ಚಿಕ್ಕಮಗಳೂರು : ವರದಕ್ಷಿಣೆ ಕಿರುಕುಳ ನೀಡಿರುವುದಲ್ಲದೇ ಹಲ್ಲೆ ಮಾಡಿರುವ ಆರೋಪ ಸಂಬಂಧ ಕಳಸ ಪೊಲೀಸ್ ಠಾಣೆಯ ಪಿಎಸ್ಸೈ ನಿತ್ಯಾನಂದಗೌಡ ಅವರನ್ನು ಅಮಾನತು ಮಾಡಿ ಪಶ್ಚಿಮ ವಲಯದ ಐಜಿಪಿ ಅಮಿತ್ ಸಿಂಗ್ ಆದೇಶಿಸಿದ್ದಾರೆ.
ಜ.17ರಂದು ರಾತ್ರಿ ಕಳಸ ಪೊಲೀಸ್ ಠಾಣೆಯ ಪಿಎಸೈ ನಿತ್ಯಾನಂದ ಅವರು ಪಟ್ಟಣದ ಪೊಲೀಸ್ ವಸತಿಗೃಹದಲ್ಲಿ ತನ್ನ ಮೇಲೆ ಹಲ್ಲೆ ಮಾಡಿರುವುದಲ್ಲದೇ 50 ಲಕ್ಷ ರೂ. ವರದಕ್ಷಿಣೆ ನೀಡಬೇಕು ಎಂದು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಪಿಎಸ್ಸೈ ಪತ್ನಿ ಅಮಿತಾ ಎಂಬವರು ಕಳಸ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಈ ದೂರಿನ ಮೇರೆಗೆ ಪೊಲೀಸರು ಎಫ್‍ಐಆರ್ ದಾಖಲಿಸಿದ್ದರು. ಪತಿ ನಿತ್ಯಾನಂದಗೌಡ ಅವರೊಂದಿಗೆ ನಿತ್ಯಾನಂದಗೌಡ ತಾಯಿ ಪ್ರೇಮಾ, ಸಹೋದರಿ ಮೇನಕಾ, ಸಹೋದರ ಸೂರ್ಯಾನಂದ ಹಾಗೂ ಮೇನಕಾ ಪತಿ ಚಂದ್ರಕಾಂತ್ ಕೊಠಾರಿ ಎಂಬವರ ವಿರುದ್ಧ ಅಮಿತಾ ದೂರು ದಾಖಲಿಸಿದ್ದರು. ಪತ್ನಿಯ ದೂರಿನ ಬೆನ್ನಿಗೆ ಪಿಎಸ್ಸೈ ನಿತ್ಯಾನಂದ ಕೂಡ ಅಮಿತಾ ವಿರುದ್ಧವೂ ಕಳಸ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಹಿನ್ನೆಲೆಯಲ್ಲಿ ಠಾಣೆಯಲ್ಲಿ ದಂಪತಿ ವಿರುದ್ಧ ದೂರು ಪ್ರತಿದೂರು ದಾಖಲಾಗಿತ್ತು.
ಈ ಪ್ರಕರಣ ಸಂಬಂಧ ರವಿವಾರ ಪಶ್ಚಿಮ ವಲಯದ ಐಜಿಪಿ ಅಮಿತ್‍ಸಿಂಗ್ ಕಳಸ ಪೊಲೀಸ್ ಠಾಣೆಯ ಪಿಎಸ್ಸೈ ನಿತ್ಯಾನಂದ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…