ಮಂಗಳೂರು: ಮೈಸೂರಿನ ‘ಮುಡಾ’ ಪ್ರಕರಣಕ್ಕೆ ಸಂಬಂಧಿಸಿ ದೂರುದಾರ ಸ್ನೇಹಮಯಿ ಕೃಷ್ಣ ಮತ್ತು ಆರ್ಟಿಐ ಕಾರ್ಯಕರ್ತ ಗಂಗರಾಜು ಫೋಟೋಗಳಿಗೆ ವಾಮಾಚಾರ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿ ರಾಮಸೇನೆ ಸ್ಥಾಪಕ ಪ್ರಸಾದ್ ಅತ್ತಾವರ ಮತ್ತು ಆತನ ಪತ್ನಿ, ಉಡುಪಿಯಲ್ಲಿ ಸಬ್ ಇನ್ ಸ್ಪೆಕ್ಟರ್ ಆಗಿರುವ ಸುಮಾ ತನಿಖೆಗೆ ಸಹಕರಿಸುತ್ತಿಲ್ಲ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿರುವ ಪೊಲೀಸ್ ಆಯುಕ್ತರು, ತನಿಖೆಗೆ ಸಂಬಂಧಿಸಿ ಪ್ರಸಾದ್ ಅತ್ತಾವರ ಮತ್ತು ಆತನ ಪತ್ನಿಗೆ ಎರಡು ಬಾರಿ ನೋಟಿಸ್ ನೀಡಲಾಗಿದೆ. ಆದರೆ ಅವರಿಬ್ಬರೂ ತನಿಖೆಗೆ ಸಹಕರಿಸುತ್ತಿಲ್ಲ. ಮತ್ತೊಮ್ಮೆ ನೋಟಿಸ್ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಹೃದಯ ಕಾಯಿಲೆ ಇದೆ ಎಂದು ಹೇಳಿ ಪ್ರಸಾದ್ ಅತ್ತಾವರ ಆಸ್ಪತ್ರೆಗೆ ದಾಖಲಾಗಿದ್ದ. ಆಸ್ಪತ್ರೆಯಲ್ಲಿರುವಾಗ ವಿಚಾರಣೆ ನಡೆಸಲಾಗಿತ್ತು. ಬಳಿಕ ಆತ ಜಾಮೀನು ಪಡೆದುಕೊಂಡು ಬೇರೆ ಕಡೆ ತಿರುಗಾಡುತ್ತಿದ್ದಾನೆ ಎಂದರು.
ಪ್ರಸಾದ್ ಅತ್ತಾವರ ಬಳಸಿರುವ ಸೊತ್ತುಗಳ ವಿಧಿವಿಜ್ಞಾನ ವಿಶ್ಲೇಷಣೆ ಮಾಡಲಾಗುತ್ತಿದೆ.
ಬಿಜೈಯ ಯುನಿಸೆಕ್ಸ್ ಸೆಲೂನ್ ಒಂದರಲ್ಲಿ ಜ.23ರಂದು ನಡೆದ ದಾಂಧಲೆ ನಡೆಸಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ರಾಮಸೇನೆ ಸಂಸ್ಥಾಪಕ ಪ್ರಸಾದ್ ಅತ್ತಾವರನ ಮೊಬೈಲ್ ಫೋನ್ ಪರಿಶೀಲನೆ ವೇಳೆ ದೇವಸ್ಥಾನವೊಂದರಲ್ಲಿ ಐದು ಕುರಿಗಳನ್ನು ಬಲಿ ಕೊಟ್ಟು ಅದರ ರಕ್ತವನ್ನು ಸ್ನೇಹಮಯಿ ಕೃಷ್ಣ ಮತ್ತು ಇತರ ಕೆಲವರ ಫೋಟೋಗಳಿಗೆ ಹಾಗೂ ಅವರ ಹೆಸರಿನ ಚೀಟಿಗೆ ಹಚ್ಚಿ ಪೂಜೆ ಮಾಡುತ್ತಿರುವ ವೀಡಿಯೋ ಪೊಲೀಸರಿಗೆ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಆತನ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…