ವಾಪಸ್ಸು ನನ್ನ ತಾಯಿ ನೆಲಕ್ಕೆ ಕರೆದುಕೊಂಡು ಹೋದ ಕಾಂತಾರ – ಕ್ಲೈಮ್ಯಾಕ್ಸ್ ನೋಡಿ ರೋಮಾಂಚನವಾಯಿತು ; ಕಾಂತಾರ’ಕ್ಕೆ ಕರಾವಳಿ ಬೆಡಗಿ ಶಿಲ್ಪಾಶೆಟ್ಟಿ ಮೆಚ್ಚುಗೆ – Vishwanews24

Featured, ರಾಷ್ಟ್ರ ನ್ಯೂಸ್

ವಾಪಸ್ಸು ನನ್ನ ತಾಯಿ ನೆಲಕ್ಕೆ ಕರೆದುಕೊಂಡು ಹೋದ ಕಾಂತಾರ – ಕ್ಲೈಮ್ಯಾಕ್ಸ್ ನೋಡಿ ರೋಮಾಂಚನವಾಯಿತು ; ಕಾಂತಾರ’ಕ್ಕೆ ಕರಾವಳಿ ಬೆಡಗಿ ಶಿಲ್ಪಾಶೆಟ್ಟಿ ಮೆಚ್ಚುಗೆ

ಮುಂಬೈ : ಕಾಂತಾರ ಸಿನೆಮಾ ಇದೀಗ ದೇಶದಾದ್ಯಂತ ಸಂಚಲನ ಮೂಡಿಸಿದೆ. ಸಿನೆಮಾ ನೋಡಿದವರು ಮೆಚ್ಚುಗೆ ಮಾತುಗಳನ್ನಾಡುತ್ತಿದ್ದಾರೆ. ದೇಶದ ಬಹುತೇಕ ನಟರು ನಟಿಯರು ಸಿನೆಮಾ ನೋಡಿ ತಮ್ಮ ತಮ್ಮ ಅನಿಸಿಕೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುತ್ತಿದ್ದಾರೆ. ಇದೀಗ ಕರಾವಳಿ ಬೆಡಗಿ ಶಿಲ್ಪಾಶೆಟ್ಟಿ ಕಾಂತಾರ ಸಿನೆಮಾ ನೋಡಿ ರಿಷಬ್ ನಟನೆಯನ್ನು ಕೊಂಡಾಡಿದ್ದಾರೆ.

Kantara Movie: ಕಾಂತಾರ ಈಗ ಅತ್ಯಧಿಕ ರೇಟಿಂಗ್ ಪಡೆದ ಭಾರತೀಯ ಸಿನಿಮಾ! IMDBನಲ್ಲಿ ಟಾಪ್

ಮೂಲತಃ ಕರಾವಳಿಯ ಹುಡುಗಿಯಾಗಿರುವ ಶಿಲ್ಪಾ ಶೆಟ್ಟಿ ಕಾಂತಾರ ಚಿತ್ರಕ್ಕೆ ತಮ್ಮದೇ ಆದ ರೀತಿಯಲ್ಲಿ ಬಣ್ಣಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು ಓ ಮೈ ಗಾಡ್ ಎಂದು ಅಚ್ಚರಿಯ ಮೂಲಕವೇ ಸಿನಿಮಾದ ಬಗ್ಗೆ ಅನಿಸಿಕೆಗಳನ್ನು ಬರೆದಿದ್ದು,

‘ಕಾಂತಾರ ಚಿತ್ರವನ್ನು ಇದೀಗ ಚಿತ್ರಮಂದಿರದಲ್ಲಿ ನೋಡಿದೆ. ನರೇಟಿವ್ ಅದ್ಭುತವಾಗಿದೆ. ಕ್ಲೈಮ್ಯಾಕ್ಸ್ ನೋಡಿ ರೋಮಾಂಚನವಾಯಿತು ಎಂದ ಅವರು ಈ ಚಿತ್ರ ಸಿನಿಮಾ ಪ್ರೇಕ್ಷಕರನ್ನು ಬೇರೆ ಜಗತ್ತಿಗೆ ಕರೆದುಕೊಂಡು ಹೋಗುತ್ತದೆ. ನಾನು ಮೂಲತಃ ಅದೇ ನಾಡಿನವಳು ಆಗಿದ್ದರಿಂದ, ವಾಪಸ್ಸು ನನ್ನ ತಾಯಿ ನೆಲಕ್ಕೆ ನನ್ನನ್ನು ಸಿನಿಮಾ ಕರೆದುಕೊಂಡು ಹೋಯಿತು ಎಂದು ಬರೆದುಕೊಂಡಿದ್ದಾರೆ.

ಪ್ರಪ್ರಥಮ ಬಾರಿಗೆ ಇತಿಹಾಸ ಪ್ರಸಿದ್ಧ ಕಾಪು ಶ್ರೀ ಹಳೆ ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ ಶ್ರೀಮಾದ್ ಸಯಮೀಂದ್ರ ತೀರ್ಥ ಸ್ವಾಮೀಜಿ : Vishwanews24

Leave a Reply