ಚೆನ್ನೈ : 800 ಗ್ರಾಂ ಚಿನ್ನ, 70 ಲಕ್ಷ ರೂ. ಮೌಲ್ಯದ ಕಾರು ನೀಡಿದ ಬಳಿಕವೂ ವರದಕ್ಷಿಣೆಗಾಗಿ ಪತಿಯ ಮನೆಯವರು ನೀಡುತ್ತಿದ್ದ ಕಿರುಕುಳ ತಾಳಲಾಗದೇ ನವವಿವಾಹಿತೆ ಆತ್ಮಹತ್ಯೆ ಶರಣಾಗಿರುವ ಘಟನೆ ತಮಿಳುನಾಡಿನ ತಿರುಪ್ಪೂರಿನಲ್ಲಿ ನಡೆದಿದೆ.
ರಿಧನ್ಯಾ(27) ವರದಕ್ಷಿಣೆ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ. ಏಪ್ರಿಲ್‌ನಲ್ಲಿ ಕವಿನ್ ಕುಮಾರ್(28) ಎಂಬುವವರನ್ನು ರಿಧನ್ಯಾ ವಿವಾಹವಾಗಿದ್ದರು. ಮದುವೆಯಲ್ಲಿ ೮೦೦ ಗ್ರಾಂ ಚಿನ್ನಾಭರಣ ಮತ್ತು 70 ಲಕ್ಷ ರೂ. ಮೌಲ್ಯದ ವೋಲ್ವೋ ಕಾರನ್ನು ವರದಕ್ಷಿಣೆಯಾಗಿ ನೀಡಲಾಗಿತ್ತು.
ಭಾನುವಾರದಂದು ರಿಧನ್ಯಾ ಮೊಂಡಿಪಾಳ್ಯಂದಲ್ಲಿರುವ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ತಿಳಿಸಿ, ಮನೆಯಿಂದ ಹೊರಟಿದ್ದರು. ಬಳಿಕ ದಾರಿ ಮಧ್ಯೆ ಕಾರು ನಿಲ್ಲಿಸಿ, ಕೀಟನಾಶ ಸೇವಿಸಿದ್ದಾರೆ. ಬಹಳ ಹೊತ್ತಿನಿಂದ ಈ ಪ್ರದೇಶದಲ್ಲಿ ಕಾರು ನಿಂತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಪರಿಶೀಲನೆ ನಡೆಸಿದಾಗ ಆಕೆಯ ಶವ ಪತ್ತೆಯಾಗಿದೆ. ಜೊತೆಗೆ ಬಾಯಿಯಲ್ಲಿ ನೊರೆ ಬಂದಿರುವುದನ್ನು ಕಂಡು ಮೃತಪಟ್ಟಿರುವುದಾಗಿ ತಿಳಿದುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸದ್ಯ ರಿಧನ್ಯಾಳ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆಕೆಯ ಪತಿ ಕವಿನ್ ಕುಮಾರ್, ಮಾವ ಈಶ್ವರಮೂರ್ತಿ ಮತ್ತು ಅತ್ತೆ ಚಿತ್ರಾದೇವಿಯನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…