Featured

ವಲಸೆ ಕಾರ್ಮಿಕರಿಗೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರದಿಂದ ಒನ್ ನೇಷನ್, ಒನ್ ರೇಷನ್ ಕಾರ್ಡ್ ವಿತರಣಾ ವ್ಯವಸ್ಥೆ -Vishwanews24

ನವದೆಹಲಿ : ವಲಸೆ ಕಾರ್ಮಿಕ ಕುಟುಂಬಕ್ಕೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರ ರೇಷನ್ ವಿತರಣಾ ವ್ಯವಸ್ಥೆಯಲ್ಲಿ ಹೊಸ ಯೋಜನೆಯನ್ನು ಜಾರಿಗೆ ತರಲಿದೆ.

ಕೆಲವು ಕಾರ್ಮಿಕರು ಕೆಲಸದ ನಿಮಿತ್ತ ದೇಶಾದ್ಯಂತ ವಲಸೆ ಹೋಗುತ್ತಾರೆ. ಈ ಹಿನ್ನಲೆಯಲ್ಲಿ ಅವರಿಗೂ ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪ್ರಡೆಯಲು ಅನುಕೂಲವಾಗುವಂತೆ ಕೇಂದ್ರ ಸರ್ಕಾರ ‘ಒನ್ ನೇಷನ್ ಒನ್ ರೇಷನ್ ಕಾರ್ಡ್’ ಯೋಜನೆಯನ್ನು ಜಾರಿಗೊಳಿಸುವ ನಿರ್ಧಾರ ಕೈಗೊಂಡಿದೆ.

ಕೇಂದ್ರ ಆಹಾರ ಸಚಿವ ರಾಮ್‌ ವಿಲಾಸ್‌ ಪಾಸ್ವಾನ್‌ ಅಧ್ಯಕ್ಷ ತೆಯಲ್ಲಿ ರಾಜ್ಯ ಆಹಾರ ಕಾರ್ಯದರ್ಶಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ತ್ವರಿತ ಜಾರಿಗೆ ಸೂಚಿಸಲಾಗಿದೆ. ಭಾರತೀಯ ಆಹಾರ ನಿಗಮ, ಕೇಂದ್ರ ಉಗ್ರಾಣ ನಿಗಮ, ರಾಜ್ಯ ಉಗ್ರಾಣ ನಿಗಮಗಳ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು.

”ಇದರಿಂದ ವಲಸೆ ಕಾರ್ಮಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಅವರಿಗೆ ಪೂರ್ಣ ಆಹಾರ ಭದ್ರತೆ ದೊರೆಯಲಿದೆ. ಇಂತಹ ಕಾರ್ಮಿಕರು ಯಾವುದೇ ನಿರ್ದಿಷ್ಟ ಪಡಿತರ ಅಂಗಡಿಯಿಂದ ಆಹಾರ ಧಾನ್ಯಗಳನ್ನು ಖರೀದಿಸಬೇಕಾಗಿಲ್ಲ. ಬದಲಾಗಿ ತಮಗೆ ಸಮೀಪದ ಯಾವುದೇ ಪಡಿತರ ಅಂಗಡಿಯಿಂದಲೂ ಖರೀದಿಸಬಹುದಾಗಿದೆ. ಜತೆಗೆ ಭ್ರಷ್ಟಾಚಾರಕ್ಕೂ ಕಡಿವಾಣ ಬೀಳಲಿದೆ,” ಎಂದು ಸಚಿವ ಪಾಸ್ವಾನ್‌ ಅವರು ಸಭೆಯ ಬಳಿಕ ತಿಳಿಸಿದರು.

ಇದರಿಂದ ಅವರು ನಿರ್ದಿಷ್ಟ ಪಡಿತರ ಅಂಗಡಿಯಿಂದ ಆಹಾರ ಧಾನ್ಯಗಳನ್ನು ಖರೀದಿಸಬೇಕಾಗಿಲ್ಲ. ತಮಗೆ ಹತ್ತಿರವಿರುವ ಯಾವುದೇ ಪಡಿತರ ಅಂಗಡಿಯಿಂದಲೂ ಆಹಾರಧಾನ್ಯ ಖರೀದಿಸಬಹುದಾಗಿದೆ.

ಅಲ್ಲದೇ ಈ ಯೋಜನೆಯಿಂದ ಒಂದೇ ಕುಟುಂಬದವರು ಒಂದಕ್ಕಿಂತ ಹೆಚ್ಚು ಕಾರ್ಡ್ ಗಳನ್ನು ಪಡೆಯುವುದನ್ನು ತಪ್ಪಿಸಬಹುದು. ಇದರಿಂದ ದೇಶದ ಬೊಕ್ಕಸಕ್ಕೂ ಉಳಿತಾಯವಾಗುತ್ತದೆ.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

4 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

4 days ago