ಮಂಗಳೂರು, : ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಮತ್ತು ರೋಟರ್ಯಾಕ್ಟ್ ಕ್ಲಬ್ ಮಂಗಳೂರು ಸಿಟಿ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಮಟ್ಟದ ವಾರ್ಷಿಕ ಪ್ರತಿಷ್ಠಿತ ‘ವಂದನಾ ಪ್ರಶಸ್ತಿ’ಗೆ ಈ ಬಾರಿ ನಟರಾದ ದೇವದಾಸ್ ಕಾಪಿಕಾಡ್ ಹಾಗೂ ನವೀನ್ ಡಿ. ಪಡೀಲ್ ಅವರನ್ನು ಆಯ್ಕೆ ಮಾಡಲಾಗಿದೆ. ಎ.21ರಂದು ರಾತ್ರಿ 8ಕ್ಕೆ ನಗರದ ಹೋಟೆಲ್ ಕುಡ್ಲ ಸಭಾಂಗಣದಲ್ಲಿ ಜರುಗುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು ಎಂದು ವಂದನಾ ಪ್ರಶಸ್ತಿ ಆಯ್ಕೆ ಸಮಿತಿಯ ಸಭಾಪತಿ ರೊ.ಡಾ.ಬಿ.ದೇವದಾಸ್ ರೈ ತಿಳಿಸಿದರು.
ಮನಪಾ ಮೇಯರ್ ಕೆ. ಭಾಸ್ಕರ ಮೊಯ್ಲಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ರೋಟರಿ ಮಂಗಳೂರು ಸೆಂಟ್ರಲ್ ಅಧ್ಯಕ್ಷ ರೈಮಂಡ್ ಡಿಕುನ್ಹಾ ಅಧ್ಯಕ್ಷತೆ ವಹಿಸಲಿದ್ದಾರೆ. ರೋ. ಅನಿಲ್ ಗೊನ್ಸಾಲ್ವಿಸ್, ರೊ.ಜಾಕ್ಸನ್ ಸಲ್ಡಾನಾ, ಪವಿತ್ರಾ ಆಚಾರ್ಯ ಭಾಗವಹಿಸಲಿದ್ದಾರೆ ಎಂದರು.
ರೊಟರಿ ಮತ್ತು ರೋಟರ್ಯಾಕ್ಟ್ ಸಂಸ್ಥೆಯ ವಂದನಾ ಪ್ರಶಸ್ತಿಯನ್ನು ಪ್ರತಿ ವರ್ಷ ಕ್ರೀಡೆ, ವಾಣಿಜೋದ್ಯಮ, ಶಿಕ್ಷಣ , ಕಲೆ, ಸಂಗೀತ, ಸಾಹಿತ್ಯ, ವೃತ್ತಿ ಸೇವೆ ಮತ್ತು ಸಮಾಜ ಸೇವೆ ಕ್ಷೇತ್ರಗಳಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿಕೊಂಡು ಸಾಧಕರನ್ನು ಆಯ್ಕೆ ಮಾಡಲಾಗುತ್ತದೆ ಎಂದರು.
ಮಲ್ಪೆ : ಸೈಂಟ್‌ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…