Featured

ವಕ್ಫ್ ಮಂಡಳಿ ರದ್ದು ಗೊಳಿಸಿ, ಮತೀಯವಾದಿ ರಾಷ್ಟ್ರವಿರೋಧಿ ಪಿಎಫ್ ಐ ಸಂಘಟನೆ ನಿಷೇಧಕ್ಕೆ ಸರಕಾರ ಮುಂದಾಗಲಿ : ಯಶ್ ಪಾಲ್ ಸುವರ್ಣ ಆಗ್ರಹ – Vishwanews24

ವಕ್ಫ್ ಮಂಡಳಿ ರದ್ದು ಗೊಳಿಸಿ, ಮತೀಯವಾದಿ ರಾಷ್ಟ್ರವಿರೋಧಿ ಪಿಎಫ್ ಐ ಸಂಘಟನೆ ನಿಷೇಧಕ್ಕೆ ಸರಕಾರ ಮುಂದಾಗಲಿ : ಯಶ್ ಪಾಲ್ ಸುವರ್ಣ ಆಗ್ರಹ

ವಕ್ಫ್ ಮಂಡಳಿ ಅಕ್ರಮ ಆಸ್ತಿ ಕಬಳಿಕೆ ಮೂಲಕ ರಾಜ್ಯದಾದ್ಯಂತ ಭೂ ಅವ್ಯವಹಾರ ನಡೆಸಿ ಕೋಟ್ಯಂತರ ರೂಪಾಯಿಗಳ ಹಗರಣದ ನಡೆಸಿದ್ದ ಬಗ್ಗೆ 2012 ರಲ್ಲಿ ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರಾದ ಅನ್ವರ್ ಮಾಣಿಪ್ಪಾಡಿ ರಾಜ್ಯ ಸರಕಾರಕ್ಕೆ ಸಲ್ಲಿಸಿದ ವರದಿಯನ್ನು ಗಂಭೀರವಾಗಿ ಪರಿಗಣಿಸಿ ವಕ್ಫ್ ಆಸ್ತಿಗಳ ಬಗ್ಗೆ ತನಿಖೆ ನಡೆಸಿ ಸರಕಾರದ ವಶಕ್ಕೆ ಪಡೆದು ವಕ್ಫ್ ಮಂಡಳಿಯನ್ನು ರಾಜ್ಯ ಸರಕಾರ ತಕ್ಷಣವೇ ರದ್ದು ಗೊಳಿಸುವಂತೆ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.
 ಅಲ್ಪಸಂಖ್ಯಾತರ ಓಲೈಕೆಗಾಗಿ ವಿಶೇಷ ಆಸಕ್ತಿಯಿಂದ ಅಂದಿನ ಕಾಂಗ್ರೆಸ್ ಸರ್ಕಾರ 1995 ರಲ್ಲಿ ಜಾರಿಗೆ ತಂದ ವಕ್ಫ್ ಕಾಯಿದೆ ರಾಜಾರೋಷವಾಗಿ ಅಕ್ರಮ ಭೂ ಕಬಳಿಕೆಗೆ ಪೂರಕವಾಗಿರುವ ಪರಿಣಾಮ ಇಂದು ದೇಶದ ಸೇನೆ ಮತ್ತು ರೈಲ್ವೇ ಇಲಾಖೆಯನ್ನು ಹೊರತು ಪಡಿಸಿ ಅತ್ಯಧಿಕ ಪ್ರಮಾಣದ ಆಸ್ತಿ ಹೊಂದಿರುವ ಸಂಸ್ಥೆ ವಕ್ಫ್ ಮಂಡಳಿಯಾಗಿದೆ.
ತಮಿಳುನಾಡಿನಲ್ಲಿ ದೇವಸ್ಥಾನ ಸಹಿತವಾಗಿ ಇಡೀ ಗ್ರಾಮವನ್ನೇ ವಕ್ಫ್ ಮಂಡಳಿ ತನ್ನ ಆಸ್ತಿ ಎಂದು ಘೋಷಿಸಿರುವ ಪ್ರಕರಣ ಇತ್ತೀಚೆಗೆ ಬೆಳಕಿಗೆ ಬಂದಿದ್ದು, ಉಡುಪಿಯ ಕೊಡವೂರು ಜುಮಾದಿ ನಗರ ಮತ್ತು ರಾಜ್ಯದ ವಿವಿಧೆಡೆ ಇಂತಹ ಪ್ರಕರಣಗಳ ಬಗ್ಗೆ ಸರಕಾರ ಸೂಕ್ತ ತನಿಖೆ ನಡೆಸುವ ಅವಶ್ಯಕತೆಯಿದ್ದು, ಈ ಮೂಲಕ ಮತೀಯವಾದಿ ರಾಷ್ಟ್ರವಿರೋಧಿ ಸಂಘಟನೆಗಳ ಚಟವಟಿಕೆಗಳಿಗೆ ಕಡಿವಾಣ ಹಾಕಲು ಸಹಕಾರಿಯಾಗಲಿದೆ.
ರಾಜ್ಯದಲ್ಲಿ ಮತೀಯವಾದಿ ಎಸ್ ಡಿ ಪಿ ಐ, ಪಿ ಎಫ್ ಐ ಸಂಘಟನೆಗಳು ಹಿಜಾಬ್ ವಿವಾದವನ್ನು ಸೃಷ್ಟಿಸಿ ಬಡ ಹೆಣ್ಣು ಮಕ್ಕಳ ಶಿಕ್ಷಣದ ಹಕ್ಕು ಕಸಿಯಲು ಯತ್ನಿಸಿ, ಹೈ ಕೋರ್ಟ್ ನೀಡಿದ ತೀರ್ಪಿನ ಬಗ್ಗೆ ಬಂದ್ ಕರೆ ನೀಡಿ ನ್ಯಾಯಾಂಗ ನಿಂದನೆ ಮಾಡಿ ಶಾಂತಿ ಸುವ್ಯವಸ್ಥೆ ಹದಗೆಡಿಸುವ ಯತ್ನ ಮಾಡಿದ್ದಾರೆ. ಮುಸ್ಲಿಂ ರಾಷ್ಟ್ರ ಇರಾನ್ ನಲ್ಲಿ ಹಿಜಾಬ್ ವಿರೋಧಿಸಿ ಮಹಿಳೆಯರು ಬೀದಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ಈ ಹಿಜಾಬ್ ವಿಚಾರವನ್ನು ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಿ ಗೊಂದಲ ಸೃಷ್ಟಿಸಲು ಮುಂದಾಗಿದ್ದಾರೆ.
