ಭೋಪಾಲ್: ನಾವು ಹೃದಯದಿಂದ ರಾಷ್ಟ್ರವಾದಿಗಳು. ಒಂದು ದಿನ ವಂದೇ ಮಾತರಂ, ರಾಷ್ಟ್ರಗೀತೆ ಹಾಡಿದವರೆಲ್ಲ ದೇಶಪ್ರೇಮಿಗಳಾಗಲು ಸಾಧ್ಯವಿಲ್ಲ ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್ ನಾಥ್ ಹೇಳಿದ್ದಾರೆ.
ಮಧ್ಯಪ್ರದೇಶದ ಸಚಿವಾಲದಲ್ಲಿ ತಿಂಗಳ ಆರಂಭದ ಮೊದಲ ದಿನ ರಾಷ್ಟ್ರಗೀತೆ ಮತ್ತು ವಂದೇ ಮಾತರಂ ಹಾಡುವ ಪದ್ಧತಿಯನ್ನು ಈ ಹಿಂದೆ ಬಿಜೆಪಿ ಜಾರಿಗೆ ತಂದಿತ್ತು. ಆದರೆ, ಈ ಸಂಪ್ರದಾಯಕ್ಕೆ ಕಾಂಗ್ರೆಸ್ ತಡೆ ನೀಡಿದೆ. “ರಾಷ್ಟ್ರಗೀತೆ ದೇಶಪ್ರೇಮದ ಸಂಕೇತ. ಸಚಿವಾಲಯಗಳಲ್ಲಿ ತಿಂಗಳ ಮೊದಲ ದಿನ ರಾಷ್ಟ್ರಗೀತೆ, ಒಂದೇ ಮಾತರಂ ಹಾಡುವುದನ್ನು ಮತ್ತೆ ಜಾರಿಗೆ ತರಬೇಕು. ನಾವು ಜಾರಿಗೆ ತಂದಿರುವ ಈ ಸತ್ಸಂಪ್ರದಾಯವನ್ನು ಕಾಂಗ್ರೆಸ್ ಮುಂದುವರಿಸಿಕೊಂಡು ಹೋಗಬೇಕು ಎಂದು ನಾನು ಮುಖ್ಯಮಂತ್ರಿಗಳನ್ನು ಆಗ್ರಹಿಸುತ್ತೇನೆ. ವಂದೇ ಮಾತರಂ ಕೇವಲ ಗೀತೆಯಲ್ಲ. ಬದಲಿಗೆ ಅದು ಮಂತ್ರ. ಸರ್ಕಾರಗಳು ಬರುತ್ತವೆ, ಹೋಗುತ್ತವೆ. ಆದರೆ, ರಾಷ್ಟ್ರ ಮೊದಲು ಎಂಬುದನ್ನು ಎಲ್ಲರೂ ಅರಿಯಬೇಕು,” ಎಂದು ಚೌಹಾಣ್ ವಾಗ್ದಾಳಿ ನಡೆಸಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಕಮಲ್ ನಾಥ್,” ರಾಷ್ಟ್ರಗೀತೆಯ ವಿರುದ್ಧವಾಗಿ ನಡೆದುಕೊಳ್ಳುವ ಅಥವಾ ಅದನ್ನು ಪ್ರತಿಭಟಿಸುವ ಯಾವುದೇ ಉದ್ದೇಶ ಸರ್ಕಾರದ್ದಲ್ಲ. ಹೊಸ ಮಾದರಿಯ ಆದೇಶ ಜಾರಿಗೆ ತರುವ ಉದ್ದೇಶದಿಂದ ಸಚಿವಾಲಯದಲ್ಲಿ ರಾಷ್ಟ್ರಗೀತೆ ಹಾಡುವುದನ್ನು ಸದ್ಯಕ್ಕೆ ತಡೆ ನೀಡಿದ್ದೇವೆ. ವಂದೇ ಮಾತರಂ ಹಾಡದವರು ದೇಶಪ್ರೇಮಿಗಳಲ್ಲವೇ? ಎಂದು ಅವರು ಪ್ರಶ್ನಿಸಿದ್ದಾರೆ. ಅಲ್ಲದೆ, ನಾವು ಹೃದಯದಿಂದ ರಾಷ್ಟ್ರವಾದಿಗಳು ಎಂದು ನಂಬಿದ್ದೇವೆ. ವಂದೇ ಮಾತರಂ ಹಾಡಿದ್ದವರೆಲ್ಲ ದೇಶಭಕ್ತರಾಗಲು ಸಾಧ್ಯವಿಲ್ಲ. ದೇಶಪ್ರೇಮವನ್ನು ರಾಷ್ಟ್ರಗೀತೆ ಹಾಡುವ ಮೂಲಕ ಅಳೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…