ಪುಂಜಾಲಕಟ್ಟೆ : ಇಲ್ಲಿನ ಠಾಣಾ ವ್ಯಾಪ್ತಿಯ ವಾಮದಪದವಿನಲ್ಲಿರುವ ಸರಕಾರಿ ಹಾಸ್ಟೇಲ್‌ನಲ್ಲಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಸಕಲೇಶ್‌ಪುರ ನಿವಾಸಿ ಚಂದ್ರಶೇಖರ(19) ಎಂದು ಗುರುತಿಸಲಾಗಿದೆ. ಚಂದ್ರಶೇಖರ ವಾಮದಪದವಿನಲ್ಲಿ ಸರಕಾರಿ ಕಾಲೇಜಿನ ಬಿ.ಕಾಮ್ ವಿದ್ಯಾರ್ಥಿಯಾಗಿದ್ದು, ಇಲ್ಲಿನ ಸರಕಾರಿ ಹಾಸ್ಟೇಲ್‌ನಲ್ಲಿ ವಾಸವಿದ್ದರು ಎನ್ನಲಾಗಿದೆ. ಇಂದು ಇದೇ ಹಾಸ್ಟೇಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರಾಥಮಿಕ ತನಿಖೆಯಲ್ಲಿ ಆತ್ಮಹತ್ಯೆಗೆ ಕಾರಣ ಪ್ರೇಮ ವೈಫಲ್ಯ ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಇನ್ಸ್‌ಫೆಕ್ಟರ್ ಸಂದೇಶ್ ಪಿ.ಜಿ, ಪುಂಜಾಲಕಟ್ಟೆ ಠಾಣಾ ಸಬ್ ಇನ್ಸ್‌ಫೆಕ್ಟರ್ ಸುದರ್ಶನ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿದ್ದು, ಪುಂಜಾಲಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…