ನವದೆಹಲಿ: ಕಳೆದ ಬಾರಿಯ ಲೋಕಸಭೆ ಚುನಾವಣೆಯಲ್ಲಿ ವಾರಾಣಸಿಯಲ್ಲಿ ನರೇಂದ್ರ ಮೋದಿ ವಿರುದ್ಧ ಅರವಿಂದ್ ಕೇಜ್ರಿವಾಲ್ ನಿಂತು ಇಡೀ ದೇಶದ ಗಮನ ಸೆಳೆದಿದ್ದರು. ಈ ಬಾರಿ ಅದೇ ಕ್ಷೇತ್ರ ಮತ್ತೊಂದು ಬಿಗ್ ಫೈಟ್ ಕಾಣುವ ನಿರೀಕ್ಷೆಇದೆ. ಮೋದಿ ವರ್ಸಸ್ ಪ್ರಿಯಾಂಕಾ ಪೈಪೋಟಿ ನಡೆಯುವ ಸಾಧ್ಯತೆ ಇದೆ. ಕಾಂಗ್ರೆಸ್ ಪಕ್ಷದ ಹೊಸ ಸ್ಟಾರ್ ಪ್ರಿಯಾಂಕಾ ಗಾಂಧಿ ಅವರು ವಾರಾಣಸಿಯಲ್ಲಿ ಮೋದಿ ವಿರುದ್ಧ ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸಿದ್ದಾರೆ.
ಉತ್ತರ ಪ್ರದೇಶದ ರಾಯ್ ಬರೇಲಿ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಮಾತನಾಡುವ ವೇಳೆ ಪ್ರಿಯಾಂಕಾ ಗಾಂಧಿ ಇಂಥದ್ದೊಂದು ಆಸೆ ವ್ಯಕ್ತಪಡಿಸಿದರು. ಸೋನಿಯಾ ಗಾಂಧಿ ಪ್ರತಿನಿಧಿಸುವ ರಾಯ್ ಬರೇಲಿ ಕ್ಷೇತ್ರದ ಮತದಾರರು ಇದೇ ಕ್ಷೇತ್ರದಿಂದ ಸ್ಪರ್ಧಿಸುವಂತೆ ಪ್ರಿಯಾಂಕಾ ಗಾಂಧಿ ಅವರನ್ನು ಒತ್ತಾಯಿಸಿದಾಗ ಅವರ ಬಾಯಿಂದ ವಾರಾಣಸಿಯಲ್ಲಿ ನಿಲ್ಲುವ ಬಯಕೆ ವ್ಯಕ್ತವಾಯಿತು. “ವಾರಾಣಸಿಯಲ್ಲಿ ಯಾಕಾಗಬಾರದು?” ಎಂದು ರಾಯ್ ಬರೇಲಿಯ ಕಾಂಗ್ರೆಸ್ ಕಾರ್ಯಕರ್ತರನ್ನು ಪ್ರಿಯಾಂಕಾ ಕೇಳಿದರು.
ಪ್ರಿಯಾಂಕಾ ಗಾಂಧಿ ಈ ವರ್ಷವಷ್ಟೇ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗುವ ಮೂಲಕ ಸಕ್ರಿಯ ರಾಜಕಾರಣಕ್ಕೆ ಧುಮುಕಿದ್ದಾರೆ. ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ಗೆ ಅವರೇ ಸ್ಟಾರ್ ಕೆಂಪೇನರ್ ಆಗಿದ್ದಾರೆ. ತಮ್ಮ ತಾಯಿಯ ರಾಯ್ ಬರೇಲಿ ಕ್ಷೇತ್ರವನ್ನಂತೂ ಅವರು ಇಂಚಿಂಚೂ ಸುತ್ತಿ ಕಾರ್ಯಕರ್ತರಿಗೆ ಪುಷ್ಟಿ ನೀಡುವ ಕೆಲಸ ಮಾಡುತ್ತಿದ್ದಾರೆ. ಆದರೆ, ಅವರು ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಯಾವ ಸುದ್ದಿಯೂ ಇರಲಿಲ್ಲ. ನಿನ್ನೆಯಷ್ಟೇ ಪ್ರಿಯಾಂಕಾ ಅವರು ಪಕ್ಷ ಬಯಸಿದರೆ ಚುನಾವಣೆಯ ಅಖಾಡಕ್ಕೆ ಇಳಿಯುವುದಾಗಿ ತಿಳಿಸಿದ್ದರು. ರಾಯ್ ಬರೇಲಿಯಲ್ಲೇ ಅವರು ಚುನಾವಣೆಗೆ ನಿಲ್ಲಬಹುದೆಂಬ ವದಂತಿಗಳಿದ್ದವು. ಈಗ ಅವರು ವಾರಾಣಸಿಯಲ್ಲಿ ಸ್ಪರ್ಧಿಸುವ ಇಚ್ಛೆ ತೋರ್ಪಡಿಸಿದ್ದಾರೆ.
ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ಮಧ್ವರಾಜ್ ನೇಮಕ ನವದೆಹಲಿ: ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪದಾಧಿಕಾರಿಗಳನ್ನು…
ನ. 24, 25 ರಂದು ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜಾರ್ದೆ ಮಾರಿಪೂಜೆ ಸಂಭ್ರಮ ಇತಿಹಾಸ ಪ್ರಸಿದ್ಧ ಕಾಪು ಹಳೆ…
ಸಂಬಂಧಿಕರನ್ನು ಬೀಳ್ಕೊಡಲು ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರವೇಶಿಸಿದ 12 ಮಂದಿ ಸ್ವಯಂಚಾಲಿತ ಬಾಗಿಲುಗಳು ಮುಚ್ಚಿದ್ದರಿಂದ ರೈಲಿನೊಳಗೆ ಲಾಕ್ 140 ಕಿ.ಮೀ…
ಗ್ರಾಹಕರಿಗೆ ಗುಡ್ ನ್ಯೂಸ್: ಸೋನಾ ಮಸೂರಿ ಅಕ್ಕಿ ಬೆಲೆಯಲ್ಲಿ ಭಾರೀ ಇಳಿಕೆ, ಕೆಜಿಗೆ ₹20ರವರೆಗೆ ಕಡಿತ ಬೆಂಗಳೂರು: ಮಾರುಕಟ್ಟೆಯಲ್ಲಿ ಹೊಸ…
ನವೆಂಬರ್ 30ರವರೆಗೆ ಸೌದಿಗೆ ಇಂಡಿಗೋ ವಿಮಾನ ಹಾರಾಟ ರದ್ದು ನವದೆಹಲಿ: ಸೌದಿ ಅರೇಬಿಯಾದಲ್ಲಿನ ಪ್ರಸ್ತುತ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಇಂಡಿಗೋ…
ಶಬರಿಮಲೆಯಲ್ಲಿ ಕ್ಯೂ ನಿಲ್ಲುವ ಅಗತ್ಯವಿಲ್ಲ : ಇನ್ಮುಂದೆ ಸ್ವಯಂಚಾಲಿತ ಯಂತ್ರದ ಮೂಲಕ ಸಿಗಲಿದೆ ಅರವಣ, ಅಪ್ಪಂ ಪ್ರಸಾದ ಶಬರಿಮಲೆ: ಅಯ್ಯಪ್ಪ…