Featured

ವರದಕ್ಷಿಣೆ ಕಿರುಕುಳ ಆರೋಪ : ಎಸ್.ನಾರಾಯಣ್, ಪತ್ನಿ, ಪುತ್ರನ ವಿರುದ್ಧ ಎಫ್‌ಐಆರ್ ದಾಖಲು – vishwanews24

ವರದಕ್ಷಿಣೆ ಕಿರುಕುಳ ಆರೋಪ : ಎಸ್.ನಾರಾಯಣ್, ಪತ್ನಿ, ಪುತ್ರನ ವಿರುದ್ಧ ಎಫ್‌ಐಆರ್ ದಾಖಲು

ಬೆಂಗಳೂರು: ಸೊಸೆಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪದಡಿ ಖ್ಯಾತ ಚಿತ್ರ ನಿರ್ದೇಶಕ ಎಸ್.ನಾರಾಯಣ್, ಪತ್ನಿ, ಪುತ್ರನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಈ ಕುರಿತು ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಸ್.ನಾರಾಯಣ್ ಅವರ ಎರಡನೇ ಮಗನ ಪತ್ನಿ ಪವಿತ್ರಾ ದೂರು ದಾಖಲಿಸಿದ್ದಾರೆ. ದೂರಿನನ್ವಯ ಎಸ್.ನಾರಾಯಣ್, ಪತ್ನಿ ಭಾಗ್ಯಲಕ್ಷ್ಮಿ, ಪತಿ ಪವನ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮದುವೆಯಲ್ಲಿ ವರದಕ್ಷಿಣೆ ಕೊಟ್ಟಿದ್ದರೂ ಹೆಚ್ಚಿನ ಹಣಕ್ಕೆ ಒತ್ತಾಯ ಮಾಡುತ್ತಿದ್ದಾರೆ. ಹಲ್ಲೆ ನಡೆಸಿ ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ದೂರಿನಲ್ಲಿ ಏನಿದೆ?

ನಾನು ಹಾಗೂ ಎಸ್.ನಾರಾಯಣ್ ಪುತ್ರ ಪವನ್ 2021ರಲ್ಲಿ ಮದುವೆಯಾದೆವು. ಪವನ್ ಓದಿರದ ಕಾರಣ ಕೆಲಸ ಇಲ್ಲದೆ ಮನೆಯಲ್ಲಿಯೇ ಇದ್ದರು. ಇದರಿಂದಾಗಿ ನಾನೇ ಕೆಲಸಕ್ಕೆ ಹೋಗಿ ಮನೆ ಸಾಗಿಸುತ್ತಿದ್ದೆ. ನಂತರ ಪವನ್ ಕಲಾ ಸಾಮ್ರಾಟ್ ಟೀಂ ಅಕಾಡೆಮಿ ಎಂಬ ಫಿಲ್ಮ್ ಇನ್ಸ್ಟಿಟ್ಯೂಟ್ ಪ್ರಾರಂಭಿಸಬೇಕೆಂದು ಯೋಚಿಸಿದ್ದರು. ಇದಕ್ಕಾಗಿ ನನ್ನ ಬಳಿ ದುಡ್ಡು ಕೇಳಿದ್ದರು. ಆಗ ನನ್ನ ತಾಯಿಯ ಒಡವೆ ಕೊಟ್ಟಿದ್ದೆ. ಆದ್ರೆ ಬಳಿಕ ಲಾಸ್ ಆಗಿ ಇನ್ಸ್ಟಿಟ್ಯೂಟ್ ಮುಚ್ಚಬೇಕಾದ ಪರಿಸ್ಥಿತಿ ಬಂತು.

ಮದುವೆಯಲ್ಲಿ 1 ಲಕ್ಷ ರೂ. ಮೌಲ್ಯದ ಉಂಗುರ ಹಾಗೂ ಮದುವೆ ಖರ್ಚು ನೋಡಿಕೊಂಡಿದ್ದೆವು. ವರದಕ್ಷಿಣೆ ಕೊಟ್ರೂ ಹಲ್ಲೆ ನಡೆಸಿ ಹೆಚ್ಚಿನ ಹಣಕ್ಕೆ ಒತ್ತಾಯಿಸಿದ್ದಾರೆ. ಹೀಗಾಗಿ ಜಗಳ ಆಗಿ ನನ್ನನ್ನು ಮನೆಯಿಂದ ಆಚೆ ಹಾಕಿದ್ದರು. ಇದರಿಂದ ನನಗೆ ಹಾಗೂ ನನ್ನ ಮಗನಿಗೆ ತೊಂದರೆಯಾಗುತ್ತೆ, ಒಂದು ವೇಳೆ ಏನಾದರೂ ಆದರೆ ಇವರುಗಳೇ ಕಾರಣ ಎಂದು ಆರೋಪಿಸಿ, ಕ್ರಮಕ್ಕಾಗಿ ಮನವಿ ಮಾಡಿಕೊಂಡಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago