ನವದೆಹಲಿ : ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆ ದೇಶದ ಜನರಿಗೆ ಕೇಂದ್ರ ಸರ್ಕಾರ ಬೆಳ್ಳಂಬೆಳಗ್ಗೆ ಶಾಕ್ ನೀಡಿದೆ. 19 ಕೆಜಿ ತೂಕದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ 42 ರೂ. ಹೆಚ್ಚಳವಾಗಿದ್ದು, ಪರಿಷ್ಕೃತ ದರ ಇಂದಿನಿಂದಲೇ ಜಾರಿಯಾಗಲಿದೆ.
ದೆಹಲಿಯಲ್ಲಿ 19 ಕೆಜಿಯ ವಾಣಿಜ್ಯ ಬಳಕೆ ಸಿಲಿಂಡರ್ ದರ 42 ರೂ. ಹೆಚ್ಚಾಗಿದೆ. ಈ ಪರಿಷ್ಕೃತ ದರದೊಂದಿಗೆ ಪ್ರತಿ ಸಿಲಿಂಡರ್ ಬೆಲೆ 3,113.5 ರೂ.ಗಳಿಗೆ ತಲುಪಿದೆ. ಬೆಂಗಳೂರಿನಲ್ಲಿ 46 ರೂ.ಗಳಷ್ಟು ಹೆಚ್ಚಳವಾಗಿ ಪ್ರತಿ ಸಿಲಿಂಡರ್ ದರ 3,198 ರೂ. ಗೆ ಏರಿಕೆಯಾಗಿದೆ.
ಇನ್ನು ವಾಣಿಜ್ಯ ಸಿಲಿಂಡರ್ ದರ ಏರಿಕೆಯು ಹೋಟೆಲ್, ರೆಸ್ಟೋರೆಂಟ್ ಮತ್ತು ಉದ್ಯಮಗಳಿಗೆ ಇನ್ನಷ್ಟು ಆರ್ಥಿಕ ಹೊರೆಯಾಗಿ ಪರಿಣಮಿಸಲಿದೆ. ಆದರೆ, ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಕೋಲ್ಕತ್ತಾದಲ್ಲಿ 19 ಕೆಜಿ ಸಿಲಿಂಡರ್ ದರ 53.5 ರೂ. ಏರಿಕೆಯಾಗಿದ್ದು, 3,255.5 ರೂ. ತಲುಪಿದೆ. ಇದರೊಂದಿಗೆ 5 ಕೆಜಿ ಫ್ರೀ ಟ್ರೇಡ್ ಎಲ್‌ಪಿಜಿ ಸಿಲಿಂಡರ್‌ಗಳ ಮೇಲಿನ ಬೆಲೆ 11 ರೂ. ಹೆಚ್ಚಿಸಿದ್ದು, ಪ್ರತಿ ಸಿಲಿಂಡರ್ ಬೆಲೆ 821.5 ರೂ.ಗಳಿಗೆ ತಲುಪಿದೆ.
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…