ವಂಚನೆ ಪ್ರಕರಣ : ಚೈತ್ರಾ ಸೇರಿ 9 ಮಂದಿ ಆರೋಪಿಗಳ ವಿರುದ್ದ ಚಾರ್ಜ್‌ಶೀಟ್ ಸಲ್ಲಿಕೆ
ಬೆಂಗಳೂರು : ಟಿಕೆಟ್ಗೆ ಆಮಿಷವೊಡ್ಡಿ ಉದ್ಯಮಿಯಿಂದ 5 ಕೋಟಿ ಹಣ ಪಡೆದು ವಂಚನೆ ಮಾಡಿದ್ದ ಚೈತ್ರಾ ವಂಚನೆ ಪ್ರಕರಣ ಸಂಬಂಧ 1ನೇ ಎಸಿಎಂಎಂ ನ್ಯಾಯಾಲಯಕ್ಕೆ 9 ಆರೋಪಿಗಳ ವಿರುದ್ಧ ಸಿಸಿಬಿ ಅಧಿಕಾರಿಗಳು ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ.
ಚೈತ್ರಾ, ಹಾಲಶ್ರೀ ಸೇರಿ 9 ಮಂದಿ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. ಸಿಸಿಬಿ ಅಧಿಕಾರಿಗಳು 75 ಮಂದಿ ಸಾಕ್ಷಿಗಳ ಹೇಳಿಕೆ ದಾಖಲಿಸಿಕೊಂಡು ಸುಮಾರು 800 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಡಿಜಿಟಲ್ ಸಾಕ್ಷಿಗಳು, ಬ್ಯಾಂಕ್ ಸ್ಟೇಟ್ ಮೆಂಟ್ಗಳು, ಸಾಂದರ್ಭಿಕ ಸಾಕ್ಷಿಗಳು, ಸ್ವಾಮಿಜಿ ಕಾರು ಚಾಲಕ ಹಣ ಇಟ್ಟು ಹೋಗಿದ್ದ ಬಗ್ಗೆ ಸೇರಿದಂತೆ ಸ್ಪಾಟ್ ಮಹಜರ್ ನಡೆಸಿ ಹಣ ಸೀಜ್ ಮಾಡಿದ ಸ್ಥಳಗಳ ಬಗ್ಗೆ ಸಿಸಿಬಿ ಪೊಲೀಸರು ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಿದ್ದಾರೆ.
ಅಲ್ಲದೇ ಚೈತ್ರಾ ವಂಚನೆ ಪ್ರಕರಣದಲ್ಲಿ ಬರೋಬ್ಬರಿ 4 ಕೋಟಿ 11 ಲಕ್ಷ ರೂಪಾಯಿ ರಿಕವರಿ ಮಾಡಲಾಗಿದೆ. ಪ್ರಮುಖ ಆರೋಪಿ ಚೈತ್ರಾ, ಶ್ರೀಕಾಂತ್, ಗಗನ್ ಕಡೂರ್, ಹಾಲಶ್ರೀ, ಧನರಾಜ್ ಸೇರಿದಂತೆ 9 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.
ದೂರುದಾರ ಗೋವಿಂದ ಬಾಬು ಪೂಜಾರಿ ಬಳಿ ಎಲ್ಲಾ ಆಡಿಯೋ, ವಿಡಿಯೋವನ್ನು ಸಿಸಿಬಿ ಪೊಲೀಸರು ಪಡೆದಿದ್ದಾರೆ. ಗೋವಿಂದ ಪೂಜಾರಿ ಬಳಿಯೇ ಡೀಲ್ ಸಂಬಂಧ 10 ವಿಡಿಯೋ ಪಡೆಯಲಾಗಿದೆ. ಆರೋಪಿಗಳ ಮೊಬೈಲ್ ಗಳ ಡೇಟಾ ರಿಟ್ರೀವ್ ವರದಿ ಕೂಡ ಉಲ್ಲೇಖಿಸಲಾಗಿದೆ. ಆರೋಪಿಗಳ ಮೊಬೈಲ್ ಚಾಟ್, ಕರೆಗಳ ಸಂಬಂಧ ಡೇಟಾ ರಿಟ್ರೀವ್ ಮಾಡಿ ವರದಿ ಸಲ್ಲಿಸಲಾಗಿದೆ. ಸದ್ಯ ಚೈತ್ರಾ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…