ಬೆಂಗಳೂರು: ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಇದೇ ಮೊದಲ ಬಾರಿ ಶೇ 74.67 ಫಲಿತಾಂಶ ಲಭ್ಯವಾಗಿದೆ. ಇನ್ನು ವಾಣಿಜ್ಯ ವಿಭಾಗದಲ್ಲಿ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ಅನನ್ಯ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಇವರು 600ಕ್ಕೆ 600ಅಂಕ ಪಡೆದು ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ.
ಸಾತ್ವಿಕ್ ಪದ್ಮನಾಭ ಭಟ್, ಸ್ಮಯಾ ಸದಾನಂದ ಮಾಬೆನ್ ಮತ್ತು ಜೆಸ್ವಿತಾ ಡಯಾಸ್
ಇನ್ನು ಉಡುಪಿ ಜಿಲ್ಲೆಯ ವಿಜ್ಞಾನ ವಿಭಾಗದಲ್ಲಿ 4 ವಿದ್ಯಾರ್ಥಿಗಳು ಟಾಪರ್ ಆಗಿದ್ದು ಎಂಜಿಎಂ ಕಾಲೇಜಿನ ಸಾತ್ವಿಕ ಹಾಗೂ ಪ್ರಜ್ಞಾ ಕಾಲೇಜಿನ ಜೆಸ್ವಿತಾ ಡಯಾಸ್ 595 2ನೇ ಸ್ಥಾನ ಪಡೆದುಕೊಂಡಿದ್ದಾರೆ. ವೆಂಕಟರಮಣ ಕಾಲೇಜು ಕುಂದಾಪುರ, ಸ್ನೇಹಾ ಐ ರಾವ್ ಹಾಗೂ ಸ್ಮಯಾ ಸದಾನಂದ ಮುಬೇನ್ 594 3 ನೇ ಸ್ಥಾನ. ಕಾರ್ಕಳ ಜ್ಞಾನ ಸುಧಾ ಕಾಲೇಜಿನ ಸ್ಮಯಾ ಸದಾನಂದ ಮುಬೇನ್ 594 3ನೇ ಸ್ಥಾನ ಪಡೆದಿದ್ದಾರೆ.
ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಲಾ ವಿಭಾಗದಲ್ಲಿ ಶೇ.61.22, ವಾಣಿಜ್ಯ ವಿಭಾಗದಲ್ಲಿ ಶೇ.75.89, ವಿಜ್ಞಾನ ವಿಭಾಗದಲ್ಲಿ ಶೇ.85.71 ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆ(ಶೇ.95) ಪ್ರಥಮ ಸ್ಥಾನ ಪಡೆದುಕೊಂಡಿದೆ. ಉಡುಪಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ.
7,02,067 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಅವರಲ್ಲಿ 524209 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಶೇ 80.72 ವಿದ್ಯಾರ್ಥಿನಿಯರು ಹಾಗೂ ಬಾಲಕರು ಶೇ 69.05 ಸಾಧಿಸಿದ್ದಾರೆ.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…