Featured

ಇನ್ನೊಂದು ವಂಚನೆ ಪ್ರಕರಣದಲ್ಲಿ ವಿಚಾರಣೆಗೆ ಚೈತ್ರಾ ಕುಂದಾಪುರ ವಶಕ್ಕೆ ಪಡೆಯಲು ನ್ಯಾಯಾಲಯಕ್ಕೆ ಕೋಟ ಪೊಲೀಸರ ಅರ್ಜಿ – vishwanews24

ಇನ್ನೊಂದು ವಂಚನೆ ಪ್ರಕರಣದಲ್ಲಿ ವಿಚಾರಣೆಗೆ ಚೈತ್ರಾ ಕುಂದಾಪುರ ವಶಕ್ಕೆ ಪಡೆಯಲು ನ್ಯಾಯಾಲಯಕ್ಕೆ ಕೋಟ ಪೊಲೀಸರ ಅರ್ಜಿ

ಉಡುಪಿ : ಕೋಟ್ಯಾಂತರ ರೂಪಾಯಿ ವಂಚನೆಯ ಆರೋಪಿ ಚೈತ್ರಾ ಕುಂದಾಪುರ ವಿರುದ್ಧ ದಾಖಲಾಗಿರುವ ಇನ್ನೊಂದು ಪ್ರಕರಣದಲ್ಲಿ ಆಕೆಯ ವಿಚಾರಣೆಗೆ ತಮ್ಮ ವಶಕ್ಕೆ ನೀಡುವಂತೆ ಕೋಟ ಪೊಲೀಸರು ನ್ಯಾಯಾಲಯಕ್ಕೆ ಅರ್ಜಿ ಹಾಕಿದ್ದಾರೆ.

ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ 5 ಕೋಟಿ ರೂಪಾಯಿ ಗಳ ಪಂಗನಾಮ ಹಾಕಿದ ಚೈತ್ರಾ ಇದೀಗ ಬೆಂಗಳೂರು ಸಿಸಿಬಿ ಪೊಲೀಸರ ವಶದಲ್ಲಿದ್ದಾಳೆ. ಆಕೆ ಬ್ರಹ್ಮಾವರ ತಾಲೂಕಿನ ಕೋಡಿಕನ್ಯಾನದ ಯುವಕನಿಗೂ 5 ಲಕ್ಷ ರೂಪಾಯಿ ವಂಚಿಸಿದ ಇನ್ನೊಂದು ಪ್ರಕರಣ ದಾಖಲಾಗಿದ್ದು, ಇದರ ತನಿಖೆಗೆ ಕೋಟ ಠಾಣೆಯ ಪೊಲೀಸರಿಗೆ ಆಕೆ ಬೇಕಾಗಿದ್ದಾಳೆ, ಮೀನು ವ್ಯಾಪಾರ ಮಾಡಿಕೊಂಡಿದ್ದ ಸುದಿನ ಎಂಬಾತನಿಗೆ, ಕೇಸರಿ ಧ್ವಜ, ಬಟ್ಟೆಗಳ ಅಂಗಡಿ ಹಾಕಿಕೊಡುವುದಾಗಿ ನಂಬಿಸಿದ್ದ ಚೈತ್ರಾ ಆತನಿಂದ 2018ರಿ೦ದ 2022ರ ವರೆಗೆ ಹಂತ ಹಂತವಾಗಿ 5 ಲಕ್ಷ ರು. ನಡೆದಿದ್ದಳು ನಂತರ ಮೋಸ ಮಾಡಿದ್ದಾಳೆ, ಹಣ ಹಿಂದಕ್ಕೆ ಕೇಳಿದಾಗ ಜೀವ ಬೆದರಿಕೆ ಹಾಕಿದ್ದಳು ಎಂದು ಇದೀಗ ಸುದಿನ ಅವರು ಕೋಟ ಠಾಣೆಗೆ ದೂರು ನೀಡಿದ್ದಾರೆ.

ಪೊಲೀಸರು ಈ ದೂರಿನ ಹಿನ್ನೆಲೆಯಲ್ಲಿ ಕೋಟ ಠಾಣೆಯ ಪೊಲೀಸರು ಆಕೆಯ ವಿಚಾರಣೆಗೆ ತಮ್ಮ ವಶಕ್ಕೆ ಒಪ್ಪಿಸುವಂತೆ ಉಡುಪಿ ಜಿಲ್ಲಾ ನ್ಯಾಯಾಲಯದ ಮೂಲಕ ಬೆಂಗಳೂರು ಒಂದನೇ ಮುಖ್ಯ ಅಪರ ಮುಖ್ಯ ದಂಡಾಧಿಕಾರಿಗಳ ನ್ಯಾಯಾಲಯಕ್ಕೆ ಬಾಡಿ ವಾರಂಟ್ ಅರ್ಜಿ ಸಲ್ಲಿಸಿದ್ದಾರೆ. ಆದರೆ, ನ್ಯಾಯಾಲಯ ಈಗಾಗಲೇ ಸೆಪ್ಟೆಂಬರ್ 23ರ ವರೆಗೆ ಆಕೆಯನ್ನು ಸಿಸಿಬಿ ಪೊಲೀಸರ ವಶಕ್ಕೆ ನೀಡಿದ್ದು, ಪ್ರಸ್ತುತ ಪೊಲೀಸರಿಂದ ಚೈತ್ರಾಳ ವಿಚಾರಣೆ ಪೂರ್ಣಗೊಂಡಿಲ್ಲ. ಆದ್ದರಿಂದ ಕೋಟ ಠಾಣೆಯ ಪೊಲೀಸರು 23ರಂದು ನ್ಯಾಯಾಲಯ ಆದೇಶಕ್ಕೆ ಕಾಯಬೇಕಾಗಿದೆ.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

2 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

2 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

2 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

2 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago