Featured

ವಲಸೆ ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ಹಣ ಹಾಕುವುದು ಕೇಂದ್ರ ಸರ್ಕಾರದ ಜವಾಬ್ದಾರಿ : ರಾಹುಲ್ ಗಾಂಧಿ -Vishwanews24

ವಲಸೆ ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ಹಣ ಹಾಕುವುದು ಕೇಂದ್ರ ಸರ್ಕಾರದ ಜವಾಬ್ದಾರಿ : ರಾಹುಲ್ ಗಾಂಧಿ -Vishwanews24

ನವದೆಹಲಿ: ದೆಹಲಿಯಲ್ಲಿ ಸೋಮವಾರ ರಾತ್ರಿಯಿಂದ ಆರು ದಿನಗಳ ಕಾಲ ಲಾಕ್‌ಡೌನ್ ಘೋಷಿಸಿದ ನಂತರ, ಸಾವಿರಾರು ಕಾರ್ಮಿಕರು ಸಂಕಷ್ಟದಲ್ಲಿ ಸಿಲುಕಿದ್ದು, ಕೇಂದ್ರ ಸರ್ಕಾರ ಅವರೆಲ್ಲರಿಗೂ ಆರ್ಥಿಕ ನೆರವು ನೀಡಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

ಲಾಕ್‌ಡೌನ್ ಘೋಷಣೆಯಾಗುತ್ತಿದ್ದಂತೆ ಸಾವಿರಾರು ಮಂದಿ ವಲಸೆ ಕಾರ್ಮಿಕರು ಸೋಮವಾರ ತಮ್ಮ ತಮ್ಮ ಊರುಗಳಿಗೆ ತೆರಳಲು ದೆಹಲಿಯ ಆನಂದ ವಿಹಾರ ಬಸ್‌ ಟರ್ಮಿನಲ್‌ ಬಳಿ ಜಮಾಯಿಸಿದ್ದರು. ಕೆಲಸವೂ ಇಲ್ಲದೇ, ದುಡಿಮೆಯಿಲ್ಲದೇ ಸಂಕಷ್ಟ ಎದುರಿಸುತ್ತಿರುವ ಈ ವಲಸೆ ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ಹಣ ಹಾಕುವುದು ಕೇಂದ್ರ ಸರ್ಕಾರದ ಜವಾಬ್ದಾರಿ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಚಿಕ್ಕಮಗಳೂರು : 2012 ರಲ್ಲಿ ತಯಾರಾದ ಗ್ಲುಕೋಸ್ , 2021ರ ಲೇಬಲ್ ಅಂಟಿಸಿ ಮತ್ತೆ ಮಾರಾಟ -Vishwanews24

‘ಒಂದು ಕಡೆ ಕಾರ್ಮಿಕರು ವಲಸೆ ಹೊರಟಿದ್ದರೆ, ಮತ್ತೊಂದೆಡೆ ಸರ್ಕಾರವು ಜನರೇ ಕೊರೊನಾ ಸೋಂಕನ್ನು ಹರಡುತ್ತಿದ್ದಾರೆ ಎಂದು ದೂರುತ್ತಿದೆ. ಇಂಥ ಸರ್ಕಾರದಿಂದ ಸಾರ್ವಜನಿಕರಿಗೆ ನೆರವು ಸಿಗಲು ಹೇಗೆ ಸಾಧ್ಯ‘ ಎಂದು ರಾಹುಲ್ ಗಾಂಧಿ ಟ್ವಿಟರ್‌ನಲ್ಲಿ ಪ್ರಶ್ನಿಸಿದ್ದಾರೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ‘ ಕೋವಿಡ್‌ ಸ್ಥಿತಿ ಭಯ ಹುಟ್ಟಿಸುತ್ತಿದೆ. ಇದು ಕೇಂದ್ರ ಸರ್ಕಾರ ಸೂಕ್ತ ಸಮಯದಲ್ಲಿ ಲಾಕ್‌ಡೌನ್‌ನಂತಹ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವಲ್ಲಿ ವಿಫಲವಾಗಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಆದರೆ ವಲಸೆ ಕಾರ್ಮಿಕರು ಮತ್ತೆ ನಗರಗಳನ್ನು ಬಿಟ್ಟು ತಮ್ಮೂರಿನತ್ತ ಹೊರಟಿದ್ದಾರೆ‘ ಎಂದು ಟ್ವೀಟ್‌ ಮಾಡಿದ್ದಾರೆ.

‘ನಿಮ್ಮ ಪ್ಲಾನ್ ಇದೇನಾ ? ಸರ್ಕಾರದ ನೀತಿಗಳು ಪ್ರತಿಯೊಬ್ಬರನ್ನೂ ರಕ್ಷಿಸುವಂತಿರಬೇಕು. ಸದ್ಯ ಬಡವರು, ಕಾರ್ಮಿಕರು ಮತ್ತು ಬೀದಿಬದಿ ವ್ಯಾಪಾರಿಗಳಿಗೆ ಅಗತ್ಯವಾಗಿ ಆರ್ಥಿಕ ನೆರವು ಬೇಕಾಗಿದೆ. ದಯವಿಟ್ಟು, ಅವರಿಗೆ ನೆರವಾಗಿ‘ ಎಂದು ಪ್ರಿಯಾಂಕಾ ಹಿಂದಿಯಲ್ಲಿ ಟ್ವೀಟ್‌ ಮಾಡಿದ್ದಾರೆ.

ಮೂರು ತಿಂಗಳ ಅವಧಿಗೆ ಉಚಿತ ಪಡಿತರ ಘೋಷಿಸಿದ ಮಧ್ಯಪ್ರದೇಶ ಸರ್ಕಾರ -Vishwanews24

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

7 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

16 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

16 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

16 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

16 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago