ಸಾವರ್ಕರ್ ಒಬ್ಬ ಬ್ರಾಹ್ಮಣ , ಮಾಂಸಾಹಾರ ಸೇವನೆ ಮಾಡುತ್ತಿದ್ದರು : ದಿನೇಶ್ ಗುಂಡೂರಾವ್ – vishwanews24

Featured, ರಾಜ್ಯ ನ್ಯೂಸ್

ಸಾವರ್ಕರ್ ಬ್ರಾಹ್ಮಣ , ಮಾಂಸಾಹಾರ ಸೇವನೆ ಮಾಡುತ್ತಿದ್ದರು : ದಿನೇಶ್ ಗುಂಡೂರಾವ್

ಮಹಾತ್ಮ ಗಾಂಧಿ ಸಸ್ಯಾಹಾರಿ, ಅವರಿಗೆ ಹಿಂದೂ ಸಂಸ್ಕೃತಿ ಬಗ್ಗೆ ಅಪಾರ ಗೌರವ, ನಂಬಿಕೆ ಇತ್ತು

ಬೆಂಗಳೂರು: ‘ವಿನಾಯಕ ದಾಮೋದರ್ ಸಾವರ್ಕರ್ ಒಬ್ಬ ಚಿತ್ಪಾವನ ಬ್ರಾಹ್ಮಣ. ಅವರು ಮಾಂಸಾಹಾರ ಸೇವನೆ ಮಾಡುತ್ತಿದ್ದರು. ಅವರು ಗೋಹತ್ಯೆಗೆ ವಿರುದ್ಧವಾಗಿರಲಿಲ್ಲ’ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿರುವುದು ಈಗ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.

ಗಾಂಧಿ ಜಯಂತಿ ಪ್ರಯುಕ್ತ ಬುಧವಾರ ಬೆಂಗಳೂರಿನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಅವರು, ಸಾವರ್ಕರ್ ಮೂಲಭೂತವಾದಿಯಾಗಿದ್ದರು. ಆದರೆ, ಅವರು ಮಾಡರ್ನ್ ಕೂಡ ಆಗಿದ್ದರು. ಅವರು ಗೋಮಾಂಸ ಸೇವಿಸುತ್ತಿದ್ದರು ಎಂದೂ ಕೆಲವು ಜನ ಹೇಳುತ್ತಿದ್ದಾರೆ ಎಂದಿದ್ದರು.

ವಿಧಾನ ಪರಿಷತ್ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ನಾಮಪತ್ರ ಸಲ್ಲಿಕೆ – vishwanews24

 

ಸಾವರ್ಕರ್ ಬ್ರಾಹ್ಮಣ, ಹಾಗೆಂದು ಅವರು ಖಂಡಿತವಾಗಿಯೂ ಮಾಂಸಾಹಾರ ಸೇವನೆ ಮಾಡುತ್ತಿದ್ದರು. ಮೂಲಭೂತವಾದಿಯಾಗಿದ್ದರೂ ಮಾಡರ್ನ್ ಆಗಿದ್ದ ಅವರು ದನದ ಮಾಂಸ ಸೇವನೆ ಮಾಡುತ್ತಿದ್ದರು ಎಂದು ಕೆಲವರು ಹೇಳಿದ್ದಾರೆ. ಸಾವರ್ಕರ್ ಬಹಿರಂಗವಾಗಿಯೇ ಮಾಂಸಾಹಾರ ಸೇವನೆ ಬಗ್ಗೆ ಅರಿವು ಮೂಡಿಸುತ್ತಿದ್ದರು ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಹಾಗೆ ನೋಡಲು ಹೋದರೆ ಮಹಾತ್ಮ ಗಾಂಧಿ ಸಸ್ಯಾಹಾರಿ. ಅವರಿಗೆ ಹಿಂದೂ ಸಂಸ್ಕೃತಿ ಬಗ್ಗೆ ಅಪಾರವಾದ ಗೌರವ, ನಂಬಿಕೆ ಇತ್ತು. ಆದರೆ, ಅವರ ಅಭಿಪ್ರಾಯ ಬೇರೆ ರೀತಿಯಲ್ಲತ್ತು. ಅವರು ಡೆಮಾಕ್ರಟಿಕ್ ಆಗಿದ್ದರು ಎಂದು ಗುಂಡೂರಾವ್ ಹೇಳಿದ್ದರು.

ಮಂಗಳೂರು : ಬಿಜೆಪಿ‌ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ನಾಮಪತ್ರ ಸಲ್ಲಿಕೆ – vishwanews24

 

Leave a Reply