Featured

ವಾಟ್ಸಪ್, ಫೇಸ್ ಬುಕ್, ಇನ್ ಸ್ಟಾ ದಲ್ಲಿ ಯಾವುದೇ ಪಕ್ಷದ ಪರವಾಗಿ ಚುನಾವಣಾ ಪ್ರಚಾರ ಮಾಡುವಂತಿಲ್ಲ- Vishwanews24

ನವದೆಹಲಿ,: ಲೋಕಸಭೆ ಚುನಾವಣೆಗೆ ದಿನಾಂಕ ನಿಗಧಿಯಾಗಿದೆ. ಈ ಬೆನ್ನಲ್ಲೇ ಎಲ್ಲಾ ರೀತಿಯ ಮುಂಜಾಗ್ರತ ಕ್ರಮಗಳನ್ನು ಆಯೋಗ ವಹಿಸಿಕೊಂಡಿದೆ. ತಕ್ಷಣದಿಂದಲೇ ಚುನಾವಣಾ ನೀತಿ ಸಂಹಿತೆ ಕೂಡ ಜಾರಿಗೊಂಡಿದೆ. ಇದರ ನಡುವೆಯೇ, ಸಾಮಾಜಿಕ ಜಾಲ ತಾಣಗಳ ಮೇಲೆ ಆಯೋಗ ನಿಗಾ ಇರಿಸಿದೆ.

ಪ್ರಸ್ತುತ ದಿನಗಳಲ್ಲಿ ಅತ್ಯಧಿಕ ಬಳಕೆಯಲ್ಲಿರುವ ಹಾಗೂ ಅತೀ ವೇಗವಾಗಿ ಸುದ್ದಿಗಳು ಪ್ರಚಾರಗೊಳ್ಳುವ ಸೋಷಿಯಲ್ ಮೀಡಿಯಾಗಳ ಮೇಲೆ ನಿಗಾ ಇರಿಸಲಾಗಿದೆ. ಸೋಷಿಯಲ್ ಮೀಡಿಯಾಗಳನ್ನು ಪ್ರಚಾರಕ್ಕೆ ಬಳಸಿ, ಅಪಪ್ರಚಾರ ನಡೆಸದಂತೆ ಎಚ್ಚರಿಕಾ ಕ್ರಮ ವಹಿಸಿಕೊಂಡಿದೆ.

ಚುನಾವಣೆ ಹಿನ್ನೆಲೆ ಇನ್ನು ಸೋಷಿಯಲ್ ಮೀಡಿಯಾಗಳಲ್ಲಿ ಮನಬಂದತೆ ಟ್ವಿಟ್ ಮಾಡುವಂತಿಲ್ಲ. ವಾಟ್ಸಪ್ ಗಳಲ್ಲಿ ಚುನಾವಣಾ ಪ್ರಚಾರ ಮಾಡಿದ್ದಲ್ಲಿ ವಾಟ್ಸಪ್ ಅಡ್ಮಿನ್ ಗಳ ವಿರುದ್ಧ ಕ್ರಮಕೈಗೊಳ್ಳಲು ನಿರ್ಧರಿಸಲಾಗಿದೆ. ಫೇಸ್ ಬುಕ್ ಗಳಲ್ಲಿ ಚುನಾವಣಾ ಪ್ರಚಾರ ಮಾಡಿದ್ದಲ್ಲಿ ಅವರ ವಿರುದ್ಧ ಎಫ್ ಐಆರ್ ದಾಖಲಿಸಲು ತೀರ್ಮಾನಿಸಲಾಗಿದೆ. ಇನ್ನು ಇನ್ ಸ್ಟಾದಲ್ಲಿ ಅಭ್ಯರ್ಥಿ ಫೋಟೊ ಹಾಕುವಂತಿಲ್ಲ. ಈ ಎಲ್ಲಾ ನಿರ್ದೇಶನಗಳನ್ನು ಆಯೋಗ ನೀಡಿದ್ದು, ವಾಟ್ಸಪ್ ಫೇಸ್ ಬುಕ್ ಕಂಪನೆಗಳ ಮುಖ್ಯಸ್ಥರ ಜತೆ ಮಾತುಕತೆ ಕೂಡ ನಡೆಸಿದೆ.

ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರದಿಂದಿರಲು ಸೂಚನೆ ನೀಡಿದೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

20 minutes ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 hour ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

3 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

3 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

4 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

4 hours ago