ಶಿವಮೊಗ್ಗದಲ್ಲಿ ಬಂಧಿತ ಐಸಿಸ್ ಉಗ್ರ ಸಂಘಟನೆಯ ಜೊತೆ ನಂಟು ಹೊಂದಿರುವ ಇಬ್ಬರು ಶಂಕಿತ ಉಗ್ರಗಾಮಿಗಳಲ್ಲಿ ಓರ್ವ ಈ ಹಿಂದೆ ಮಂಗಳೂರಿನಲ್ಲಿ ಪ್ರಚೋದನಾತ್ಮಕ ಗೋಡೆ ಬರಹದ ಆರೋಪಿಯಾಗಿದ್ದು, ಈ ಮೂಲಭೂತವಾದಿಗಳಿಗೆ ಪರೋಕ್ಷವಾಗಿ ವಕ್ಫ್ ಮಂಡಳಿಯ ಅಕ್ರಮ ಹಗರಣಗಳ ಹಣದ ಸಹಕಾರ ದೇಶದ ಆಂತರಿಕ ಭದ್ರತೆಗೆ ಸವಾಲಾಗಿ ದೇಶದಾದ್ಯಂತ ಎನ್ ಐ ಎ ನಡೆಸುತ್ತಿರುವ ಭಯೋತ್ಪಾದನೆ ಚಟುವಟಿಕೆಗಳ ನಿಯಂತ್ರಣಕ್ಕೆ ನಡೆಸುತ್ತಿರುವ ತನಿಖೆಗೂ ಅಡ್ಡಿ ಮಾಡುವ ಮೂಲಕ ಉದ್ದಟತನ ಮೆರೆಯುತ್ತಿದೆ.
ಕೇಂದ್ರ ಹಾಗೂ ರಾಜ್ಯ ಸರಕಾರ ದೇಶದಾದ್ಯಂತ ವಕ್ಫ್ ಮಂಡ ಳಿ ಯನ್ನು ರದ್ದುಗೊಳಿಸಿ, ಎಸ್ ಡಿ ಪಿ ಐ, ಪಿ ಎಫ್ ಐ ನಂತಹ ಐಸಿಸ್ ಮನಸ್ಥಿತಿಯ ರಾಷ್ಟ್ರವಿರೋಧಿ ಮತೀಯ ಸಂಘಟನೆಯನ್ನು ನಿಷೇಧಿಸುವಂತೆ ಒತ್ತಾಯಿಸುವುದಾಗಿ ತಿಳಿಸಿದ್ದಾರೆ.
Vishwa News 24

Recent Posts

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

13 hours ago

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO – vishwanews24

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…

14 hours ago

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ – vishwanews24

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ  ಬೆಂಗಳೂರು: ಕರ್ನಾಟಕ ಸರ್ಕಾರದ…

14 hours ago

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ – vishwanews24

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…

14 hours ago

ಮಂಗಳೂರು:ಕೋರಿಯರ್ ಮೂಲಕ ಎಂಡಿಎಂಎ ಸಾಗಾಟದ ಜಾಲ ಪತ್ತೆ: ₹1.58 ಕೋಟಿ ಮೌಲ್ಯದ ಮಾದಕವಸ್ತು ವಶ – vishwanews24

ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…

15 hours ago

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ – vishwanews24

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…

15 hours ago