ನವದೆಹಲಿ : ವಲಸೆ ಕಾರ್ಮಿಕ ಕುಟುಂಬಕ್ಕೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರ ರೇಷನ್ ವಿತರಣಾ ವ್ಯವಸ್ಥೆಯಲ್ಲಿ ಹೊಸ ಯೋಜನೆಯನ್ನು ಜಾರಿಗೆ ತರಲಿದೆ.
ಕೆಲವು ಕಾರ್ಮಿಕರು ಕೆಲಸದ ನಿಮಿತ್ತ ದೇಶಾದ್ಯಂತ ವಲಸೆ ಹೋಗುತ್ತಾರೆ. ಈ ಹಿನ್ನಲೆಯಲ್ಲಿ ಅವರಿಗೂ ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪ್ರಡೆಯಲು ಅನುಕೂಲವಾಗುವಂತೆ ಕೇಂದ್ರ ಸರ್ಕಾರ ‘ಒನ್ ನೇಷನ್ ಒನ್ ರೇಷನ್ ಕಾರ್ಡ್’ ಯೋಜನೆಯನ್ನು ಜಾರಿಗೊಳಿಸುವ ನಿರ್ಧಾರ ಕೈಗೊಂಡಿದೆ.
ಕೇಂದ್ರ ಆಹಾರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅಧ್ಯಕ್ಷ ತೆಯಲ್ಲಿ ರಾಜ್ಯ ಆಹಾರ ಕಾರ್ಯದರ್ಶಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ತ್ವರಿತ ಜಾರಿಗೆ ಸೂಚಿಸಲಾಗಿದೆ. ಭಾರತೀಯ ಆಹಾರ ನಿಗಮ, ಕೇಂದ್ರ ಉಗ್ರಾಣ ನಿಗಮ, ರಾಜ್ಯ ಉಗ್ರಾಣ ನಿಗಮಗಳ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು.
”ಇದರಿಂದ ವಲಸೆ ಕಾರ್ಮಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಅವರಿಗೆ ಪೂರ್ಣ ಆಹಾರ ಭದ್ರತೆ ದೊರೆಯಲಿದೆ. ಇಂತಹ ಕಾರ್ಮಿಕರು ಯಾವುದೇ ನಿರ್ದಿಷ್ಟ ಪಡಿತರ ಅಂಗಡಿಯಿಂದ ಆಹಾರ ಧಾನ್ಯಗಳನ್ನು ಖರೀದಿಸಬೇಕಾಗಿಲ್ಲ. ಬದಲಾಗಿ ತಮಗೆ ಸಮೀಪದ ಯಾವುದೇ ಪಡಿತರ ಅಂಗಡಿಯಿಂದಲೂ ಖರೀದಿಸಬಹುದಾಗಿದೆ. ಜತೆಗೆ ಭ್ರಷ್ಟಾಚಾರಕ್ಕೂ ಕಡಿವಾಣ ಬೀಳಲಿದೆ,” ಎಂದು ಸಚಿವ ಪಾಸ್ವಾನ್ ಅವರು ಸಭೆಯ ಬಳಿಕ ತಿಳಿಸಿದರು.
ಇದರಿಂದ ಅವರು ನಿರ್ದಿಷ್ಟ ಪಡಿತರ ಅಂಗಡಿಯಿಂದ ಆಹಾರ ಧಾನ್ಯಗಳನ್ನು ಖರೀದಿಸಬೇಕಾಗಿಲ್ಲ. ತಮಗೆ ಹತ್ತಿರವಿರುವ ಯಾವುದೇ ಪಡಿತರ ಅಂಗಡಿಯಿಂದಲೂ ಆಹಾರಧಾನ್ಯ ಖರೀದಿಸಬಹುದಾಗಿದೆ.
ಅಲ್ಲದೇ ಈ ಯೋಜನೆಯಿಂದ ಒಂದೇ ಕುಟುಂಬದವರು ಒಂದಕ್ಕಿಂತ ಹೆಚ್ಚು ಕಾರ್ಡ್ ಗಳನ್ನು ಪಡೆಯುವುದನ್ನು ತಪ್ಪಿಸಬಹುದು. ಇದರಿಂದ ದೇಶದ ಬೊಕ್ಕಸಕ್ಕೂ ಉಳಿತಾಯವಾಗುತ್ತದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…