ನವದೆಹಲಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ 51.50 ರೂ. ಇಳಿಕೆಯಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಸೆಪ್ಟೆಂಬರ್ 1 ರಿಂದ ಜಾರಿಗೆ ಬರುವಂತೆ 51.50 ರೂ.ಗಳಷ್ಟು ಕಡಿಮೆ ಮಾಡುವುದಾಗಿ ತಿಳಿಸಿವೆ.
ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಮಾತ್ರ ಕಡಿಮೆಯಾಗಿದ್ದು 14.2 ಕೆಜಿ ಗೃಹ ಬಳಕೆಯ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ಪರಿಷ್ಕರಣೆಯ ನಂತರ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ LPG ಸಿಲಿಂಡರ್ ಈಗ 1,580 ರೂ.ಗಳಿಗೆ ಲಭ್ಯವಿರುತ್ತದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ದರಕ್ಕೆ ಅನುಗುಣವಾಗಿ ಎಲ್‌ಪಿಜಿ ದರ ಪ್ರತಿ ತಿಂಗಳು ಪರಿಷ್ಕರಣೆಯಾಗುತ್ತಿರುತ್ತದೆ.
ಈ ಹಿಂದೆ ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್‌ನ ಬೆಲೆಯನ್ನು 33.50 ರೂ.ಗಳಷ್ಟು ಕಡಿಮೆ ಮಾಡಿದ್ದವು. ಅದಕ್ಕೂ ಮೊದಲು ಜುಲೈ 1 ರಂದು 58.50 ರೂ.ಗಳಷ್ಟು ಬೆಲೆಯನ್ನು ಕಡಿಮೆ ಮಾಡಿದ್ದವು.
ಜೂನ್‌ನಲ್ಲಿ ತೈಲ ಕಂಪನಿಗಳು ವಾಣಿಜ್ಯ ಸಿಲಿಂಡರ್‌ಗಳಿಗೆ 24 ರೂ.ಗಳಷ್ಟು ಕಡಿತವನ್ನು ಘೋಷಿಸಿ, ದರವನ್ನು 1,723.50 ರೂ.ಗಳಿಗೆ ನಿಗದಿಪಡಿಸಿದ್ದವು. ಏಪ್ರಿಲ್‌ನಲ್ಲಿ ಬೆಲೆ 1,762 ರೂ.ಗಳಷ್ಟಿತ್ತು. ಫೆಬ್ರವರಿಯಲ್ಲಿ 7 ರೂಪಾಯಿಗಳಷ್ಟು ಸಣ್ಣ ಇಳಿಕೆಯಾಗಿತ್ತು. ಆದರೆ ಮಾರ್ಚ್‌ನಲ್ಲಿ 6 ರೂ. ಹೆಚ್ಚಳ ಮಾಡಿತ್ತು
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…