ಬೆಂಗಳೂರು: ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್ಪಿ ಕನಕಲಕ್ಷ್ಮೀ ಬಂಧನವಾಗಿದೆ. ಎಸ್ ಐಟಿ ಅಧಿಕಾರಿಗಳು ಇಂದು (ಮಾರ್ಚ್ 11) ಸಿಐಡಿ ಡಿವೈಎಸ್ಪಿ ಕನಕಲಕ್ಷ್ಮಿ ಅವರನ್ನು ಬಂಧಿಸಿದ್ದಾರೆ. ಕರ್ನಾಟಕ ಭೋವಿ ನಿಗಮ ಹಗರಣದ ತನಿಖೆ ಎದುರಿಸಿದಾಗ ಪೊಲೀಸ್ ಅಧಿಕಾರಿ ವಿವಸ್ತ್ರಗೊಳಿಸಿ ವಿಚಾರಣೆ ನಡೆಸಿದ್ದಲ್ಲದೆ, 25 ಲಕ್ಷ ರೂ. ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು ಎಂದು ಮಹಿಳಾ ವಕೀಲೆ ಜೀವಾ 13 ಪುಟಗಳ ಡೆತ್ನೋಟ್ ಬರೆದಿಟ್ಟು 2024 ನವೆಂಬರ್ 22ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಂಬಂಧ ಸಿಐಡಿ ಡಿವೈಎಸ್ ಪಿ ಕನಕಲಕ್ಷ್ಮಿ ವಿರುದ್ಧ ಜೀವಾ ಸಹೋದರಿ ದೂರು ನೀಡಿದ್ದರು. ಇದೀಗ ಈ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ಕನಕಲಕ್ಷ್ಮಿ ಅವರನ್ನು ಬಂಧಿಸಿದ್ದಾರೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಭೋವಿ ನಿಗಮದ ಅಕ್ರಮದ ಕುರಿತು ಕಾಂಗ್ರೆಸ್ ಸರ್ಕಾರ ಸಿಐಡಿ ತನಿಖೆಗೆ ವಹಿಸಿತ್ತು. ಇದನ್ನು ಸಿಐಡಿ ಡಿವೈಎಸ್ಪಿ ಕನಕಲಕ್ಷ್ಮೀ ಅವರು ತನಿಖೆ ಕೈಗೊಂಡಿದ್ದು, ಬೋವಿ ನಿಗಮದ ಫಲಾನುಭವಿಗಳಿಗೆ ಮೆಟಿರಿಯಲ್ ಪೂರೈಸಿದ ಆರೋಪದ ಮೇಲೆ 34 ವರ್ಷದ ವಕೀಲೆ ಜೀವಾ ಎನ್ನುವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಆದ್ರೆ, ವಿಚಾರಣೆ ಬಳಿಕ ವಕೀಲೆ ಜೀವಾ ಬೆಂಗಳೂರಿನ ಪದ್ಮನಾಭನಗರದ ತಮ್ಮ ನಿವಾಸದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.
ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಜೀವಾ 11 ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದು, ಸಿಐಡಿ ವಿಚಾರಣೆಯಿಂದ ನನಗೆ ಅವಮಾನವಾಗಿದ್ದು, ಮಾನಸಿಕವಾಗಿ ನೊಂದಿದ್ದೇನೆ ಎಂದು ಅವರು ತಮ್ಮ ಡೆತ್ನೋಟ್ನಲ್ಲಿ ಉಲ್ಲೇಖಿಸಿದ್ದರು ಎಂದು ತಿಳಿದುಬಂದಿತ್ತು. ಬಳಿಕ ಸಿಐಡಿ ತನಿಖಾಧಿಕಾರಿ ಕನಕಲಕ್ಷ್ಮಿ ವಿರುದ್ಧ ಮೃತಳ ಸಹೋದರಿ ಸಹ ಗಂಭೀರ ಆರೋಪ ಮಾಡಿದ್ದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…