ರಾಯಚೂರು: ಗಂಡನ ಮನೆಯವರ ಕಿರುಕುಳ ಸಹಿಸಲಾರದೇ ಗರ್ಭಿಣಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಬೂದಿಹಾಳ ಗ್ರಾಮದಲ್ಲಿ ನಡೆದಿದೆ.
ಚಾಮರಾಜನಗರ ಮೂಲದ ಅನುಪಮಾ (20) ಮೃತ ಗರ್ಭಿಣಿ. ಅನುಪಮಾ ಹಾಗೂ ರಾಯಚೂರಿನ ಬೂದಿಹಾಳದ ನಾಗರಾಜ್ ಇನ್ಸ್‌ಸ್ಟಾಗ್ರಾಂನಲ್ಲಿ ಪರಿಚಯವಾಗಿದ್ದರು. ಇಬ್ಬರು ಪ್ರೀತಿಸಿ 11 ತಿಂಗಳ ಹಿಂದೆ ಮದುವೆಯಾಗಿದ್ದರು. ಮದುವೆಯಾದ ಹೊಸದರಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು, ಆದರೆ ಇತ್ತೀಚೆಗೆ ನಾಗರಾಜ್ ಮನೆಯವರು ಜಾತಿ ಬೇರೆ, ವರದಕ್ಷಿಣೆ ತಂದಿಲ್ಲವೆಂದು ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ.
ಇದೀಗ ಗಂಡನ ಮನೆಯವರ ಕಿರುಕುಳ, ಹಿಂಸೆಯಿಂದಲೇ ತಮ್ಮ ಮಗಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೃತ ಅನುಪಮಾ ತಂದೆ ಆರೋಪಿಸಿದ್ದು, ಅನುಪಮಾ ಪತಿ ನಾಗರಾಜ್ ಸೇರಿ 6 ಜನರ ವಿರುದ್ಧ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಆರೋಪಿ ಪತಿ ನಾಗರಾಜ್‌ನನ್ನ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಿದ್ದಾರೆ
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…