ಮಂಗಳೂರು :ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿರುವ ಪರಿಣಾಮ ಪಕ್ಕದ ತಮಿಳುನಾಡು ರಾಜ್ಯದಲ್ಲಿ ಏ. 30 ಮತ್ತು ಮೇ 1ರಂದು ಫನಿ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ರಾಜ್ಯದ ಕರಾವಳಿಯಲ್ಲಿ ಕೂಡ ಭಾರೀ ಗಾಳಿ ಮಳೆಯ ಸಾಧ್ಯತೆ
ಫನಿ ಚಂಡಮಾರುತದ ಪರಿಣಾಮದಿಂದ ಬೆಂಗಳೂರು ಸೇರಿದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲೂ 3ರಿಂದ 4 ದಿನಗಳ ಕಾಲ ಭಾರೀ ಮಳೆಯಾಗಲಿದೆ. ಮುಂದಿನ ವಾರ 3ರಿಂದ 4 ದಿನಗಳ ಕಾಲ ಬೆಂಗಳೂರಲ್ಲಿ ಸತತ ಮಳೆಯಾಗಲಿದ್ದು, ಮೈಸೂರು, ಮಂಡ್ಯ, ತುಮಕೂರು, ಮಲೆನಾಡು, ಚಿಕ್ಕಮಗಳೂರು, ಸಕಲೇಶಪುರ, ರಾಜ್ಯದ ಕರಾವಳಿಯಲ್ಲಿ ಕೂಡ ಭಾರೀ ಗಾಳಿ ಮಳೆಯ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳಕೊಲ್ಲಿಯ ದಕ್ಷಿಣಭಾಗದಲ್ಲಿ ನಿಮ್ನ ಒತ್ತಡ ಪ್ರದೇಶ ಉಂಟಾಗಿದ್ದು, ವಾಯುಭಾರ ಕುಸಿತ ಚಂಡಮಾರುತವಾಗಿ ಪರಿವರ್ತನೆಗೊಳ್ಳಲಿದೆ. ಈ ನಡುವೆ ಟ್ರಪ್ ಕೇರಳದಿಂದ ಉತ್ತರ ಕರ್ನಾಟಕದ ಕಡೆಗೆ ಸಾಗಲಿರುವುದರಿಂದ ಕರಾವಳಿ ಪ್ರದೇಶದಲ್ಲಿ ಭಾರೀ ಪ್ರಮಾಣದಲ್ಲಿ ಮೋಡ ಆವರಿಸಲಿದೆ. ಜತೆಗೆ ಬಲವಾದ ಗಾಳಿಯೂ ಬೀಸಲಿದೆ.
ಕರಾವಳಿಯಲ್ಲಿ ಮಾತ್ರವಲ್ಲದೇ ಕೇರಳ ವಯನಾಡು, ಕೋಝಿಕೋಡ್ ಮಲಪ್ಪುರ, ಪಾಲ್ಫಾಟ್, ತ್ರಿಶ್ಯೂರ್ ಹಾಗೂ ಇಡುಕ್ಕಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರೋದ್ರಿರಿಂದ ಮುನ್ನೆಚ್ಚರಿಕೆಯಿಂದ ಇರುವಂತೆ ಜನತೆಗೆ ಹಾಗೂ ಮೀನುಗಾರರಿಗೆ ಸೂಚಿಸಲಾಗಿದೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…