ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ – vishwanews24

Featured, ರಾಷ್ಟ್ರ ನ್ಯೂಸ್

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ

ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ಕೇಂದ್ರ ಮತ್ತೊಂದು ಗುಡ್‌ನ್ಯೂಸ್‌ ನೀಡಿದೆ. ಇಂದಿನಿಂದ ಜಾರಿಗೆ ಬರುವಂತೆ ವಾಣಿಜ್ಯ ಬಳಕೆಯ ಎಲ್‌ಪಿಜಿ ದರ 183.50 ರೂ. ಇಳಿಕೆ ಮಾಡಿದೆ.

ಇಂದಿನಿಂದ (ಜುಲೈ 1) ಜಾರಿಗೆ ಬರುವಂತೆ 19 ಕೆ.ಜಿಯ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯನ್ನು 183.50 ರೂ. ಇಳಿಕೆ ಮಾಡಲಾಗಿದೆ. ಈ ಮೂಲಕ 3,113.50 ರೂ. ಇದ್ದ ಸಿಲಿಂಡರ್ ಬೆಲೆ ಈಗ 2,930 ರೂ.ಗೆ ಇಳಿದಿದೆ. ಆದರೆ ತೈಲ ಕಂಪನಿಗಳು ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಹೀಗಾಗಿ 14.2 ಕೆಜಿ ತೂಕದ ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ.

ಇದನ್ನೂ ಓದಿ :

ಆಟೋ ಎಲ್‌ಪಿಜಿ ದರ 10 ರೂ. ಇಳಿಕೆ – vishwanews24

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಜಗತ್ತಿನಾದ್ಯಂತ ಇಂಧನ ಬಿಕ್ಕಟ್ಟು ಎದುರಾಗಿತ್ತು. ಅಮೆರಿಕ ಹಾಗೂ ಇಸ್ರೇಲ್‌ ದಾಳಿಗೆ ಪ್ರತಿಯಾಗಿ ಇರಾನ್ ದೇಶವು ತನ್ನ ನಿಯಂತ್ರಣದಲ್ಲಿದ್ದ ಹೊರ್ಮುಜ್ ಜಲಸಂಧಿಯನ್ನು ಬಂದ್ ಮಾಡಿ, ಕಚ್ಚಾ ತೈಲ ಮತ್ತು ಎಲ್‌ಪಿಜಿ ಸಾಗಿಸುವ ಹಡಗುಗಳ ಸಂಚಾರವನ್ನು ತಡೆಹಿಡಿದಿತ್ತು. ಈ ವ್ಯತ್ಯಯದಿಂದಾಗಿ ಪ್ರಪಂಚದಾದ್ಯಂತ ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಬೆಲೆಗಳು ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದ್ದವು.

Leave a Reply