ಬೆಂಗಳೂರು: ವರದಕ್ಷಿಣೆ ಹಾಗೂ ಕೌಟುಂಬಿಕ ದೌರ್ಜನ್ಯಕ್ಕೆ ಬೇಸತ್ತು ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಗುಂಟೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಾಗಮಂಗಲದ ಚೀಣ್ಯ ಮೂಲದ ಐಶ್ವರ್ಯಾ (26) ಆತ್ಮಹತ್ಯೆ ಮಾಡಿಕೊಂಡವರು. ಈ ಸಂಬಂಧ ಆಕೆಯ ಪತಿ ಲಿಖಿತ್ ಸಿಂಹ, ಸಹೋದರ ವರುಣ್ ಸಿಂಹ, ತಾಯಿ ಅರುಣಾ ಸಿಂಹರನ್ನು ಬಂಧಿಸಲಾಗಿದೆ. ಬುಧವಾರ ಸಂಜೆ ಮನೆಯಲ್ಲೇ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.
ಪ್ರಾಥಮಿಕವಾಗಿ ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಆದರೆ, ಐಶ್ವರ್ಯ ಅವರ ತಂದೆ ಕೃಷ್ಣ ಅವರು ವರದಕ್ಷಿಣೆ ಹಾಗೂ ಹಲ್ಲೆ ಆರೋಪದಡಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿ ಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು. ನಾಗಮಂಗಲದ ಚೀಣ್ಯ ಮೂಲದ ಐಶ್ವರ್ಯ ಎಂಬಿಎ ವ್ಯಾಸಂಗ ಮಾಡಿದ್ದು, ರಿಯಲ್ ಎಸ್ಟೇಟ್ ವ್ಯವಹಾರ ನಡೆಸುವ ಮಲ್ಲಸಂದ್ರ ನಿವಾಸಿ ಲಿಖಿತ್ ಸಿಂಹನನ್ನು ಅಕ್ಟೋಬರ್ 26ರಂದು ಮದುವೆಯಾಗಿ ದ್ದರು. ಮದುವೆ ಸಂದರ್ಭದಲ್ಲೇ ಹೆಚ್ಚಿನ ಚಿನ್ನಾಭರಣಕ್ಕೆ ಬೇಡಿಕೆ ಇಟ್ಟಿದ್ದು, ಇಡೀ ಮದುವೆಗೆ 18 ಲಕ್ಷ ರೂ. ಖರ್ಚು ಮಾಡಲಾಗಿತ್ತು. ಆದರೆ, ಮದುವೆಯಾದ 15 ದಿನಕ್ಕೆ ಪತಿ ಮತ್ತು ಆತನ ಕುಟುಂಬ ಸದಸ್ಯರು ವರದಕ್ಷಿಣೆ ಕಿರುಕುಳ ನೀಡಿ, ಆಕೆ ಮೇಲೆ ಹಲ್ಲೆ ನಡೆಸಿದ್ದಾರೆ. ಅದರಿಂದ ಬೇಸತ್ತ ಆಕೆ ತವರು ಮನೆಗೆ ಹೋಗಿ, ಪೋಷಕರ ಬಳಿ ಹೇಳಿಕೊಂಡಿದ್ದರು.
ಬಳಿಕ ಡಿ.24ರಂದು ಬೆಳಗ್ಗೆ ಕೂಡ ಆಕೆಯ ಪೋಷಕರು ಬಂದು ರಾಜಿಸಂಧಾನ ಮಾಡಿ ಹೋಗಿದ್ದರು. ಚಿನ್ನ, ಹಣ ತರುವಂತೆ ಒತ್ತಾಯ: ಲಿಖೀತ್ ಮತ್ತು ಕುಟುಂಬ ಸದಸ್ಯರು ತವರು ಮನೆಯಿಂದ ಹಣ ಹಾಗೂ ಚಿನ್ನಾಭರಣ ತರುವಂತೆ ಐಶ್ವರ್ಯಾಗೆ ಕಿರುಕುಳ ಕೊಡುತ್ತಿದ್ದರು. ಲಿಖಿತ್, ಪತ್ನಿಯೊಂದಿಗೆ ಸಣ್ಣಪುಟ್ಟ ವಿಚಾರಕ್ಕೂ ಜಗಳವಾಡಿ ಮನಬಂದಂತೆ ನಿಂದಿಸುತ್ತಿ ದ್ದರು. ಪ್ರತಿ ವಿಚಾರದಲ್ಲೂ ತಾಯಿಯ ಅಣತಿಯಂತೆ ನಡೆದುಕೊಳ್ಳುತ್ತಿದ್ದರು. ಪತ್ನಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದರು. ಈ ವಿಷಯ ತಿಳಿದು ಐಶ್ವರ್ಯಾ ಕುಟುಂಬಸ್ಥರು ಬುಧವಾರ ಬೆಳಿಗ್ಗೆ ಲಿಖಿತ್ ಮನೆಗೆ ಬಂದು ಮಾತುಕತೆ ನಡೆಸಿ ಹೋಗಿದ್ದರು. ಆದರೆ, ರಾತ್ರಿ 8 ಗಂಟೆ ಸುಮಾರಿಗೆ ಲಿಖಿತ್ ಕರೆ ಮಾಡಿ ಐಶ್ವರ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಿದ್ದ ಎಂದು ಆಕೆಯ ಪೋಷಕರು ಆರೋಪಿಸಿದ್ದಾರೆ.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…