Featured

ವಾಣಿಜ್ಯ ಎಲ್‌ಪಿಜಿ  ಸಿಲಿಂಡರ್‌ ಬೆಲೆ 51 ರೂ. ಇಳಿಕೆ – vishwanews24

ವಾಣಿಜ್ಯ ಎಲ್‌ಪಿಜಿ  ಸಿಲಿಂಡರ್‌ ಬೆಲೆ 51 ರೂ. ಇಳಿಕೆ

ನವದೆಹಲಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ  ಬೆಲೆ 51.50 ರೂ. ಇಳಿಕೆಯಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು ಸೆಪ್ಟೆಂಬರ್ 1 ರಿಂದ ಜಾರಿಗೆ ಬರುವಂತೆ 51.50 ರೂ.ಗಳಷ್ಟು ಕಡಿಮೆ ಮಾಡುವುದಾಗಿ ತಿಳಿಸಿವೆ.

ವಾಣಿಜ್ಯ ಬಳಕೆಯ ಸಿಲಿಂಡರ್‌ ಬೆಲೆ ಮಾತ್ರ ಕಡಿಮೆಯಾಗಿದ್ದು 14.2 ಕೆಜಿ ಗೃಹ ಬಳಕೆಯ ಸಿಲಿಂಡರ್‌ಗಳ  ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಪರಿಷ್ಕರಣೆಯ ನಂತರ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ LPG ಸಿಲಿಂಡರ್ ಈಗ 1,580 ರೂ.ಗಳಿಗೆ ಲಭ್ಯವಿರುತ್ತದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ದರಕ್ಕೆ ಅನುಗುಣವಾಗಿ ಎಲ್‌ಪಿಜಿ ದರ ಪ್ರತಿ ತಿಂಗಳು ಪರಿಷ್ಕರಣೆಯಾಗುತ್ತಿರುತ್ತದೆ.

ಈ ಹಿಂದೆ ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್‌ನ ಬೆಲೆಯನ್ನು 33.50 ರೂ.ಗಳಷ್ಟು ಕಡಿಮೆ ಮಾಡಿದ್ದವು. ಅದಕ್ಕೂ ಮೊದಲು ಜುಲೈ 1 ರಂದು 58.50 ರೂ.ಗಳಷ್ಟು ಬೆಲೆಯನ್ನು ಕಡಿಮೆ ಮಾಡಿದ್ದವು.

ಜೂನ್‌ನಲ್ಲಿ ತೈಲ ಕಂಪನಿಗಳು ವಾಣಿಜ್ಯ ಸಿಲಿಂಡರ್‌ಗಳಿಗೆ 24 ರೂ.ಗಳಷ್ಟು ಕಡಿತವನ್ನು ಘೋಷಿಸಿ, ದರವನ್ನು 1,723.50 ರೂ.ಗಳಿಗೆ ನಿಗದಿಪಡಿಸಿದ್ದವು. ಏಪ್ರಿಲ್‌ನಲ್ಲಿ ಬೆಲೆ 1,762 ರೂ.ಗಳಷ್ಟಿತ್ತು. ಫೆಬ್ರವರಿಯಲ್ಲಿ 7 ರೂಪಾಯಿಗಳಷ್ಟು ಸಣ್ಣ ಇಳಿಕೆಯಾಗಿತ್ತು. ಆದರೆ ಮಾರ್ಚ್‌ನಲ್ಲಿ 6 ರೂ. ಹೆಚ್ಚಳ ಮಾಡಿತ್ತು

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago