ಬೆಂಗಳೂರು : ಇಂದಿನಿಂದ 3 ದಿನಗಳ ಕಾಲ ರಾಜ್ಯದ ಹಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಿದೆ.
ಮಹಾರಾಷ್ಟ್ರದ ಮಧ್ಯ ಕರಾವಳಿಯಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ಮಳೆ ಅಬ್ಬರಿಸಲಿದ್ದು, ಇಂದಿನಿಂದ ಮಾರ್ಚ್ 28 ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಹಾಗೂ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಬೇಸಿಗೆಯಲ್ಲಿ ಜಾಸ್ತಿ ತಾಪಮಾನ ಉಂಟಾಗುವ ಸಾಧ್ಯತೆಯಿದ್ದು, ಏಪ್ರಿಲ್ – ಮೇ ತಿಂಗಳಲ್ಲಿ ಬೆಂಗಳೂರಿನಲ್ಲಿ ಗರಿಷ್ಟ ತಾಪಮಾನ 37 ಡಿಗ್ರಿ ಸೆಲ್ಷಿಯಸ್ ತನಕ ಇರಲಿದೆ ಎಂದು ಹೇಳಲಾಗುತ್ತದೆ.
ರಾಜ್ಯದ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು, ತುಮಕೂರು ಜಿಲ್ಲೆಯಲ್ಲಿ ಮಾರ್ಚ್ 26ರವರೆಗೆ ಮಳೆಯಾಗುವ ಸಾಧ್ಯತೆಯಿದೆ. ಮಾರ್ಚ್ 27, 28 ರಂದು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಾತ್ರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಗದಗ, ಹಾವೇರಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಮಾರ್ಚ್28 ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…