ಚೆನ್ನೈ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕಳೆದ 2-3 ದಿನಗಳಿಂದ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಕೆಲ ಜಿಲ್ಲೆಗಳಿಗೆ ಇಂದು ರೆಡ್ ಮತ್ತು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ನಡುವೆ ಕೆಲ ಜಿಲ್ಲೆಗಳಿಗೆ ಪ್ರವಾಹ ಮುನ್ಸೂಚನೆಯನ್ನೂ ನೀಡಲಾಗಿದ್ದು, ರಕ್ಷಣಾ ಸಿಬ್ಬಂದಿ ನಿಗಾ ವಹಿಸಿದ್ದಾರೆ.
ತಂಜಾವೂರು, ತಿರುವರೂರು, ನಾಗಪಟ್ಟಣಂ ಮತ್ತು ಮೈಲಾಡುತುರೈ ಜಿಲ್ಲೆಗಳಲ್ಲಿ ರಸ್ತೆಗಳು ಜಲಾವೃತವಾಗಿದ್ದು ವಾಹನ ಸಂಚಾರಕ್ಕೆ ಅಡ್ಡಿಯುಂಟುಮಾಡಿದೆ.
ಮಳೆಯ ಅಬ್ಬರದಿಂದಾಗಿ ತೂತುಕುಡಿಯಲ್ಲಿ ಥಾಮಿರಬರಣಿ ನದಿಯಲ್ಲಿ ಉಬ್ಬರವಿಳಿತ ಹೆಚ್ಚಾಗುತ್ತಿದ್ದು, ಶ್ರೀವೈಕುಂಟಂ ಮತ್ತು ಎರಲ್‌ಗೆ ಪ್ರವಾಹ ಮುನ್ಸೂಚನೆ ನೀಡಲಾಗಿದೆ. ಮತ್ತೊಂದೆಡೆ ಚೆನ್ನೈನಲ್ಲಿ ಪೂಂಡಿ ಅಣೆಕಟ್ಟಿನಿಂದ ಇದ್ದಕ್ಕಿದ್ದಂತೆ 12,000 ಕ್ಯುಸೆಕ್ ಹೆಚ್ಚುವರಿ ನೀರು ಹರಿಸಲಾಗುತ್ತಿದ್ದು, ಇದರಿಂದ ಜಲಾಶಯಗಳ ಸಮೀಪವಿರುವ ರೆಡ್‌ಹಿಲ್ಸ್ ಮತ್ತು ಚೆಂಬರಂಬಾಕ್ಕಂ ಪ್ರದೇಶಗಳಿಗೆ ಪ್ರವಾಹದ ಎಚ್ಚರಿಕೆ ನೀಡಲಾಗಿದೆ. ಅಲ್ಲದೇ ತಿರುನಲ್ವೇಲಿ ಮತ್ತು ತೆಂಕಶಿಯಲ್ಲಿ ಮಳೆ ಹಾನಿ ಮುಂದುವರಿದಿದೆ.
ಕಳೆದ 24 ಗಂಟೆಯಲ್ಲಿ ರಾಮನಾಥಪುರಂ ಜಿಲ್ಲೆಯ ತೊಂಡಿ ಮತ್ತು ತಿರುವಡನೈ ಜಿಲ್ಲೆಗಳಲ್ಲಿ ಕ್ರಮವಾಗಿ 5 ಮತ್ತು 4 ಸೆಂ.ಮೀ. ಮಳೆಯಾಗಿದೆ. ಮಧುರೈ, ದಿಂಡಿಗಲ್ ಮತ್ತು ಥೇಣಿ ಭಾಗಗಳಲ್ಲಿ 1 ರಿಂದ 2 ಸೆಂ.ಮೀ. ಮಳೆಯಾಗಿದೆ. ತಂಜಾವೂರಿನ ಮಂಜಲಾರಿನಲ್ಲಿ 6.1 ಸೆಂ.ಮೀ ನಷ್ಟು ಮಳೆಯ ಪ್ರಮಾಣ ದಾಖಲಾಗಿದೆ. ಇನ್ನೂ ಕಂಡಿಯೂರು ಮತ್ತು ಸಾತನೂರು ಸೇರಿದಂತೆ ಇತರ ಪ್ರದೇಶಗಳಲ್ಲಿ ಮನೆ ಗೋಡೆಗಳು ಕುಸಿದಿದ್ದು, ಅಪಾರ ಪ್ರಮಾಣದ ಆಸ್ತಿ ಪಾಸ್ತಿ ಹಾನಿಯಾಗಿದೆ.
ತಿರುವಳ್ಳೂರು, ಚೆನ್ನೈ, ಕಾಂಚೀಪುರಂ, ಚೆಂಗಲ್ಪಟ್ಟು, ವಿಲ್ಲುಪುರಂ, ಕಡಲೂರು, ಮೈಲಾಡುತುರೈ, ನಾಗಪಟ್ಟಿಣಂ, ತಿರುವರೂರು, ತಂಜಾವೂರು, ಪುದುಕೊಟ್ಟೈ, ಶಿವಗಂಗಾ, ರಾಮನಾಥಪುರಂ, ಮಧುರೈ, ಥೇಣಿ, ವಿರುಧುನಗರ ಸೇರಿದಂತೆ ಹಲವು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಮಳೆಯ ಆರ್ಭಟ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…