ಚಿಕ್ಕಮಗಳೂರು: ಕಳಸ ಪಿಎಸ್ಸೈ ನಿತ್ಯಾನಂದ ಗೌಡ ವಿರುದ್ಧ ವರದಕ್ಷಿಣೆ ಕಿರುಕುಳ, ಹಲ್ಲೆ ಆರೋಪ ಕೇಳಿ ಬಂದಿದ್ದು, ಅವರ ಪತ್ನಿ ನೀಡಿರುವ ದೂರಿನಂತೆ ನಿತ್ಯಾನಂದ ಗೌಡರ ವಿರುದ್ಧ ಕಳಸ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ.
ಅಮಿತಾ ನಿತ್ಯಾನಂದ ಗೌಡ ಜ.17ರಂದು ರಾತ್ರಿ ಕಳಸ ಠಾಣೆಗೆ ನೀಡಿರುವ ದೂರಿನಲ್ಲಿ ತನ್ನ ಪತಿ ನಿತ್ಯಾನಂದ ಗೌಡ ಜ.17ರಂದು ತಾವಿರುವ ಪೊಲೀಸ್ ಕ್ವಾಟರ್ಸ್ ಗೆ ತನ್ನನ್ನು ಕರೆಸಿಕೊಂಡು ದೈಹಿಕವಾಗಿ ಹಲ್ಲೆ ಮಾಡಿದ್ದಾರೆ. 50 ಲಕ್ಷ ರೂ. ವರದಕ್ಷಿಣೆ ನೀಡಬೇಕು, ಇಲ್ಲವಾದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.
ನಿತ್ಯಾನಂದ ಗೌಡರ ತಂಗಿ ಮೇನಕಾ ಗಂಡ ಚಂದ್ರಕಾಂತ್ ಕೊಠಾರಿ ಕೂಡಾ ದಬಾಯಿಸಿ, ಹಲ್ಲೆಗೆ ಮುಂದಾಗಿದ್ದಾನೆ ಎಂದು ಅಮಿತಾ ದೂರಿದ್ದಾರೆ.
ಈ ಬಗ್ಗೆ ಕಳಸ ಪಿಎಸ್ಸೈ ನಿತ್ಯಾನಂದ ಗೌಡ, ಅವರ ತಂಗಿ ಮೇನಕಾ, ಬಾವ ಚಂದ್ರಕಾಂತ್ ಕೊಠಾರಿ ಹಾಗೂ ತಾಯಿ ಪ್ರೇಮಾ ಕುಮಾರ್ ಗೌಡ ವಿರುದ್ಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…