Featured

ವಕ್ಫ್‌ ಬೋರ್ಡ್ ಹೆಸರಿನಲ್ಲಿ ದೇಶವನ್ನು ಇಸ್ಲಾಂ ದೇಶ ಮಾಡಲು ಹೊರಟಿದ್ದಾರೆ : ಪ್ರಮೋದ್ ಮುತಾಲಿಕ್ ಆರೋಪ – vishwanews24

ಎಲ್ಲ ಹಿಂದೂಗಳು ಒಂದಾಗಿ  ವಕ್ಫ್‌ ವಿರುದ್ಧ ಹೋರಾಡಿದರೆ ಮಾತ್ರ ನಮ್ಮ ಉಳಿವು ಸಾಧ್ಯ : ಪ್ರಮೋದ್ ಮುತಾಲಿಕ್

ಹುಬ್ಬಳ್ಳಿ : ವಕ್ಫ್‌ ಬೋರ್ಡ್ ಹೆಸರಿನಲ್ಲಿ ಸಚಿವ ಜಮೀರ್‌ ಅಹಮದ್ ಖಾನ್ ರೈತರು ಮತ್ತು ಜನಸಾಮಾನ್ಯರ ಆಸ್ತಿ ಕಬಳಿಸುವ ಮೂಲಕ ದೇಶದ್ರೋಹಿ ಕೆಲಸ ಮಾಡುತ್ತಿದ್ದು, ಅವರನ್ನು ಗಲ್ಲಿಗೇರಿಸಬೇಕು ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಮೀರ್ ಅಹಮದ್ ಖಾನ್ ರಾಜ್ಯಾದ್ಯಂತ ವಕ್ಫ್‌ ಅದಾಲತ್ ನಡೆಸುತ್ತಿದ್ದು, ಇದು ಅತ್ಯಂತ ಗಂಭೀರವಾದ ವಿಷಯ. ಇವರಿಗೆ ಅಧಿಕಾರದಮದ ಏರಿದೆ. ತನ್ನ ಚಾಮರಾಜಪೇಟೆ ಕ್ಷೇತ್ರದಲ್ಲಿ 25 ಸಾವಿರಕ್ಕೂ ಅಧಿಕ ದೇಶದ್ರೋಹಿ ಬಾಂಗ್ಲಾ ಮುಸ್ಲಿಮರನ್ನು ಸಲಹುತ್ತಿದ್ದಾರೆ. ಈತನಿಂದಲೇ ರಾಜ್ಯದಲ್ಲಿ ಧಂಗೆ, ಗಲಭೆ ನಡೆಯುತ್ತಿವೆ. ಬಿಜೆಪಿ ಸೇರಿದಂತೆ ಹಲವರು ಜಮೀರ್ ಅವರಿಗೆ ಸಚಿವ ಸಂಪುಟದಿಂದ ಕೈಬಿಡಬೇಕು, ದೇಶದಿಂದ ಗಡೀಪಾರು ಎಂಬಿತ್ಯಾದಿ ಹೇಳಿಕೆ ನೀಡುತ್ತಿದ್ದಾರೆ. ಆದರೆ, ನಾನು ಹೇಳುವೆ ಈ ಕೂಡಲೇ ಅವನನ್ನು ಬಂಧಿಸಿ, ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿದರು.

ಇಡೀ ದೇಶದಲ್ಲಿ ರೈತರ ಭೂಮಿಗಳು, ಮನೆ, ಮಠ, ಸರ್ಕಾರಿ ಆಸ್ಪತ್ರೆ, ಕಚೇರಿ, ರಸ್ತೆಗಳು ವಕ್ಫ್‌ಗೆ ಹೋಗುತ್ತಿವೆ. ಇದು ದೇಶಾದ್ಯಂತ ವೈರಸ್‌ ರೀತಿ ಹರಡುತ್ತಿರುವುದು ಆತಂಕಕಾರಿ ಬೆಳವಣಿಗೆ. ಗೂಳಿಯಂತೆ ನುಗ್ಗುತ್ತಿರುವುದು ನೋಡಿದರೆ ದೇಶಕ್ಕೆ ಗಂಡಾಂತರ ಸೃಷ್ಟಿಯಾಗಿದೆ. ದೇಶವನ್ನು ಇಸ್ಲಾಂ ದೇಶ ಮಾಡಲು ಹೊರಟಿದ್ದಾರೆ ಎಂದು ಆರೋಪಿಸಿದರು.

ರಾಜ್ಯದಲ್ಲಿನ ಕೆಲವು ಮುಸ್ಲಿಂ ಜಿಲ್ಲಾಧಿಕಾರಿ, ತಹಸೀಲ್ದಾರ್, ನೋಂದಣಾಧಿಕಾರಿ, ಪಿಡಿಒಗಳು ತಾವು ಸಲ್ಲಿಸುತ್ತಿರುವ ಪ್ರದೇಶಗಳಲ್ಲಿ ವಕ್ಫ್‌ ಬೋರ್ಡ್ ಹೆಸರಲ್ಲಿ ಅಮಾಯಕರ ಆಸ್ತಿ ಕಬಳಿಸುವ ಹುನ್ನಾರ ನಡೆಸಿದ್ದಾರೆ. ಈ ಕುರಿತು ಸಮಗ್ರ ತನಿಖೆ ಕೈಗೊಂಡು ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಕ್ಫ್‌ ಕಾಯ್ದೆ ತಿದ್ದುಪಡಿಗೆ ಮುಂದಾಗಿರುವ ನಿರ್ಧಾರಕ್ಕೆ ಶ್ರೀರಾಮಸೇನೆ ಸ್ವಾಗತಿಸುತ್ತದೆ. ದೇಶದ ಎಲ್ಲ ಹಿಂದೂಗಳು ಒಂದಾಗಿ ಈ ವಕ್ಫ್‌ ವಿರುದ್ಧ ಹೋರಾಡಿದರೆ ಮಾತ್ರ ನಮ್ಮ ಉಳಿವು ಸಾಧ್ಯವಿದೆ. ಹಾಗಾಗಿ ಕೇಂದ್ರ ಸರ್ಕಾರಕ್ಕೆ ಎಲ್ಲ ಹಿಂದೂ ಬಾಂಧವರು ಬೆಂಬಲ ನೀಡಬೇಕು ಎಂದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

23 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago