ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು ದಾವಣಗೆರೆಯ ವಿಶೇಷ ಪೋಕ್ಸೋ ನ್ಯಾಯಾಲಯ ಜೂನ್ 30ಕ್ಕೆ ಕಾಯ್ದಿರಿಸಿದೆ.
ವಚನಾನಂದ ಸ್ವಾಮೀಜಿ ಪಡೆದಿರುವ ನಿರೀಕ್ಷಣಾ ಜಾಮೀನು ರದ್ದು ಕೋರಿ ಹರಿಹರ ಗ್ರಾಮಾಂತರ ಠಾಣೆಯ ಪೊಲೀಸರು ಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಜಾಮೀನು ರದ್ದು ಅರ್ಜಿ ವಿಚಾರಣೆ ಕಳೆದ ಜೂ.11 ರಂದು ನಡೆದಿತ್ತು. ಈಗ ಹೈಕೋರ್ಟ್‌ನಲ್ಲಿ ಜೂ.23ಕ್ಕೆ ವಚನಾನಂದ ಸ್ವಾಮೀಜಿ ಜಾಮೀನು ಅರ್ಜಿ ವಿಚಾರಣೆ ಇದ್ದು, ಹೈಕೋರ್ಟ್ ಅದೇಶದ ಬಳಿಕ ಜಿಲ್ಲಾ ಪೋಕ್ಸೋ ನ್ಯಾಯಾಲಯ ಜೂನ್ 30ಕ್ಕೆ ತೀರ್ಪನ್ನು ಪ್ರಕಟಿಸಲಿದೆ ಎಂದು ಸ್ವಾಮೀಜಿ ಪರ ವಕೀಲ ಎಸ್.ವಿ ಪಾಟೀಲ್ ತಿಳಿಸಿದರು.
ಇದನ್ನೂ ಓದಿ:
ಸಂತ್ರಸ್ತ ಬಾಲಕನ ತಾಯಿ ಹೈಕೋರ್ಟ್ ಮೆಟ್ಟಿಲೇರಿರುವುದು ಜಿಲ್ಲಾ ನ್ಯಾಯಾಲಯದ ಆದೇಶ ತಡವಾಗಲು ಕಾರಣವಾಗಿದೆ. ಕಳೆದ ಜೂ.6 ರಂದೇ ಸಂತ್ರಸ್ತ ಬಾಲಕನ ತಾಯಿ ವಚನಾನಂದ ಸ್ವಾಮೀಜಿಗೆ ನೀಡಿರುವ ಜಾಮೀನನ್ನು ರದ್ದು ಮಾಡುವಂತೆ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ವಿಚಾರವನ್ನು ದೂರುದಾರರು ದಾವಣಗೆರೆ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯಕ್ಕೆ ತಿಳಿಸಿರಲಿಲ್ಲ. ಅದ್ದರಿಂದ ಇಂದಿನ ಅದೇಶ ಮುಂದೂಡಿಕೆಯಾಗಿದೆ.
ಹೈಕೋರ್ಟ್‌ನಲ್ಲಿ ಜೂ.23 ರಂದು ಜಾಮೀನು ರದ್ದತಿ ಅರ್ಜಿಯ ವಿಚಾರಣೆ ನಡೆಯಲಿದ್ದು, ಖುದ್ದಾಗಿ ವಚನಾನಂದ ಶ್ರೀಗಳು ತಮ್ಮ ವಕೀಲರ ಜೊತೆ ಹೈಕೋರ್ಟ್‌ಗೆ ಹಾಜರಾಗಲಿದ್ದಾರೆ.
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…
Council Election Fight: 222 ಶಾಸಕರಿಂದ ಮತದಾನ; ಸಂಜೆ 5 ಗಂಟೆಗೆ ಫಲಿತಾಂಶ Council Election Fight: ಸಾಕಷ್ಟು ಕುತೂಹಲ…
ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು ಬೆಂಗಳೂರು : ರಾಜಧಾನಿಯ ಉತ್ತರ ತಾಲೂಕಿನ…
ಮಂಗಳೂರು : ಎಲ್ಲಾ ಏಜೆನ್ಸಿಗಳು MEA ಅಡಿ ನೋಂದಾವಣೆ ಕಡ್ಡಾಯ : ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು :…
ಇಂದಿನಿಂದ ಮೈಸೂರು-ತಾಳಗುಪ್ಪ ಸೇರಿದಂತೆ ಹಲವು ರೈಲುಗಳು ಸಂಪೂರ್ಣ ರದ್ದು.. ಆಗಸ್ಟ್‌ನಲ್ಲಿ ವಂದೇ ಭಾರತ್, ಕಾವೇರಿ ಎಕ್ಸ್‌ಪ್ರೆಸ್ ಬಂದ್ ಬೆಂಗಳೂರು: ರೈಲ್ವೆ…
ಮುಂಬೈ: ಹೆಂಡತಿ ಮೇಲಿನ ಅನುಮಾನಕ್ಕೆ ಮನೆ ತುಂಬಾ ಸಿಸಿಟಿವಿ ಅಳವಡಿಸಿದ್ದ ಪತಿ ; ಕಿರುಕುಳ ತಾಳಲಾರದೇ ಪತ್ನಿ ಆತ್ಮಹತ್ಯೆ ಮುಂಬೈ:…