ಹೊಸದಿಲ್ಲಿ: ವಕ್ಫ್ (ತಿದ್ದುಪಡಿ) ಮಸೂದೆಗೆ ತರಲು ಉದ್ದೇಶಿಸಿರುವ ತಿದ್ದುಪಡಿಗಳಿಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಸಂಸದೀಯ ಮಂಡಳಿ ಶಿಫಾರಸ್ಸು ಮಾಡಿರುವ ಈ ತಿದ್ದುಪಡಿಯನ್ನು ಮಸೂದೆಗೆ ಸೇರಿಸುವ ಮೂಲಕ ಬಜೆಟ್ ಅಧಿವೇಶನದ ಉತ್ತರಾರ್ಧದಲ್ಲಿ ಮಸೂದೆಯನ್ನು ಸನದಲ್ಲಿ ಮಂಡಿಸಿ, ಚರ್ಚಿಸಿ ಅನುಮೋದನೆ ನಡೆಯಲು ಹಾದಿ ಸುಗಮಗೊಂಡಂತಾಗಿದೆ.
ಜಗದಾಂಬಿಕಾ ಪಾಲ್ ಅಧ್ಯಕ್ಷತೆಯ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಶಿಫಾರಸ್ಸು ಮಾಡಿರುವ ಬಹುತೇಕ ಎಲ್ಲ ಬದಲಾವಣೆಗಳನ್ನು ಅಳವಡಿಸಿಕೊಳ್ಳಲು ಸರ್ಕಾರ ನಿರ್ಧರಿಸಿದೆ ಹಾಗೂ ಭಾರತೀಯ ಬಂದರು ಮಸೂದೆಯ ಜತೆಗೆ ಕಳೆದ ವಾರ ಈ ಮಸೂದೆಗೂ ಸಂಪುಟ ಒಪ್ಪಿಗೆ ನೀಡಿದೆ ಎಂದು ತಿಳಿದು ಬಂದಿದೆ. ಸರ್ಕಾರ ಈ ಮಸೂದೆಯನ್ನು ಆದ್ಯತೆಯ ಪಟ್ಟಿಯಲ್ಲಿ ಸೇರಿಸಿದೆ.
ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಲೋಕಸಭೆಯಲ್ಲಿ ಮಂಡಿಸಿದ ಬಳಿಕ 2024ರ ಆಗಸ್ಟ್ ನಲ್ಲಿ ಈ ಮಸೂದೆಯನ್ನು ಜಂಟಿ ಸಂಸದೀಯ ಸಮಿತಿಗೆ ಪರಾಮರ್ಶೆಗೆ ನೀಡಲಾಗಿತ್ತು. ಜಂಟಿ ಸಂಸದೀಯ ಸಮಿತಿಯಲ್ಲಿರುವ ವಿರೋಧ ಪಕ್ಷಗಳಿಗೆ ಸೇರಿದ ಎಲ್ಲ 11 ಮಂದಿ ಸಂಸದರು ವರದಿಗೆ ಆಕ್ಷೇಪ ವ್ಯಕ್ತಪಡಿಸಿದರೂ, ಬಹುಮತದಿಂದ ವರದಿಯನ್ನು ಸಮಿತಿ ಆಂಗೀಕರಿಸಿದೆ. ಈ ಸಂಸದರು ಭಿನ್ನಾಭಿಪ್ರಾಯ ಟಿಪ್ಪಣಿಯನ್ನೂ ನೀಡಿದ್ದಾರೆ.
ಗಂಗಾ ನದಿಯಲ್ಲಿ ಭೀಕರ ದೋಣಿ ದುರಂತ :ಇಬ್ಬರ ಶವ ಪತ್ತೆ, ಹಲವರು ನಾಪತ್ತೆ ಪಾಟ್ನಾ : ಬಿಹಾರದ ಪಾಟ್ನಾ ಸಮೀಪದ…
ಎಸ್‌ಡಿಆರ್‌ಎಫ್ ಸಿಪಿಐ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಬೆಳಗಾವಿ: ಎಸ್‌ಡಿಆರ್‌ಎಫ್ ಸಿಪಿಐ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯಲ್ಲಿ…
ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್ ಬೆಂಗಳೂರು: ಬ್ರೇಕ್‌ಫಾಸ್ಟ್ ಮೀಟಿಂಗ್‌ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್…
ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ : ಸಿದ್ದರಾಮಯ್ಯ ಬೆಂಗಳೂರು: ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ…
ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…
ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…