ಮಂಗಳೂರು: ಕರ್ನಾಟಕದ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಅವರಿಗೆ ವಿದೇಶಿ ವ್ಯಕ್ತಿಗಳಿಂದ ಬೆದರಿಕೆ ಕರೆಗಳು ಬಂದಿವೆ.
ಕೇಂದ್ರ ಸರ್ಕಾರವು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಗೆ ಅನುಮೋದನೆ ಪಡೆದ ಬೆನ್ನಲ್ಲೇ ಬೆದರಿಕೆ ಕರೆ ಬಂದಿದ್ದು, ಈ ವಿಚಾರವಾಗಿ ಅನ್ವರ್ ಮಾಣಿಪ್ಪಾಡಿ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಮಾಹಿತಿ ನೀಡಿದ್ದಾರೆ. ಇಂಟರ್ನೆಟ್ ಆಧಾರಿತ ಕರೆ ಮೂಲಕ ಬೆದರಿಕೆ ಕರೆ ಬಂದಿದೆ ಎನ್ನಲಾಗಿದೆ. ಅನ್ವರ್ ಮಾಣಿಪ್ಪಾಡಿ ಅವರು ಸದ್ಯ ಮಂಗಳೂರಿನಲ್ಲಿರುವ ನಿವಾಸದಲ್ಲಿ ವಾಸವಾಗಿದ್ದಾರೆ. ದೂರು ಆಧರಿಸಿದ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.
ಐತಿಹಾಸಿಕ ವಕ್ಫ್ ತಿದ್ದುಪಡಿ ಮಸೂದೆಯ ಮೇಲೆ ಲೋಕಸಭೆಯಲ್ಲಿ ಚರ್ಚೆ ಮಾಡುವ ಸಂದರ್ಭ ಗೃಹ ಸಚಿವ ಅಮಿತ್ ಶಾ ಕರ್ನಾಟಕದ ವಿಚಾರ ಕೂಡ ಪ್ರಸ್ತಾಪ ಮಾಡಿದ್ದರು. ಅನ್ವರ್ ಮಾಣಿಪ್ಪಾಡಿ ವರದಿ ಉಲ್ಲೇಖಿಸಿ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದ್ದರು. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಬೆದರಿಕೆ ಕರೆ ಬಂದಿರುವುದು ಚರ್ಚೆಗೆ ಕಾರಣವಾಗಿದೆ.
ಇಂಟರ್ನೆಟ್ ಕರೆ ಮೂಲಕ ನನಗೆ ನಿರಂತರ ಬೆದರಿಕೆ ಬರುತ್ತಾ ಇದೆ. ಹಿಂದಿ, ಮರಾಠಿ, ಇಂಗ್ಲೀಷ್ ಹಾಗೂ ಉತ್ತರ ಭಾರತದ ಭಾಷೆಗಳಲ್ಲಿ ಕರೆಗಳು ಬರುತ್ತಾ ಇವೆ. ಇಂಗ್ಲಿಷ್ನಲ್ಲಿ ಕರೆ ಮಾಡಿದ ವ್ಯಕ್ತಿ ನೀವು ಹೆಚ್ಚು ದಿನ ಉಳಿಯುವುದಿಲ್ಲ ಎಂದು ಬೆದರಿಕೆ ಹಾಕಿದ್ದಾನೆ. ನಿನ್ನ ಸಮುದಾಯ ನಿನ್ನನ್ನು ಬಿಡಲ್ಲ ಎಂದೆಲ್ಲಾ ಹೇಳಿದ್ದಾನೆ. ಆದರೆ ನನ್ನ ಸಮುದಾಯದ ಬಗ್ಗೆ ನನಗೆ ಖುಷಿ ಇದೆ. ಸದ್ಯ ನಾನು ಮಂಗಳೂರು ಕಮಿಷನರ್ ಅನುಪಮ್ ಅಗರವಾಲ್ಗೆ ಮಾಹಿತಿ ಕೊಟ್ಟಿದ್ದೇನೆ. ನಾನು ಈ ಹಿಂದೆಯೂ ಭದ್ರತೆ ಕೊಟ್ಟಾಗ ವಾಪಾಸ್ ಕಳುಹಿಸಿದ್ದೆ. ಈಗ ತಿದ್ದುಪಡಿ ಮಸೂದೆ ಜಾರಿ ಬಳಿಕ ಮತ್ತೆ ಒಂದಷ್ಟು ಕರೆಗಳು ಬರುತ್ತಿವೆ, ಅದು ಸಾಮಾನ್ಯ ಎಂದಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…