Featured

ವಾರಂತ್ಯವೂ ಶ್ರೀಕ್ಷೇತ್ರ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ಮುಕ್ತ ಪ್ರವೇಶಕ್ಕೆ ಅವಕಾಶ: ಡಿಸಿ -Vishwanews24

ವಾರಂತ್ಯವೂ ಶ್ರೀಕ್ಷೇತ್ರ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ಮುಕ್ತ ಪ್ರವೇಶಕ್ಕೆ ಅವಕಾಶ: ಡಿಸಿ -Vishwanews24

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ವಿಧಿಸಿದ್ದ ವಾರಾಂತ್ಯ ನಿರ್ಬಂಧಗಳನ್ನು ತೆರವುಗೊಳಿಸಿ ಷರತ್ತುಗಳೊಂದಿಗೆ ಸೇವೆ ಹಾಗೂ ಸಾರ್ವಜನಿಕರ ಮುಕ್ತ ಪ್ರವೇಶಕ್ಕೆ ಅವಕಾಶ ನೀಡಿ ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶಿಸಿದ್ದಾರೆ.

ಆದರೆ ದೇವಾಲಯಗಳಲ್ಲಿ ಕೋವಿಡ್ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಆಡಳಿತ ಮಂಡಳಿಯು ಇದನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಜವಾಬ್ದಾರಿ ಹೊಂದಿರಬೇಕು. ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುವ ಆಡಳಿತ ಮಂಡಳಿ, ಅರ್ಚಕರು, ಸಿಬ್ಬಂದಿ ಸೇರಿದಂತೆ ಎಲ್ಲರೂ ಪ್ರತಿ 15 ದಿನಗಳಿಗೊಮ್ಮೆ ಆರ್‌ಟಿ-ಪಿಸಿಆರ್ ಪರೀಕ್ಷೆ ನಡೆಸಿ ನೆಗೆಟಿವ್ ವರದಿಯನ್ನು ಪಡೆದುಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ.

ಅದೇ ರೀತಿ ಭಕ್ತಾದಿಗಳು ಎರಡು ಡೋಸ್ ಲಸಿಕೆ ಪಡೆದಿದ್ದರೂ ಕಡ್ಡಾಯವಾಗಿ 72 ಗಂಟೆಗಳಿಗಿಂತ ಮುಂಚಿತ ಆರ್‌ಟಿ-ಪಿಸಿಆರ್ ನೆಗೆಟಿವ್ ವರದಿ ಹೊಂದಿದ್ದಲ್ಲಿ ಮಾತ್ರ ಸೇವೆಗೆ ಅವಕಾಶ ನೀಡಬೇಕು. ಜಾಗೃತಿ ಮೂಡಿಸಲು ಅಲ್ಲಲ್ಲಿ ಸೂಚನಾ ಫಲಕಗಳನ್ನು ಅಳವಡಿಸಬೇಕು. ಕೋವಿಡ್ ಲಸಿಕೆ ಪಡೆಯದಿದ್ದ ಭಕ್ತರಿಗೆ ಲಸಿಕೆ ನೀಡಲು ಅನುಕೂಲವಾಗುವಂತೆ ಸಂಬಂಧಪಟ್ಟ ತಾಲೂಕು ಆರೋಗ್ಯಾಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ದೇವಸ್ಥಾನಗಳಲ್ಲಿ ಕೋವಿಡ್ ಲಸಿಕೆ ಕೇಂದ್ರ ತೆರೆಯಲು ಹಾಗೂ ಜನಸಂದಣಿಯಾಗದಂತೆ ಲಸಿಕೆ ನೀಡಲು ಕ್ರಮ ವಹಿಸಬೇಕು.

ದೇವಾಲಯದಲ್ಲಿ ಕನಿಷ್ಠ ಸಂಖ್ಯೆಯಲ್ಲಿ ಸೇವೆಗಳನ್ನು ನಡೆಸಲು ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

1 day ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

1 day ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

1 day ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

1 day ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

1 day ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago