Featured

ವಂಶ ಪಾರಂಪರ್ಯದ ಹೆಸರಿನಲ್ಲಿ ನಡೆಯುವ ರಾಜಕಾರಣ ಪ್ರಜಾಪ್ರಭುತ್ವದ ಅತಿದೊಡ್ಡ ಶತ್ರು : ಪ್ರಧಾನಿ ಮೋದಿ -Vishwanews24

ವಂಶ ಪಾರಂಪರ್ಯದ ಹೆಸರಿನಲ್ಲಿ ನಡೆಯುವ ರಾಜಕಾರಣ ಪ್ರಜಾಪ್ರಭುತ್ವದ ಅತಿದೊಡ್ಡ ಶತ್ರು : ಪ್ರಧಾನಿ ಮೋದಿ –Vishwanews24

ನವದೆಹಲಿ: ವಂಶ ಪಾರಂಪರ್ಯದ ಹೆಸರಿನಲ್ಲಿ ನಡೆಯುವ ರಾಜಕಾರಣ ಪ್ರಜಾಪ್ರಭುತ್ವದ ಅತಿದೊಡ್ಡ ಶತ್ರು. ಇಂತಹ ರಾಜಕಾರಣವನ್ನು ಬೇರು ಸಮೇತ ಕಿತ್ತೊಗೆಯಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಇಂದು ನಡೆದ ಎರಡನೇ ರಾಷ್ಟ್ರೀಯ ಯುವ ಸಂಸತ್‌ ಉತ್ಸವದ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ವಿಡಿಯೊ ಕಾನ್ಫರೆನ್ಸ್‌ ಮೂಲಕ ಮಾತನಾಡಿದ ಅವರು ಕಾಂಗ್ರೆಸ್‌ ಸೇರಿದಂತೆ ವಿವಿಧ ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. ‘ಯುವಜನತೆ ರಾಜಕೀಯ ಪ್ರವೇಶಿಸುವುದು ಅಗತ್ಯ. ಒಂದು ವೇಳೆ ಯುವಜನತೆ ರಾಜಕೀಯಕ್ಕೆ ಧುಮುಕದೇ ಇದ್ದಲ್ಲಿ ವಂಶ ಪಾರಂಪರ್ಯ ರಾಜಕಾರಣ ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ’ ಎಂದು ತಿಳಿಸಿದರು.

‘ತಮ್ಮ ವಂಶದ ಅಡ್ಡಹೆಸರಿನ ಆಧಾರದ ಮೇಲೆ ಚುನಾವಣೆಯಲ್ಲಿ ಗೆಲ್ಲುತ್ತಿದ್ದವರ ಸಂಖ್ಯೆ ಈಗ ಕ್ಷೀಣಿಸುತ್ತಿದೆ. ಕೆಲವರು ಕುಟುಂಬವನ್ನು ರಕ್ಷಿಸುವ ಸಲುವಾಗಿಯೇ ರಾಜಕೀಯ ಕ್ಷೇತ್ರವನ್ನು ಪ್ರವೇಶಿಸುತ್ತಾರೆ. ರಾಜಕೀಯವನ್ನು ಕಾಯಿಲೆಯಿಂತೆ ಕಾಡುತ್ತಿರುವ ವಂಶ ಪಾರಂಪರ್ಯ ರಾಜಕಾರಣವನ್ನು ಸಂಪೂರ್ಣ ನಿರ್ಮೂಲನೆ ಮಾಡುವುದು ಅಗತ್ಯ’ ಎಂದು ಕರೆ ನೀಡಿದರು.

ಸ್ವಾಮಿ ವಿವೇಕಾನಂದರ ಜಯಂತಿ ಹಿನ್ನೆಲೆಯಲ್ಲಿ ದೇಶದಾದ್ಯಂತ ರಾಷ್ಟ್ರೀಯ ಯುವ ದಿನಾಚರಣೆಯನ್ನಾಗಿ ಆಚರಣೆ ಮಾಡಲಾಗುತ್ತಿದ್ದು, ವಿವೇಕಾನಂದರ ವಿಚಾರಗಳು ಪ್ರೇರಣೆಯಿಂದ ಕೂಡಿವೆ. ಸಂವಿಧಾನದ ರಚನೆಗೆ ಸಾಕ್ಷಿಯಾದ ಸಂಸತ್ತಿನ ಕೇಂದ್ರ ಹಾಲ್ ನಲ್ಲಿ ಯುವ ಸಂಸತ್ ಉತ್ಸವ ನಡೆಯುತ್ತಿರುವುದು ಈ ದಿನದ ಮಹತ್ವವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ರಾಷ್ಟ್ರ ನಿರ್ಮಾಣದತ್ತ ಪ್ರಮುಖ ಹೆಜ್ಜೆಯಾಗಿದೆ. ನಾವು ಪರಿಸರ ವ್ಯವಸ್ಥೆಯನ್ನು ನಿರ್ಮಿಸುತ್ತಿದ್ದು, ಇದು ನಮ್ಮ ಯುವಕರಿಗೆ ಉತ್ತಮ ಅವಕಾಶಗಳನ್ನು ನೀಡುತ್ತದೆ ಎಂದು ಹೇಳಿದ್ದಾರೆ.

http://ರಾಜ್ಯ​ದಲ್ಲಿ 2023ರಲ್ಲಿ ನಡೆ​ಯುವ ವಿಧಾ​ನ​ಸಭಾ ಚುನಾ​ವಣೆ ನನ್ನ ಜೀವ​ನದ ಕೊನೆಯ ಹೋರಾಟ : ಎಚ್‌.ಡಿ.​ಕು​ಮಾ​ರ​ಸ್ವಾಮಿ -Vishwanews24

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

5 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

6 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

6 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

6 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

10 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

11 hours ago