ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು ಜೂನ್ 1 ರಿಂದ ತಕ್ಷಣದಿಂದಲೇ ಜಾರಿಗೆ ಬರುವಂತೆ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು 69.50 ರೂ. ಕಡಿತಗೊಳಿಸಿವೆ.
ಇದರೊಂದಿಗೆ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಚಿಲ್ಲರೆ ಮಾರಾಟ ಬೆಲೆ 1,676 ರಷ್ಟಿದೆ. ದೇಶಾದ್ಯಂತ ಮೆಟ್ರೋ ನಗರಗಳಿಗೂ ಇದು ಅನ್ವಯವಾಗಿದೆ.
ಮುಂಬೈನಲ್ಲಿ ಕೂಡ 69.50 ರೂ. ಇಳಿಕೆಯಾಗಿದ್ದು, ಪರಿಷ್ಕೃತ ಬೆಲೆಯನ್ನು 1,629 ಕ್ಕೆ ನಿಗದಿಪಡಿಸಲಾಗಿದೆ. ಚೆನ್ನೈನಲ್ಲಿ ಬೆಲೆ 1,841.50 ರಷ್ಟಿದ್ದರೆ, ಕೋಲ್ಕತ್ತಾದಲ್ಲಿ ಬೆಲೆ ಕಡಿತದ ನಂತರ 1,789.50 ರೂ. ಆಗಿದೆ.
ಮಾರ್ಚ್ 1 ರಂದು 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ದರವನ್ನು 19 ರೂ. ಇಳಿಕೆಯಾಗಿತ್ತು. ಏಪ್ರಿಲ್‌ನಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್‌ಗಳು ಮತ್ತು 5 ಕೆಜಿ ಎಫ್‌ಟಿಎಲ್ (ಫ್ರೀ ಟ್ರೇಡ್ ಎಲ್‌ಪಿಜಿ) ಸಿಲಿಂಡರ್‌ಗಳ ಬೆಲೆಯನ್ನು ಕ್ರಮವಾಗಿ 30.50 ರೂ. ಮತ್ತು 7.50 ರೂ. ರಷ್ಟು ಕಡಿತಗೊಳಿಸಲಾಗಿತ್ತು.
ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಎಚ್‌ಪಿಸಿಎಲ್) ಪ್ರತಿ ತಿಂಗಳ 1 ರಂದು ಅಡುಗೆ ಅನಿಲ ಬೆಲೆಗಳನ್ನು ಪರಿಷ್ಕರಿಸುತ್ತವೆ.
ಬೆಲೆ ಇಳಿಕೆಯ ಹಿಂದಿನ ನಿಖರವಾದ ಕಾರಣಗಳನ್ನು ಬಹಿರಂಗಪಡಿಸಲಾಗಿಲ್ಲವಾದರೂ, ಅಂತರರಾಷ್ಟ್ರೀಯ ತೈಲ ಬೆಲೆಗಳಲ್ಲಿನ ಬದಲಾವಣೆಗಳು, ತೆರಿಗೆ ನೀತಿಗಳಲ್ಲಿನ ಬದಲಾವಣೆಗಳು ಮತ್ತು ಪೂರೈಕೆ-ಬೇಡಿಕೆ ಯಂತಹ ವಿವಿಧ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಬೆಲೆ ಪರಿಷ್ಕರಿಸಲಾಗುತ್ತದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…