ವರನಟನಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಮನವಿ -Vishwanews24

ಬೆಂಗಳೂರು,:ವರನಟ ಡಾ.ರಾಜ್‍ಕುಮಾರ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕೆಂದು ಅಖಿಲ ಕರ್ನಾಟಕ ಶಿವರಾಜ್‍ಕುಮಾರ್ ಹಾಗೂ ರಾಜರತ್ನ ಪುನೀತ್‍ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.

ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್.ಆರ್.ರಮೇಶ್ ನೇತೃತ್ವದಲ್ಲಿಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾದ ಸಂಘದ ಪದಾಧಿಕಾರಿಗಳು ಈ ಮನವಿ ಮಾಡಿಕೊಂಡಿದ್ದಾರೆ.

ಕನ್ನಡದ ನಾಡು-ನುಡಿಯನ್ನು ಮುಗಿಲೆತ್ತರಕ್ಕೇರಿಸಿದ ಕರ್ನಾಟಕ ರತ್ನ, ಪದ್ಮಭೂಷಣ ಡಾ.ರಾಜ್‍ಕುಮಾರ್ ಅವರಿಗೆ ಭಾರತ ರತ್ನ ನೀಡುವಂತೆ ಶಿಫಾರಸು ಮಾಡುವುದರ ಜತೆಗೆ ಚಾಮರಾಜನಗರ ತಾಲ್ಲೂಕಿಗೆ ಡಾ.ರಾಜ್‍ಕುಮಾರ್ ತಾಲ್ಲೂಕು ಎಂದು ಮರುನಾಮಕರಣ ಮಾಡಬೇಕು ಹಾಗೂ ಮಾಗಡಿ ರಸ್ತೆಯ ಮೆಟ್ರೋ ನಿಲ್ದಾಣಕ್ಕೆ ರಾಜ್‍ಕುಮಾರ್ ನಿಲ್ದಾಣ ಎಂದು ಹೆಸರಿಡುವಂತೆ ಅಭಿಮಾನಿಗಳು ಒತ್ತಾಯಿಸಿದರು.

ಇದೇ ಸಂದರ್ಭದಲ್ಲಿ ಚಿತ್ರರಂಗದಲ್ಲಿ 34 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವ ಕರುನಾಡ ಚಕ್ರವರ್ತಿ ಶಿವರಾಜ್‍ಕುಮಾರ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡುವಂತೆಯೂ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಅಭಿಮಾನಿಗಳು ಮನವಿ ಮಾಡಿಕೊಂಡರು.

ಅಭಿಮಾನಿಗಳ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆಶ್ವಾಸನೆ ಈಡೇರಿಸುವ ಭರವಸೆ ನೀಡಿದ್ದಾರೆ ಎಂದು ಎನ್.ಆರ್.ರಮೇಶ್ ತಿಳಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago