ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

Featured, ದಕ್ಷಿಣ ಕನ್ನಡ, ರಾಜ್ಯ ನ್ಯೂಸ್

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು 

ಪುತ್ತೂರು: ಹಲವು ದಿನಗಳಿಂದ ಸಕಲೇಶಪುರ – ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣಗಳ ನಡುವೆ ಪ್ರಾಯೋಗಿಕ ಸಂಚಾರ ನಡೆಸಿದ್ದ ವಂದೇ ಭಾರತ್ ರೈಲು, ಗುರುವಾರ ರಾತ್ರಿ ಸುಬ್ರಹ್ಮಣ್ಯ ರೋಡ್ ನಿಲ್ದಾಣ ದಾಟಿ ಪುತ್ತೂರು ರೈಲು ನಿಲ್ದಾಣದ ಮೂಲಕ ಮಂಗಳೂರು ತೆರಳುವ ಮೂಲಕ ಪ್ರಾಯೋಗಿಕ ಪರೀಕ್ಷೆ ಪೂರ್ಣಗೊಂಡಿದೆ.

ಘಾಟಿ ಭಾಗದಲ್ಲಿ ವಂದೇ ಭಾರತ್ ಸಂಚಾರ ಹಲವು ಸವಾಲುಗಳಿಂದ ಕೂಡಿರುವ ಹಿನ್ನೆಲೆಯಲ್ಲಿ ಪ್ರಾಯೋಗಿಕ ಸಂಚಾರಗಳು ನಡೆದು ಅದರ ಮುಂದಿನ ಭಾಗದ ಸಂಚಾರ ನಡೆಸಲಾಯಿತು. ಈಗಾಗಲೇ ಪ್ರಾಯೋಗಿಕ ಪರೀಕ್ಷೆಯಲ್ಲಿ ರೈಲ್ವೇ ಅಧಿಕಾರಿಗಳು ಹಳಿಯಲ್ಲಿರುವ ತಾಂತ್ರಿಕ ಅಂಶಗಳ ಕುರಿತು ಅಧ್ಯಯನ ನಡೆಸಿದ್ದು, ಸಮಸ್ಯೆಗಳಿದ್ದಲ್ಲಿ ಮುಂದಿನ ದಿನಗಳಲ್ಲಿ ಸರಿಪಡಿಸುವ ಕಾರ್ಯ ಮಾಡಲಿದೆ.

ಉಡುಪಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಹಲ್ಲೆ ಪ್ರಕರಣ: ಆರೋಪಿ ವೈದ್ಯನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಎಸ್ಪಿ, ಡಿಎಚ್‌ಓಗೆ ಮನವಿ – vishwanews24

 

ಮಂಗಳೂರು- ಸಕಲೇಶಪುರ ರೈಲು ಮಾರ್ಗವು ವಂದೇ ಭಾರತ್ ರೈಲಿನ ಓಡಾಟಕ್ಕೆ ಸೂಕ್ತ ಎಂಬ ನಿರ್ಧಾರಕ್ಕೆ ಬಂದ ಬಳಿಕ ಈ ಭಾಗದಲ್ಲಿ ಸಂಚಾರ ಆರಂಭಗೊಳ್ಳುವ ಸಾಧ್ಯತೆ ಇದೆ. ಈ ಭಾಗದ ನಿಲ್ದಾಣಗಳಲ್ಲಿ ವಂದೇ ಭಾರತ್ ರೈಲು ನಿಲುಗಡೆ ಬೇಕು ಎಂಬ ಆಗ್ರಹಗಳು ಕೂಡ ಕೇಳಿ ಬರುತ್ತಿದ್ದು, ತಾಂತ್ರಿಕವಾಗಿ ಅದರ ಸಾಧ್ಯಾಸಾಧ್ಯತೆಗಳ ಕುರಿತು ರೈಲ್ವೇ ಅಧಿಕಾರಿಗಳು ವಿವರಿಸಬೇಕಿದೆ.

Leave a Reply