Featured

ವಯನಾಡ್‌ನಲ್ಲಿ ದಾಖಲೆಯ ಮತ ಪಡೆಯುವ ಮೂಲಕ ಭರ್ಜರಿ ಗೆಲುವು ದಾಖಲಿಸಿದ ಪ್ರಿಯಾಂಕಾ ಗಾಂಧಿ – vishwanews24

ವಯನಾಡ್‌ನಲ್ಲಿ ದಾಖಲೆಯ ಮತ ಪಡೆಯುವ ಮೂಲಕ ಪ್ರಿಯಾಂಕಾ ಗಾಂಧಿ ಭರ್ಜರಿ ಗೆಲುವು

ತಿರುವನಂತಪುರಂ:ವಯನಾಡ್ ಲೋಕಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ನಾಯಕಿ ಹಾಗೂ ರಾಹುಲ್‌ ಗಾಂಧಿ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಭರ್ಜರಿ ಗೆಲುವು ದಾಖಲಿಸಿದ್ದಾರೆ.

ಪ್ರಿಯಾಂಕಾ ಗಾಂಧಿ ಅವರು ಇದೇ ಮೊದಲ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಮೊದಲ ಚುನಾವಣೆಯಲ್ಲೇ ದಾಖಲೆಯ ಮತ ಪಡೆಯುವ ಮೂಲಕ ವಯನಾಡ್ ಲೋಕಸಭೆ ಉಪ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿದ್ದಾರೆ.

ಈ ಕ್ಷೇತ್ರದಲ್ಲಿ ಒಟ್ಟು 16 ಜನ ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು. ಕಾಂಗ್ರೆಸ್​ ನೇತೃತ್ವದ ಯುಡಿಎಫ್​ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಈ ಭಾಗದಲ್ಲಿ ಮೊದಲಿನಿಂದಲೂ ಜನ ಭಾರೀ ಬೆಂಬಲ ಸೂಚಿಸಿದ್ದರು. ಇದೀಗ ಅವರು ವಯನಾಡ್‌ನಲ್ಲಿ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಇನ್ನು ಪ್ರಿಯಾಂಕಾ ಗಾಂಧಿ ಅವರು ಬರೋಬ್ಬರಿ 2 ಲಕ್ಷಗಳ ಮತಗಳ ಅಂತರವನ್ನು ಬೆಳಿಗ್ಗೆ ದಾಖಲಿಸಿದ್ದರು.

ವಯನಾಡ್‌ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಅವರ ಗೆಲುವು ಕಾಂಗ್ರೆಸ್‌ನಲ್ಲಿ ಹಾಗೂ ರಾಹುಲ್‌ಗಾಂಧಿ ಕುಟುಂಬದಲ್ಲಿ ಸಂತೋಷವನ್ನು ಉಂಟು ಮಾಡಿದೆ.. ಪ್ರಿಯಾಂಕಾ ಗಾಂಧಿ ಅವರು ಲೋಕಸಭೆಯನ್ನು ಪ್ರವೇಶಿಸುವ ಮೂಲಕ ಒಂದೇ ಕುಟುಂಬದ ಮೂರು ಜನ ಲೋಕಸಭೆಯನ್ನು ಪ್ರವೇಶಿಸಿದಂತೆ ಆಗಿದೆ. ಇನ್ನು ಸೋನಿಯಾ ಗಾಂಧಿ ಅವರು ರಾಜ್ಯಸಭಾ ಸದಸ್ಯರಾಗಿದ್ದು, ಒಂದೇ ಕುಟುಂಬದ ಮೂರು ಜನ ರಾಷ್ಟ್ರ ರಾಜಕೀಯದಲ್ಲಿ ಮಿಂಚಲಿದ್ದಾರೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

10 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

11 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

12 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

12 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

12 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

12 hours ago