾಮೀನು ಮಂಜೂರು ಮಾಡುವಂತೆ ಬೆಂಗಳೂರಿನ 3ನೇ ಎಸಿಎಂಎಂ ಕೋರ್ಟ್ನಲ್ಲಿ ಚೈತ್ರಾ ಪರ ವಕೀಲ ಹರ್ಷ ಮುತಾಲಿಕ್ ಅವರು ವಾದ ಮಂಡಿಸಿದ್ದರು. ಇದನ್ನು ಆಲಿಸಿದ ನ್ಯಾಯಾಲಯವು ಚೈತ್ರಾ ಹಾಗೂ ಶ್ರೀಕಾಂತ್‌ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. 1 ಲಕ್ಷ ರೂ. ಬಾಂಡ್, ಇಬ್ಬರ ಶ್ಯೂರಿಟಿ, ಬೆಂಗಳೂರು ಬಿಟ್ಟು ತೆರಳಬಾರದು ಎಂದು ಆದೇಶವನ್ನು ಹೊರಡಿಸಲಾಗಿದೆ. ಜೊತೆಗೆ, ಸಾಕ್ಷಿಗಳ ನಾಶಕ್ಕೆ ಅಥವಾ ಆರೋಪಿಗಳ ವಿರುದ್ಧ ಇರುವ ಸಾಕ್ಷಿದಾರರ ಮೇಲೆ ಪ್ರಭಾವ ಬೀರದಂತೆ ಷರತ್ತು ಹಾಕಲಾಗಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…