Featured

ವಯಸ್ಕ ಹೆಣ್ಣು ಮಗಳು ತನ್ನ ಇಚ್ಛೆಯಂತೆ ಮದುವೆಯಾಗಿ ಧರ್ಮ ಮತಾಂತರಗೊಂಡರೆ ಯಾರೂ ಹಸ್ತಕ್ಷೇಪ ಮಾಡಿ ತಡೆಯಲು ಸಾಧ್ಯವಿಲ್ಲ : ಕೋಲ್ಕತ್ತಾ ಹೈಕೋರ್ಟ್ -Vishwanews24

ವಯಸ್ಕ ಹೆಣ್ಣು ಮಗಳು ತನ್ನ ಇಚ್ಛೆಯಂತೆ ಮದುವೆಯಾಗಿ ಧರ್ಮ ಮತಾಂತರಗೊಂಡರೆ ಯಾರೂ ಹಸ್ತಕ್ಷೇಪ ಮಾಡಿ ತಡೆಯಲು ಸಾಧ್ಯವಿಲ್ಲ : ಕೋಲ್ಕತ್ತಾ ಹೈಕೋರ್ಟ್ -Vishwanews24

ಕೋಲ್ಕತ್ತಾ: ವಯಸ್ಕ ಹೆಣ್ಣು ಮಗಳು ತನ್ನ ಇಚ್ಛೆಯಂತೆ ಮದುವೆಯಾಗಿ ಧರ್ಮ ಮತಾಂತರಗೊಂಡರೆ ಯಾರೂ ಹಸ್ತಕ್ಷೇಪ ಮಾಡಿ ತಡೆಯಲು ಸಾಧ್ಯವಿಲ್ಲ ಎಂದು ಕೋಲ್ಕತ್ತಾ ಹೈಕೋರ್ಟ್ ತೀರ್ಪು ನೀಡಿದೆ.

19 ವರ್ಷದ ಯುವತಿ ಅನ್ಯಧರ್ಮೀಯ ಯುವಕನನ್ನು ಪ್ರೀತಿಸಿ ವಿವಾಹವಾಗಿದ್ದಳು. ನಂತರ ಕೋಲ್ಕತ್ತಾ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ಆಕೆಯ ತಂದೆ, ತಮ್ಮ ಮಗಳ ಮೇಲೆ ಪ್ರಭಾವ ಬೀರಿ ಅನ್ಯ ಧರ್ಮದ ವ್ಯಕ್ತಿ ಮದುವೆಯಾಗಿದ್ದು, ತನ್ನ ಮಗಳ ಹೇಳಿಕೆಯನ್ನು ಮ್ಯಾಜಿಸ್ಟ್ರೇಟರ ಮುಂದೆ ದಾಖಲು ಸಹ ಮಾಡಿಕೊಳ್ಳಲು ಬಿಡಲಿಲ್ಲ ಎಂದು ಆರೋಪಿಸಿದ್ದರು.

ಯುವತಿಯ ತಂದೆ ಸಲ್ಲಿಸಿದ ಎಫ್‌ಐಆರ್ ಪ್ರಕಾರ, ಪೊಲೀಸರು ಯುವತಿಯನ್ನು ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದಾಗ ಆಕೆ ತನ್ನ ಇಷ್ಟದ ಪ್ರಕಾರವೇ ಮದುವೆಯಾಗಿರುವುದಾಗಿ ತಿಳಿಸಿದಳು.

ವಯಸ್ಕ ಹೆಣ್ಣುಮಗಳು ಆಕೆಯ ಆಯ್ಕೆ ಪ್ರಕಾರ ಮದುವೆಯಾಗಿ ಪತಿಯ ಧರ್ಮಕ್ಕೆ ಮತಾಂತರವಾಗಲು ಬಯಸಿದರೆ ಮತ್ತು ತನ್ನ ತಾಯಿಯ ಮನೆಗೆ ಹಿಂತಿರುಗಲು ಮನಸ್ಸು ತೋರದಿದ್ದರೆ ಆಕೆಯ ನಿರ್ಧಾರವನ್ನು ತಡೆಯಲು ಅಥವಾ ಬದಲಾಯಿಸಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿಗಳಾದ ಸಂಜಿಬ್ ಬ್ಯಾನರ್ಜಿ ಮತ್ತು ಅರಿಜಿತ್ ಬ್ಯಾನರ್ಜಿ ನೇತೃತ್ವದ ವಿಭಾಗೀಯ ಪೀಠ ಹೇಳಿದೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

1 hour ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

2 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

3 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

3 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

3 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

3 hours ago