Featured

ವಾಯುಭಾರ ಕುಸಿತ : ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ ; ಯೆಲ್ಲೊ ಅಲರ್ಟ್ ಘೋಷಣೆ – vishwanews24

ಬಂಗಾಳಕೊಲ್ಲಿಯಲ್ಲಿ  ವಾಯುಭಾರ ಕುಸಿತ : ಕರಾವಳಿಯಲ್ಲಿ ಮತ್ತೆ ಭಾರೀ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ

ಮಂಗಳೂರು: ಬಂಗಾಳಕೊಲ್ಲಿಯಲ್ಲಿ ಎದ್ದ ಫೆಂಗಲ್ ಚಂಡ ಮಾರುತದಿಂದ ಉಂಟಾದ ಅನಾಹುತಗಳಿಂದ ಇನ್ನೂ ಚೇತರಿಕೊಳ್ಳುತ್ತಿರುವಾಗಲೇ ಇದೀಗ ಮತ್ತೊಂದು ವಾಯುಭಾರ ಕುಸಿತ ಉಂಟಾಗಿದ್ದು, ಗುರುವಾರ ಹಾಗೂ ಶುಕ್ರವಾರ ರಾಜ್ಯದ ವಿವಿಧೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಈ ಹಿನ್ನಲೆ ಗುರುವಾರದಿಂದ ರಾಜ್ಯದಲ್ಲಿ ಕೆಲವು ಭಾಗಗಳಲ್ಲಿ ಭಾರೀ ಮಳೆ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಿತ್ರದುರ್ಗ, ತುಮಕೂರು, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಿಗೆ ಗುರುವಾರ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ.

ಶುಕ್ರವಾರವು ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಹಾಗೂ ತುಮಕೂರು ಜಿಲ್ಲೆಗಳಿಗೆ ಇಲಾಖೆಯು ‘ಯೆಲ್ಲೊ ಅಲರ್ಟ್’ ಘೋಷಿಸಿದೆ. ಇದರಿಂದಾಗಿ ಈ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ. ಶನಿವಾರವೂ ರಾಜ್ಯದ ವಿವಿಧೆಡೆ ಮಳೆ ಮುಂದುವರಿಯುವ ಸಂಭವವಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

9 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

9 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

10 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

13 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

13 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

13 hours ago